Chikkaballapur News: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಪುಟ್ಟಣ್ಣಯ್ಯ ಬಣದ ವತಿಯಿಂದ 28ರಂದು ಮಂಚೇನಹಳ್ಳಿ ಬಂದ್ ಗೆ ಕರೆ
ಸೋಮವಾರ ನಡೆಯಲಿರುವ ಮಂಚೇನಹಳ್ಳಿ ಬಂದ್ ಕರೆಗೆ ಸ್ವಯಂ ಪ್ರೇರಿತವಾಗಿ ಭಾಗವಹಿಸಲು ಬರುತ್ತಿರುವ ಎಲ್ಲಾ ಸಂಘ-ಸಂಸ್ಥೆಗಳ ಮುಖಂಡರು ಕಾರ್ಯಕರ್ತರು, ಮಂಚೇನಹಳ್ಳಿ ಭಾಗದ ನಾಗರಿಕರಿಗೆ ಧನ್ಯವಾದಗಳು ಅರ್ಪಿಸುತ್ತೇನೆ ಎಂದ ಅವರು ಶಾಂತಿಯುತವಾಗಿ ನಡೆಸುವ ಬಂದ್ ಹತ್ತಿಕ್ಕುವ ಕೆಲಸವನ್ನು ಜಿಲ್ಲಾಡಳಿತ ಪೊಲೀಸರು ಮಾಡಬಾರದು ಎಂದು ಎಚ್ಚರಿಸಿದರು


ಚಿಕ್ಕಬಳ್ಳಾಪುರ: ಮಂಚೇನಹಳ್ಳಿ ಶೂಟ್ ಔಟ್ ಪ್ರಕರಣ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಪುಟ್ಟಣ್ಣಯ್ಯ ಬಣದ ವತಿಯಿಂದ 28ರಂದು ಮಂಚೇನಹಳ್ಳಿ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶಕ್ಕೆ ಅನ್ನ ಕೊಡುವ ರೈತರ ಮೇಲೆ ಭೂ ಮಾಫಿಯಾಗಳು ಗಣಿ ಮಾಫಿಯಾಗಳು ದಾಳಿ ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದರು .
ಸೋಮವಾರ ನಡೆಯಲಿರುವ ಮಂಚೇನಹಳ್ಳಿ ಬಂದ್ ಕರೆಗೆ ಸ್ವಯಂ ಪ್ರೇರಿತವಾಗಿ ಭಾಗವಹಿಸಲು ಬರುತ್ತಿರುವ ಎಲ್ಲಾ ಸಂಘ-ಸಂಸ್ಥೆಗಳ ಮುಖಂಡರು ಕಾರ್ಯಕರ್ತರು, ಮಂಚೇನಹಳ್ಳಿ ಭಾಗದ ನಾಗರಿಕರಿಗೆ ಧನ್ಯವಾದಗಳು ಅರ್ಪಿಸುತ್ತೇನೆ ಎಂದ ಅವರು ಶಾಂತಿಯುತವಾಗಿ ನಡೆಸುವ ಬಂದ್ ಹತ್ತಿಕ್ಕುವ ಕೆಲಸವನ್ನು ಜಿಲ್ಲಾಡಳಿತ ಪೊಲೀಸರು ಮಾಡಬಾರದು ಎಂದು ಎಚ್ಚರಿಸಿದರು.
ಇದನ್ನೂಓದಿ:Chikkaballapur(Chinthamani) News: ಮರುಗಮಲ್ಲ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಗುರುವಂದನಾ ಕಾರ್ಯಕ್ರಮ
ಜಿಲ್ಲೆಯ ಇತಿಹಾಸದಲ್ಲಿ ಎಂದೂ ಕಂಡು ಕೇಳರಿಯದ ರೀತಿಯಲ್ಲಿ ಮಂಚೇನಹಳ್ಳಿ ತಾಲೂಕಿನ ಕನಗಾನ ಕೊಪ್ಪ ಗ್ರಾಮದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸಕಲೇಶ್ ಎಂಬುವವರಿಂದ ಯುವ ರೈತ ರವಿಯವರ ಮೇಲೆ ಮುಂದಿನ ದಾಳಿ ನಡೆದಿದೆ. ಇದನ್ನು ಪುಟ್ಟಣ್ಣಯ್ಯ ಬಣದ ರೈತ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದರು
ಮಂಚೇನಹಳ್ಳಿಯ ಪ್ರತಿಭಟನೆಯಲ್ಲಿ ರಾಜ್ಯ ಮುಖಂಡರಾದ ದರ್ಶನ್ ಪುಟ್ಟಣ್ಣಯ್ಯ ಕೊಡಗ ಲಪುರ ನಾಗೇಂದ್ರ , ಚಾಮರಸ ಮಾಲಿ ಪಾಟೀಲ್, ಚಿಕ್ಕಿ ನಂಜುಂಡಸ್ವಾಮಿ ಇನ್ನಿತರ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಆದ್ದರಿಂದ ಜಿಲ್ಲೆಯ ಸಮಸ್ತ ರೈತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಕೆಲಸ ಮಾಡಬೇಕಾಗಿದೆ ಎಂದರು.
ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಹಾವಳಿ ಮಿತಿ ಮೀರಿದೆ. ಇವುಗಳ ಮಾಲೀಕ ರಿಂದ ಭವಿಷ್ಯದಲ್ಲಿ ರೈತರ ಮೇಲೆ ನಡೆಯುವ ದಾಳಿಯನ್ನು ತಪ್ಪಿಸಬೇಕಾದರೆ ರೈತರು ಒಗ್ಗಟ್ಟನ್ನು ಪ್ರದರ್ಶನ ಮಾಡ ಬೇಕಾಗಿದೆ. ರೈತರ ಮೇಲೆ ಗುಂಡಿನ ದಾಳಿ ನಡೆಸಿರುವ ಆರೋಪಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಭವಿಷ್ಯದಲ್ಲಿ ಯಾರೂ ಕೂಡ ಈ ತರದ ಕೃತ್ಯಕ್ಕೆ ಮುಂದಾಗಬಾರದು ಎಂಬ ಎಚ್ಚರಿಕೆಯನ್ನು ಜಿಲ್ಲಾಡಳಿತ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರವಿಪ್ರಕಾಶ್ ಮತ್ತಿತರರು ಇದ್ದರು