ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

CPM: ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ತಾವು ರೈತರಪರ ಸರ್ಕಾರ, ರೈತರನ್ನು ಉದ್ದಾರ ಮಾಡುತ್ತೇವೆ ಎಂಬೆಲ್ಲಾ ಸುಳ್ಳು ಹೇಳಿಕೆ ಗಳನ್ನು ನೀಡಿ ಅಧಿಕಾರಕ್ಕೆ ಬಂದ ಎನ್.ಡಿ.ಎ ನೇತೃತ್ವದ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ ದೇಶದ ಜನರನ್ನು ಬಡತನದ ಸಂಕಷ್ಟಕ್ಕೆ ದೂಡುತ್ತಿದೆ. ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ಡೀಸೆಲ್ ದರ ಏರಿಕೆ ಆಗುತ್ತಲೇ ಇದೆ.

ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಹಾಗೂ ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. -

Profile
Ashok Nayak Jun 1, 2026 9:55 PM

ಗುಡಿಬಂಡೆ: ಪೆಟ್ರೋಲ್(Petrol), ಡೀಸೆಲ್(Diesel) ಹಾಗೂ ರಸಗೊಬ್ಬರ(Fertilizer)ಗಳ ಬೆಲೆ ಏರಿಕೆ ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಬೆಲೆ ಏರಿಕೆ ನಿಯಂತ್ರಣ ಮಾಡುವಂತೆ ಒತ್ತಾಯಿಸಿ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ, ಸಿಪಿಎಂ ಪಕ್ಷ(CPM Party)ದ ಜಿಲ್ಲಾ ಸಮಿತಿ ಸದಸ್ಯ ಜಯರಾಮರೆಡ್ಡಿ ಮಾತನಾಡಿ, ತಾವು ರೈತರಪರ ಸರ್ಕಾರ, ರೈತರನ್ನು ಉದ್ದಾರ ಮಾಡುತ್ತೇವೆ ಎಂಬೆಲ್ಲಾ ಸುಳ್ಳು ಹೇಳಿಕೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಎನ್.ಡಿ.ಎ ನೇತೃತ್ವದ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ ದೇಶದ ಜನರನ್ನು ಬಡತನದ ಸಂಕಷ್ಟಕ್ಕೆ ದೂಡುತ್ತಿದೆ. ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ಡೀಸೆಲ್ ದರ ಏರಿಕೆ ಆಗುತ್ತಲೇ ಇದೆ. ಇದರ ಜೊತೆಗೆ ರೈತರಿಗೆ ಬೇಕಾದ ರಸಗೊಬ್ಬರಗಳ ಬೆಲೆ ಸಹ ಏರಿಕೆ ಯಾಗಿದೆ. ಇದರಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ರೈತರು ಸಾಲಗಾರ ರಾಗುತ್ತಿದ್ದಾರೆ. ಕೂಡಲೇ ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗು ವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ: Prof R G Hegde Column: ಒಳ್ಳೆಯ ರಾಜಕೀಯಕ್ಕಾಗಿ ಜನರನ್ನು ಕಟ್ಟಲು ಸಾಧ್ಯವಿದೆಯೆ ?

ಬಳಿಕ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಶ್ರೀನಿವಾಸ ಮಾತನಾಡಿ, ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ದಿನನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಸಹ ಏರಿಕೆಯಾಗುತ್ತಿದೆ. ಇದರಿಂದ ಕಡಿಮೆ ಸಂಬಳ ಪಡೆದು ಜೀವನ ಸಾಗಿಸುತ್ತಿರುವ ಬಡಜನರ ಪಾಡು ಹೇಳತೀರದ್ದಾಗಿದೆ. ಆದರೆ ಸರ್ಕಾರಕ್ಕೆ ಮಾತ್ರ ಇದೇನೂ ಕಾಣದ ರೀತಿಯಾಗಿ ಜಾಣ ಕುರುಡು ಪ್ರದರ್ಶನ ಮಾಡುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಸಂಘಟನೆಯ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಸರ್ಕಾರ ಕೂಡಲೇ ಬೆಲೆ ಏರಿಕೆ ನಿಯಂತ್ರಣ ಮಾಡದೇ ಇದ್ದರೇ ಜನರೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ ಎಂದರು.
ಈ ಸಮಯದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಆದಿನಾರಾಯಣಸ್ವಾಮಿ, ಶಿವಪ್ಪ, ರಮಣ ಸೇರಿದಂತೆ ಹಲವರು ಹಾಜರಿದ್ದರು.