ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

MP Dr.K.Sudhakar: ಕೆ.ಸಿ.ವ್ಯಾಲಿ, ಎಚ್‌.ಎನ್.ವ್ಯಾಲಿ 3ನೇ ಹಂತದ ಸಂಸ್ಕರಣೆ, ರಾಜ್ಯ ಬಜೆಟ್‌ನಲ್ಲಿ ಯೋಜನೆ ಘೋಷಣೆ ಮಾಡಿ: ಸಂಸದ ಡಾ.ಕೆ.ಸುಧಾಕರ್ ಆಗ್ರಹ

ಹೆಚ್.ಎನ್.ವ್ಯಾಲಿ ಮೂರನೇ ಹಂತದ ಸಂಸ್ಕರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ತುರ್ತಾಗಿ ಕ್ರಮ ವಹಿಸಬೇಕಿದೆ. ಸುಮಾರು 70-80 ಲಕ್ಷ ಜನರು ಈ ನೀರನ್ನು ಬಳಸುತ್ತಿದ್ದಾರೆ. ಇಲ್ಲಿನ ಶಾಸಕರು ಹಾಗೂ ಉಸ್ತುವಾರಿ ಸಚಿವರು ಈ ಬಗ್ಗೆ ಹಿಂದೆ ಮಾತಾಡುತ್ತಿದ್ದರು. ಚುನಾ ಯಿತ ಪ್ರತಿನಿಧಿಗಳಿಗೆ ಕನಿಷ್ಠ ಬದ್ಧತೆ ಇರಬೇಕಾಗುತ್ತದೆ. ಆದ್ದರಿಂದ ಈ ಯೋಜನೆಯನ್ನು ಜಾರಿ ಮಾಡಬೇಕು

ಚಿಕ್ಕಬಳ್ಳಾಪುರ: ಎಚ್‌ಎನ್ ವ್ಯಾಲಿ(HN Valley) ಹಾಗೂ ಕೆಸಿ ವ್ಯಾಲಿ(KC Valley)ಯಿಂದ ಬರುವ ನೀರನ್ನು ಹೆಚ್ಚು ಶುದ್ಧ ಮಾಡಲು 3ನೇ ಹಂತದ ಸಂಸ್ಕರಣೆ ಯೋಜನೆ ಜಾರಿ ಮಾಡದೇ ಇದ್ದಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಬೇಕಾಗುತ್ತದೆ ಎಂದು ಸಂಸದ ಡಾ.ಕೆ.ಸುಧಾಕರ್(MP Dr.K.Sudhakar) ಹೇಳಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದಲ್ಲಿ ನಡೆದ ಕೇಂದ್ರ ಸರಕಾರ ಪುರಸ್ಕೃತ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹೆಚ್.ಎನ್.ವ್ಯಾಲಿ ಮೂರನೇ ಹಂತದ ಸಂಸ್ಕರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ತುರ್ತಾಗಿ ಕ್ರಮ ವಹಿಸಬೇಕಿದೆ. ಸುಮಾರು 70-80 ಲಕ್ಷ ಜನರು ಈ ನೀರನ್ನು ಬಳಸು ತ್ತಿದ್ದಾರೆ. ಇಲ್ಲಿನ ಶಾಸಕರು ಹಾಗೂ ಉಸ್ತುವಾರಿ ಸಚಿವರು ಈ ಬಗ್ಗೆ ಹಿಂದೆ ಮಾತಾಡು ತ್ತಿದ್ದರು. ಚುನಾಯಿತ ಪ್ರತಿನಿಧಿಗಳಿಗೆ ಕನಿಷ್ಠ ಬದ್ಧತೆ ಇರಬೇಕಾಗುತ್ತದೆ. ಆದ್ದರಿಂದ ಈ ಯೋಜನೆಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: MP Dr. K. Sudhakar: ಕಾಂಗ್ರೆಸ್‌ನಿಂದ ನರೇಗಾ ಬಚಾವೋ ಅಲ್ಲ ಕರ್ನಾಟಕ ಬಚಾವೋ" ಆಂದೋಲನದ ಅಗತ್ಯ ಇದೆ : ಸಂಸದ ಡಾ.ಕೆ.ಸುಧಾಕರ್

ಅಭಿನಂದನೆ ಸಲ್ಲಿಸುತ್ತೇನೆ

ಹೆಚ್.ಎನ್.ವ್ಯಾಲಿ 2ನೇ ಹಂತದಲ್ಲಿ ಸಂಸ್ಕರಣೆಯಾಗುವ ನೀರು ಕುಡಿಯಲು ಯೋಗ್ಯವಲ್ಲ ಎಂದು ವಿಜ್ಞಾನಿಗಳೇ ಹೇಳಿದ್ದಾರೆ. ಯಾವುದೇ ದೇಶದಲ್ಲಿ ಎರಡನೇ ಹಂತದಲ್ಲಿ ಸಂಸ್ಕರಣೆ ಯಾಗುವ ನೀರನ್ನು ಕುಡಿಯಲು ಅಥವಾ ಕೃಷಿಗೆ ಬಳಸುವುದಿಲ್ಲ. ಬಿಜೆಪಿ ಸರ್ಕಾರವಿದ್ದಾ ಗಲೇ ಮೂರನೇ ಹಂತದ ಶುದ್ಧೀಕರಣ ಯೋಜನೆ ಘೋಷಣೆಯಾಗಿತ್ತು. ನನಗೆ ಬದ್ಧತೆ ಇದ್ದಿದ್ದರಿಂದಲೇ ನಾನು ಆ ಯೋಜನೆ ಬಜೆಟ್‌ನಲ್ಲಿ ಬರುವಂತೆ ಮಾಡಿದ್ದೆ. ಈಗ ಕಾಂಗ್ರೆಸ್ ಸರ್ಕಾರ ಅದನ್ನು ಜಾರಿ ಮಾಡಿದರೆ ಅಭಿನಂದಿಸುತ್ತೇನೆ ಎಂದರು.

ಮುಖ್ಯಮಂತ್ರಿಳಿಗೆ ಶುಭಾಶಯ
17ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭಾಶಯ ಕೋರುತ್ತೇನೆ. ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎಂದು ಅವರು ಅನ್ನಿಸಿಕೊಳ್ಳುವುದು ಬೇಡ. ಸಾಲವನ್ನು ಕಡಿಮೆ ಮಾಡಿ ಜನರ ಮೇಲಿನ ಆರ್ಥಿಕ ಹೊರೆ ಯನ್ನು ಇಳಿಸಬೇಕು. ಆರ್‌ಬಿಐ ಹೇಳಿರುವ ಪ್ರಕಾರ, ರಾಜ್ಯದ ಸಾಲ ಆರ್ಥಿಕ ಶಿಸ್ತನ್ನು ಮೀರಲಿದೆ. ಆದರೆ ಇದನ್ನು ರಾಜ್ಯ ಸರಕಾರ ಅಲ್ಲಗಳೆದು ಸಮರ್ಥಿಸಿಕೊಳ್ಳುವುದು ವಿತಂಡ ವಾದವಾಗುತ್ತದೆ. ಕರ್ನಾಟಕ ಇಂದು ಆರ್ಥಿಕ ಅಶಿಸ್ತಿನಿಂದ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದೇ ಪ್ರಮಾಣದಲ್ಲಿ ಸಾಲ ಮಾಡಿದರೆ ಮುಂದೆ ಬಡ್ಡಿ ಕಟ್ಟಲು ಕೂಡ ಹಣ ಇರುವುದಿಲ್ಲ. ಅಧಿಕಾರಿಗಳು ಹಾಗೂ ನೌಕರರಿಗೂ ಸಂಬಳ ಕೊಡುವುದು ಕಷ್ಟವಾಗುತ್ತದೆ. ಈಗಾಗಲೇ ಅಭಿವೃದ್ಧಿ ಕುಂಠಿತವಾಗಿದೆ ಎಂದರು.

ಜಲಜೀವನ್ ಆಸರೆ
ಜಲಜೀವನ್ ಮಿಷನ್ ಯೋಜನೆಯಡಿ 800ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಆರಂಭ ವಾಗಿದೆ. 25 ಗ್ರಾಮಗಳಲ್ಲಿ ಪರಿಶೀಲನೆ ನಡೆದಿದ್ದು, 22 ಕಡೆ ಕಾಮಗಾರಿ ಪೂರ್ಣಗೊಂಡಿದೆ. ಒಟ್ಟಾರೆಯಾಗಿ 583 ಓವರ್‌ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, 310 ಕಡೆ ಕಾಮಗಾರಿ ಪ್ರಗತಿಯಲ್ಲಿದೆ. 22 ಕಡೆ ಇನ್ನೂ ಆರಂಭವಾಗಬೇಕಿದೆ. ಕೆಲವೆಡೆ ಅನುದಾನದ ಸಮಸ್ಯೆ, ಟೆಂಡರ್ ವಿಳಂಬವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಹಾಗೂ ಕಾಮಗಾರಿ ವಿಳಂಬವಾದರೆ ಗುತ್ತಿಗೆ ದಾರರಿಗೆ ಎಚ್ಚರಿಕೆ ನೀಡಬೇಕು. ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಂಸದ ಡಾ.ಕೆ.ಸುಧಾಕರ್ ಸಭೆಗೆ ಸೂಚಿಸಿದರು.

ದಶಪಥಕ್ಕೆ ಅನುಮೋದನೆ !!
ಕೇಂದ್ರ ಸರ್ಕಾರದಿಂದ ಕ್ವಿಂಟಾಲ್ ರಾಗಿಗೆ 4886 ರೂ.ಬೆಂಬಲ ಬೆಲೆ ನೀಡಲಾಗಿದೆ. ಯುಪಿಎ ಸರ್ಕಾರದಲ್ಲಿ ಇದಕ್ಕೆ 1500 ರೂ. ಇತ್ತು. ಇದೇ ರೀತಿ ಹಲವಾರು ಬೆಳೆಗಳಿಗೆ ಬೆಂಬಲ ಬೆಲೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬೆಂಗಳೂರಿನ ದೇವನಹಳ್ಳಿ ಯಿಂದ ಆಂಧ್ರದ ಗಡಿವರೆಗೆ 2500 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ 6 ಪಥದ ರಸ್ತೆ ನಿರ್ಮಾಣವಾಗಲಿದೆ. ಈಗ ಇರುವ ನಾಲ್ಕು ಪಥ ಸೇರಿ ಒಟ್ಟು ಹತ್ತು ಪಥದ ರಸ್ತೆಯಾಗಲಿದೆ. ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಭೂ ಸ್ವಾಧೀನದ ಯಾವುದೇ ಸಮಸ್ಯೆ ಇಲ್ಲ. ರಾಷ್ಟ್ರೀಯ ಆರೋಗ್ಯ ಮಿಷನ್‌ನಡಿ, 65 ಲಕ್ಷ ರೂ. ವೆಚ್ಚದಲ್ಲಿ ಆಯು ಷ್ಮಾನ್ ಆರೋಗ್ಯ ಮಂದಿರ ನಿರ್ಮಾಣವಾಗಲಿದೆ ಎಂದು ತಿಳಿಸಿದರು.