Nadaprabhu Kempegowda: ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ: ಅಧಿಕಾರಿಗಳ ಗೈರು ಹಾಜರಿಗೆ ಅಸಮಾಧಾನ
ಸಮುದಾಯದ ಮುಖಂಡ ಜೆ.ಎಸ್.ವೆಂಕಟಸ್ವಾಮಿ ಸಭೆಯಲ್ಲಿ ಮಾತನಾಡಿ, ಸರ್ಕಾರದ ವತಿಯಿಂದ ಆಯೋಜಿಸಲಾಗುವ ಮಹತ್ವದ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಗಳಿಗೆ ಕೆಲ ಅಧಿಕಾರಿಗಳು ಗೈರು ಹಾಜರಾಗುತ್ತಿರುವುದು ಸರಿಯಲ್ಲ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯವಾಗಿದ್ದು, ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಭಾಗವಹಿಸಬೇಕು ಎಂದು ಒತ್ತಾಯಿಸಿದರು.
ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಎಫ್.ಜಿ.ಹಳಕಟ್ಟಿ ಅವರ ಜಯಂತಿ ಆಚರಣೆ ಸಂಬಂಧ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಿಗೆ ಕೆಂಪೇಗೌಡ ಆಚರಣೆ ಸಮಿತಿಯ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು. -
ಶಿಡ್ಲಘಟ್ಟ : ನಾಡಪ್ರಭು ಕೆಂಪೇಗೌಡ (Nadaprabhu Kempegowda)ಹಾಗೂ ಡಾ.ಎಫ್.ಜಿ. ಹಳಕಟ್ಟಿ ಜಯಂತಿ ಆಚರಣೆ ಸಂಬಂಧ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಿಗೆ ಕೆಂಪೇಗೌಡ ಆಚರಣೆ ಸಮಿತಿಯ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಸಮುದಾಯದ ಮುಖಂಡ ಜೆ.ಎಸ್.ವೆಂಕಟಸ್ವಾಮಿ ಸಭೆಯಲ್ಲಿ ಮಾತನಾಡಿ, ಸರ್ಕಾರದ ವತಿಯಿಂದ ಆಯೋಜಿಸಲಾಗುವ ಮಹತ್ವದ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಗಳಿಗೆ ಕೆಲ ಅಧಿಕಾರಿಗಳು ಗೈರುಹಾಜರಾಗುತ್ತಿರುವುದು ಸರಿಯಲ್ಲ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆ ಗಳ ಸಮನ್ವಯ ಅಗತ್ಯವಾಗಿದ್ದು, ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಭಾಗವಹಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Chikkaballapur News: ಸಮಗ್ರ ಆರೋಗ್ಯ ಅಭಿಯಾನಕ್ಕೆ ಶೀಘ್ರ ಚಾಲನೆ: ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಕರೆ
ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಗಗನ ಸಿಂಧು, ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸುವುದು ಎಲ್ಲರ ಜವಾಬ್ದಾರಿಯಾಗಿದೆ. ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳ ಗಮನಕ್ಕೆ ವಿಷಯ ತರಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯ ಆಡಳಿತಗಾರರಾಗಿದ್ದು, ಡಾ.ಎಫ್.ಜಿ.ಹಳಕಟ್ಟಿ ಅವರು ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಚರಿಸುತ್ತಿದ್ದು, ಎಲ್ಲ ಇಲಾಖೆಗಳು ಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ನಗರಸಭೆ ಪೌರಾಯುಕ್ತೆ ಅಮೃತ ಜಿ., ಪಿಎಸ್‌ಐ ವೇಣುಗೋಪಾಲ್, ವಕ್ಕಲಿಗರ ಸಂಘದ ನಾರಾಯಣಸ್ವಾಮಿ, ವೆಂಕಟಸ್ವಾಮಿ, ಚಂದ್ರಪ್ಪ, ರಾಯಪಲ್ಲಿ ಅಶ್ವತ್, ಡಾ.ವೆಂಕಟೇಶ್ ಮೂರ್ತಿ, ಜಗದೀಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕೆಂಪೇಗೌಡ ಆಚರಣೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.