ಗೌರಿಬಿದನೂರು: ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಸ್ಥಾನದ ಚುನಾವಣೆಗೆ ಸ್ಪರ್ಧಿಸಲು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡ(MLA KH Puttaswamy Gowda)ರ ಕೆ.ಹೆಚ್.ಪಿ.ಬಣದ ಬೆಂಬಲಿತ ಅಭ್ಯರ್ಥಿಗಳು ಇಂದು ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ನಾಮಪತ್ರ ಸಲ್ಲಿಸಿದರು.
ತೊಂಡೇಭಾವಿ-ಮಂಚೇನಹಳ್ಳಿ ಕ್ಷೇತ್ರಕ್ಕೆ ಜೆ.ಕಾಂತರಾಜು, ಗೌರಿಬಿದನೂರು ಹಾಲು ಉತ್ಪಾದಕರ ನಿರ್ದೇಶಕರ ಸಾಮಾನ್ಯ ಕ್ಷೇತ್ರಕ್ಕೆ ಡಿ.ಎನ್.ವೆಂಕಟರೆಡ್ಡಿರವರು ಹಾಗೂ ಮಹಿಳಾ ಮೀಸಲು ಕ್ಷೇತ್ರಕ್ಕೆ ಬೊಮ್ಮಶೆಟ್ಟಹಳ್ಳಿಯ ಸುಧಾ ಅವರುಗಳು ನಗರದ ಸುಮಂಗಲಿ ಕಲ್ಯಾಣ ಮಂಟಪದಿಂದ ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರ ನೇತೃತ್ವದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಚಿಕ್ಕಬಳ್ಳಾಪುರಕ್ಕೆ ತೆರಳಿ ಅಪರ ಜಿಲ್ಲಾಧಿಕಾರಿ ಭಾಸ್ಕರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ: Gauribidanur News: ಡ್ರಗ್ಸ್ ನಿಯಂತ್ರಣಕ್ಕೆ ಪಂಚೇಂದ್ರಿಯಗಳ ನಿಯಂತ್ರಣ ಅವಶ್ಯಕ: ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್
ನಂತರ ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು ಮಾತನಾಡಿ, ನಮ್ಮ ಬಣದಿಂದ ಸ್ಪರ್ಧಿಸಿರವ ಜೆ.ಕಾಂತರಾಜು, ಡಿ.ಎನ್.ವೆಂಕಟರೆಡ್ಡಿ ಹಾಗೂ ಮಹಿಳಾ ಅಭ್ಯರ್ಥಿ ಸುಧಾ ಈ ಮೂರು ಮಂದಿ ನಮ್ಮ ಬಣದ ಅಭ್ಯರ್ಥಿಗಳು ನಿರ್ದೇಶಕರ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ನಮ್ಮ ಬಣದ ಮುಖಂಡರು ಹಾಗೂ ಕಾರ್ಯಕರ್ತರು ನಮ್ಮ ಬಣದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ,ಹಾಲು ಉತ್ಪಾದಕರ ಸಹಕಾರ ಕ್ಷೇತ್ರದಲ್ಲಿ ಹೊಸ ಬದಲಾವಣೆಯನ್ನು ತರುವ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸಲು ಒಂದಾಗಿ,ಒಟ್ಟಾಗಿ, ಒಗ್ಗಟ್ಟಿನಿಂದ ಕೈ ಜೋಡಿಸಿ ಕೆಲಸ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಆರ್.ಅಶೋಕ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರಾಮರೆಡ್ಡಿ,ನಗರಸಭೆ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ರಾಮಾಂಜಿನಮ್ಮ, ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರರೆಡ್ಡಿ, ಕೆಎಚ್ಪಿ ಫೌಂಡೇಶನ್ ನಿರ್ದೇಶಕ ಶ್ರೀನಿವಾಸ್ ಗೌಡ, ನಗರಸಭೆ ಮಾಜಿ ಸದಸ್ಯ ಕೆಎಸ್ ಅನಂತರಾಜು, ಮುಖಂಡರಾದ ಲಂಕಪ್ಪ, ಬೊಮ್ಮಣ್ಣ, ಸೊಸೈಟಿ ಕೃಷ್ಣಪ್ಪ, ಬೈಪಾಸ್ ನಾಗರಾಜ್, ವಕೀಲ ರಂಗರಾಜು, ವಿಜಯ್, ರಮೇಶ್, ಶ್ರೀನಾಥ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.