ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

K M Munegowda: ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷರಾಗಿ ಕೆ.ಎಂ.ಮುನೆಗೌಡ ನೇಮಕ

ಹಿರಿಯ ವಕೀಲ ಕೆ.ಎಂ. ಮುನೆಗೌಡ(K M Munegowda) ಅವರನ್ನು ರಾಷ್ಟ್ರೀಯ ಅಹಿಂದ ಸಂಘಟನೆ ಯ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಅವರು ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿ, ಅಹಿಂದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಹಕ್ಕುಗಳ ರಕ್ಷಣೆಗಾಗಿ ಸಂಘಟನೆಯ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

ಚಿಕ್ಕಬಳ್ಳಾಪುರ: ಹಿರಿಯ ವಕೀಲ ಕೆ.ಎಂ. ಮುನೆಗೌಡ(K M Munegowda) ಅವರನ್ನು ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 

ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಅವರು ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿ, ಅಹಿಂದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಹಕ್ಕುಗಳ ರಕ್ಷಣೆಗಾಗಿ ಸಂಘಟನೆಯ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: Chikkaballapur News: ನ.12ರಂದು ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಇತ್ತೀಚೆಗಷ್ಟೇ ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮುನೆಗೌಡ ಅವರಿಗೆ ಇದೀಗ ರಾಜ್ಯಮಟ್ಟದ ಮತ್ತೊಂದು ಮಹತ್ವದ ಜವಾಬ್ದಾರಿ ದೊರೆತಿದೆ.

ನೇಮಕಾತಿಗೆ ಪ್ರತಿಕ್ರಿಯಿಸಿದ ಮುನೆಗೌಡ, ಸಂಘಟನೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥ ವಾಗಿ ನಿಭಾಯಿಸುವುದರ ಜತೆಗೆ ಎಲ್ಲ ವರ್ಗಗಳ ಜನರ ಹಕ್ಕುಗಳು ಮತ್ತು ಹಿತಾಸಕ್ತಿಗಳ ರಕ್ಷಣೆಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.