ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

K M Suresh: ಕೆ.ಎಂ.ಸುರೇಶ್ ಗೆಲುವು: ಬಿಜೆಪಿ–ಜೆಡಿಎಸ್ ವಿಜಯೋತ್ಸವ

ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಮಾತನಾಡಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿರುವುದು ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಿದೆ. ಮೈತ್ರಿಕೂಟದ ಮೇಲೆ ವಿಶ್ವಾಸವಿಟ್ಟು ಕೆ.ಎಂ. ಸುರೇಶ್ ಅವರಿಗೆ ಬೆಂಬಲ ನೀಡಿದ ಪದವೀಧರ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ(BJP-JDS Alliance) ದ (ಎನ್‌ಡಿಎ) ಅಭ್ಯರ್ಥಿ ಕೆ.ಎಂ.ಸುರೇಶ್(K M Suresh) ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಕ್ಷೇತ್ರದ ಪ್ರಬುದ್ಧ ಮತದಾರರು, ವಿದ್ಯಾವಂತರು ಮತ್ತು ಪದವೀಧರರು ಅಭ್ಯರ್ಥಿ ಕೆ.ಎಂ. ಸುರೇಶ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಹೆಚ್ಚಿನ ಅಂತರದ ಗೆಲುವಿಗೆ ಕಾರಣರಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಗೆಲುವಿಗೆ ಸಹಕರಿಸಿದ್ದು, ಎಲ್ಲ ಮತದಾರರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: K M Suresh: ಬಿಜೆಪಿ–ಜೆಡಿಎಸ್ ಮುಖಂಡರ ಸಭೆ; ಪದವೀಧರ ಮತದಾರರನ್ನು ಸಂಪರ್ಕಿಸಿ ಬೆಂಬಲ ಕ್ರೋಡೀಕರಿಸಲು ಕರೆ

ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಮಾತನಾಡಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿರುವುದು ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಿದೆ. ಮೈತ್ರಿಕೂಟದ ಮೇಲೆ ವಿಶ್ವಾಸವಿಟ್ಟು ಕೆ.ಎಂ. ಸುರೇಶ್ ಅವರಿಗೆ ಬೆಂಬಲ ನೀಡಿದ ಪದವೀಧರ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿಯೂ ಎರಡೂ ಪಕ್ಷಗಳ ಕಾರ್ಯಕರ್ತರು ಸಮನ್ವಯದಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ವಿಜಯೋತ್ಸವದಲ್ಲಿ ಚಿಮುಲ್(CHIMUL) ನಿರ್ದೇಶಕ ಹಾಗೂ ಹಿರಿಯ ಮುಖಂಡ ಕೆ.ವಿ. ನಾಗರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಎಸ್.ಮುರುಳೀಧರ್, ಕೊಂಡೇನಹಳ್ಳಿ ಮುರುಳಿ, ಮಧು ಸೂರ್ಯನಾರಾಯಣ ರೆಡ್ಡಿ, ಲಕ್ಷ್ಮೀನಾರಾಯಣ ಗುಪ್ತ, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಎನ್. ವೆಂಕಟೇಶ್, ಆರ್.ಎನ್. ಅಶೋಕ್, ಲಕ್ಷ್ಮಿಪತಿ, ಮಾರ್ಕೆಟ್ ಮೋಹನ್, ಆನಂದ್ ಗೌಡ, ಪ್ರಭಾಕರ್ ರೆಡ್ಡಿ, ತೇಜೇಂದ್ರ ಪಾಪು, ಗಂಗರೆಡ್ಡಿ, ವೇಣು ಮಾಧವ್ ಪಾಲ್ಗೊಂಡಿದ್ದರು.

ಜೆಡಿಎಸ್ ಮುಖಂಡರಾದ ಮಂಜುನಾಥ್, ಜಕ್ಕಲ ಮಡಗು ಲಕ್ಷ್ಮೀನರಸಪ್ಪ, ಮಧುಚಂದ್ರ, ಸಿ.ಬಿ. ಕಿರಣ್, ಲೋಕೇಶ್, ಸೊಪ್ಪಳ್ಳಿ ರಾಮಕೃಷ್ಣ ಸೇರಿದಂತೆ ಮಹಿಳಾ ಮುಖಂಡರಾದ ಸುಮಿತ್ರ, ಅಮೃತ, ಶಾಂತ ಶಿವರಾಂ, ಯುವ ಮುಖಂಡರಾದ ಕಂದವಾರ ಅನಿಲ್, ವರುಣ್ ಗೌಡ, ಜಯಕೃಷ್ಣ, ಮನೋಜ್ ಹಾಗೂ ಎರಡೂ ಪಕ್ಷಗಳ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.