ಗೌರಿಬಿದನೂರು: ಕೆಪಿಎಸ್ಸಿ ಪರೀಕ್ಷಾ ಅಕ್ರ(KPSC Examinatiion Scandal)ಗಳ ಆರೋಪಗಳ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾ ಲಯದ (ಇ.ಡಿ.) ಅಧಿಕಾರಿಗಳು ರಾಜ್ಯದ ವಿವಿಧೆಡೆ ತನಿಖೆ ನಡೆಸುತ್ತಿರುವ ಬೆನ್ನಲ್ಲೇ, ಗೌರಿಬಿದನೂರು ನಗರದ ಕರೆಕಲ್ಲಹಳ್ಳಿಯ ನಿವಾಸಿ ರಾಮಕೃಷ್ಣಪ್ಪ ಅವರ ಮನೆ ಮೇಲೂ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Gauribidanur News: ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಬೆಳೆಸಿಕೊಳ್ಳಿ
ಕೆಪಿಎಸ್ಸಿ ಪರೀಕ್ಷೆಯಲ್ಲಿ ರಾಮಕೃಷ್ಣಪ್ಪ ಅವರ ಪುತ್ರ ಲೋಕೇಶ್ ಅವರು ರಾಜ್ಯಕ್ಕೆ 27ನೇ ಶ್ರೇಣಿ ಪಡೆದಿರುವ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ ಸುಮಾರು 7 ಗಂಟೆಗೆ ಮನೆಗೆ ಆಗಮಿಸಿದ ಇ.ಡಿ. ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿ ಗಳನ್ನು ಪರಿಶೀಲಿಸಿದ್ದು, ಸತತ ಏಳೆಂಟು ಗಂಟೆಗಳಿಗೂ ಹೆಚ್ಚು ಕಾಲ ತನಿಖೆ ಮುಂದುವರಿದಿದೆ.
ಅಧಿಕಾರಿಗಳ ಪರಿಶೀಲನೆ ವೇಳೆ ಯಾವೆಲ್ಲ ದಾಖಲೆಗಳು ಲಭ್ಯವಾಗಿವೆ ಹಾಗೂ ತನಿಖೆಯಲ್ಲಿ ಏನೆಲ್ಲ ಮಾಹಿತಿ ಸಂಗ್ರಹಿಸಲಾಗಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ದಾಳಿ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು.