K.R. Shobhita assumes charge: ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಪದಗ್ರಹಣ
ಆಡಳಿತಾತ್ಮಕ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಶೋಭಿತಾ ಅವರು ಈ ಹಿಂದೆ ಕೋಲಾರ ಹಾಗೂ ಮುಳಬಾಗಿಲು ತಾಲೂಕುಗಳಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕಂದಾಯ ಇಲಾಖೆಯ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿರುವ ಅವರು, ಇದೀಗ ಚಿಕ್ಕಬಳ್ಳಾಪುರ ಉಪವಿಭಾಗದ ಆಡಳಿತದ ಹೊಣೆಗಾರಿಕೆ ವಹಿಸಿಕೊಂಡಿದ್ದಾರೆ.
-
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಶ್ವಿನ್ ಅವರನ್ನು ಗ್ರೇಟರ್ ಬೆಂಗಳೂರು ಸಹಾಯಕ ಭೂಸ್ವಾಧೀನ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಕೆ.ಆರ್. ಶೋಭಿತಾ ಅವರು ಈ ಹಿಂದೆ ಬೆಂಗಳೂರು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ (ಎಂಎಸ್‌ಐಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡು ಅಧಿಕಾರ ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ: Chikkaballapur (Chinthamani) News: ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ
ಆಡಳಿತಾತ್ಮಕ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಶೋಭಿತಾ ಅವರು ಈ ಹಿಂದೆ ಕೋಲಾರ ಹಾಗೂ ಮುಳಬಾಗಿಲು ತಾಲೂಕುಗಳಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕಂದಾಯ ಇಲಾಖೆಯ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿರುವ ಅವರು, ಇದೀಗ ಚಿಕ್ಕಬಳ್ಳಾಪುರ ಉಪವಿಭಾಗದ ಆಡಳಿತದ ಹೊಣೆಗಾರಿಕೆ ವಹಿಸಿಕೊಂಡಿದ್ದಾರೆ.
ಅಶ್ವಿನ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಶೋಭಿತಾ ಅವರನ್ನು ನೇಮಿಸಲಾಗಿದ್ದು, ಉಪವಿಭಾಗದ ವ್ಯಾಪ್ತಿಯ ಕಂದಾಯ ಆಡಳಿತ, ಸಾರ್ವಜನಿಕರ ಅಹವಾಲುಗಳ ವಿಲೇವಾರಿ ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ಅವರು ನಿರ್ವಹಿಸಲಿದ್ದಾರೆ.