ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಮಾಜ ಸೇವೆಯ ಮೂಲಕ ಕೆ.ವಿ.ನವೀನ್ ಕಿರಣ್ 48ನೇ ಹುಟ್ಟುಹಬ್ಬ ಆಚರಣೆ: ರಕ್ತದಾನದಿಂದ ಸಾವಿರಾರು ಜೀವಗಳಿಗೆ ನೆರವು; ವಾರವಿಡೀ ಜನಪರ ಕಾರ್ಯಕ್ರಮ

ಕಳೆದ ಎರಡು ದಶಕಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಸಾವಿರಾರು ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ತುರ್ತು ಸಂದರ್ಭಗಳಲ್ಲಿ ಅನೇಕ ಜೀವಗಳ ರಕ್ಷಣೆಗೆ ನೆರವಾಗಿರುವ ಕೆ.ವಿ. ಹಾಗೂ ಪಂಚಗಿರಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಅವರ 48ನೇ ಹುಟ್ಟುಹಬ್ಬವನ್ನು ಈ ಬಾರಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಚಿಕ್ಕಬಳ್ಳಾಪುರ: ವೈಯಕ್ತಿಕ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವ ಮೂಲಕ ಶಿಕ್ಷಣ ಪ್ರೇಮಿ ಹಾಗೂ ರಕ್ತದಾನದ ಹರಿಕಾರ ಕೆ.ವಿ.ನವೀನ್ ಕಿರಣ್ ಅವರು ಮಾದರಿಯಾಗಿದ್ದಾರೆ.

ಕಳೆದ ಎರಡು ದಶಕಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಸಾವಿರಾರು ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ತುರ್ತು ಸಂದರ್ಭಗಳಲ್ಲಿ ಅನೇಕ ಜೀವಗಳ ರಕ್ಷಣೆಗೆ ನೆರವಾಗಿರುವ ಕೆ.ವಿ. ಹಾಗೂ ಪಂಚಗಿರಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಅವರ 48ನೇ ಹುಟ್ಟುಹಬ್ಬವನ್ನು ಈ ಬಾರಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹುಟ್ಟುಹಬ್ಬದ ಅಂಗವಾಗಿ ನಗರ ಸೇರಿದಂತೆ ವಿವಿಧೆಡೆ ಅನ್ನಸಂತರ್ಪಣೆ, ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಬಟ್ಟೆ ವಿತರಣೆ, ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ, ಆಟೋ ಚಾಲಕರಿಗೆ ಸಮವಸ್ತ್ರ ಹಾಗೂ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.

ನವೀನ್ ಕಿರಣ್ ಅವರು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸರ್ಕಾರಿ ಅನುದಾನಿತ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಬಲಮುರಿ ವೃತ್ತದಲ್ಲಿ ಉದ್ಯಮಿ ಬಿ. ಮಹೇಶ್ ಅವರ ವತಿಯಿಂದ ಆಯೋಜಿಸಿದ್ದ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡು ಕೇಕ್ ಕತ್ತರಿಸಿ ಅಭಿಮಾನಿಗಳು ಹಾಗೂ ಸ್ನೇಹಿತರಿಂದ ಶುಭಾಶಯ ಸ್ವೀಕರಿಸಿದರು. ಜೂನಿಯರ್ ಕಾಲೇಜು ಬಳಿಯ ಆಟೋ ನಿಲ್ದಾಣದಲ್ಲಿ ಚಾಲಕರಿಗೆ ಸಮವಸ್ತ್ರ ವಿತರಿಸಿದರು. ತ್ರಿಬಲ್ ಎಸ್. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಎಪಿಎಂಸಿ ಮಾರುಕಟ್ಟೆಯಲ್ಲಿ ಆಯೋಜಿಸಿದ್ದ ಅನ್ನಸಂತರ್ಪಣೆಗೆ ಚಾಲನೆ ನೀಡಿದರು.

ಇದನ್ನೂ ಓದಿ: Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿಯಾಗಿ ಮೂವರ ಸಾವು, ಟೈರ್‌ ಸ್ಫೋಟದಿಂದ ದುರಂತ!

ವಾರವಿಡೀ ಸಮಾಜ ಸೇವೆ

ನವೀನ್ ಕಿರಣ್ ಅವರ ಹುಟ್ಟುಹಬ್ಬದ ಅಂಗವಾಗಿ ಸಮಾನ ಮನಸ್ಕರ ಪರಿಸರ ಸಂರಕ್ಷಣಾ ವೇದಿಕೆಯ ವತಿಯಿಂದ ಒಂದು ವಾರದಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಗುಡಿಬಂಡೆ ಕೆರೆಯ ಮೀನುಗಾರ ಮಹಿಳೆಯರಿಗೆ ಸೀರೆ ವಿತರಣೆ, ಪೌರ ಕಾರ್ಮಿಕರಿಗೆ ಸನ್ಮಾನ, ಪೊಶೆಟ್ಟಹಳ್ಳಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ, ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ, ಚದಲಪುರದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಹಾಗೂ ಬಹುಮಾನ ವಿತರಣೆ, ಅಣಕನೂರು ಕಾಲೋನಿ ಕೂಲಿ ಕಾರ್ಮಿಕರಿಗೆ ಬಟ್ಟೆ ವಿತರಣೆ ಮತ್ತು ಪೆರೇಸಂದ್ರದಲ್ಲಿ ಮೆಕಾನಿಕ್‌ಗಳಿಗೆ ಟಿ-ಶರ್ಟ್ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ವಿ. ನವೀನ್ ಕಿರಣ್, ವೈಯಕ್ತಿಕವಾಗಿ ಹುಟ್ಟುಹಬ್ಬ ಆಚರಿಸಿ ಕೊಳ್ಳುವುದಕ್ಕಿಂತ ಸಮಾಜ ಸೇವೆಯ ಮೂಲಕ ಜನರಿಗೆ ನೆರವಾಗುವುದು ಹೆಚ್ಚಿನ ತೃಪ್ತಿ ನೀಡುತ್ತದೆ. ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಒಂದು ವಾರದಿಂದ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿದ ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುವು ದಾಗಿ ಹೇಳಿದರು.

ಕಾರ್ಯಕ್ರಮಗಳಲ್ಲಿ ಪ್ರಮುಖ ಮುಖಂಡರು, ಜನಪ್ರತಿನಿಧಿಗಳು, ಸ್ನೇಹಿತರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಪಾಲ್ಗೊಂಡು ನವೀನ್ ಕಿರಣ್ ಅವರಿಗೆ ಹಾರ ಹಾಕಿ, ಬೃಹತ್ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದರು.