ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shidlaghatta News: ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ಸಾವಿರಾರು ವರ್ಷಗಳ ಇತಿಹಾಸವಿರುವ ನಗರದ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಾರಂಭದಿಂದಲೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಿತು. ಅಯೋಧ್ಯಾನಗರ ಶಿವಾಚಾರ ವೈಶ್ಯನಗರ್ಥ ಮಂಡಳಿ ವತಿಯಿಂದ ಸೋಮವಾರ ಕಡೆಯ ಕಾರ್ತಿಕ ಮಾಸದ ಪ್ರಯುಕ್ತ ಲಕ್ಷ ದೀಪೋತ್ಸವ ನಡೆಯಿತು.

ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ಶ್ರೀ ನಾಗರೇಶ್ವರ ಸ್ವಾಮಿ ದೇವಾಲಯದಲ್ಲಿ ದೇವರ ಮೂಲ ವಿಗ್ರಹವನ್ನು ಹೂವಿಗಳಿಂದ ಅಲಂಕಾರ ಮಾಡಿರುವ ಚಿತ್ರ.

ಶಿಡ್ಲಘಟ್ಟ: ನಗರದ ಅಶೋಕ ರಸ್ತೆಯ ಹೂವಿನ ವೃತದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಲಕ್ಷ ದೀಪೋತ್ಸವ ನಡೆಯಿತು.

ಸಾವಿರಾರು ವರ್ಷಗಳ ಇತಿಹಾಸವಿರುವ ನಗರದ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಾರಂಭದಿAದಲೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಿತು.

ಇದನ್ನೂ ಓದಿ: Shidlaghatta News: ಮಕ್ಕಳ ಬೆಳವಣಿಗೆಯಲ್ಲಿ ಪಠ್ಯೇತರ ಚಟವಟಿಕೆಗಳ ಪ್ರಭಾವ ಅಧಿಕ : ಕಾಂಗ್ರೆಸ್ ಮುಖಂಡ ಬಿ.ವಿ ರಾಜೀವಗೌಡ

ಅಯೋಧ್ಯಾನಗರ ಶಿವಾಚಾರ ವೈಶ್ಯನಗರ್ಥ ಮಂಡಳಿ ವತಿಯಿಂದ ಸೋಮವಾರ ಕಡೆಯ ಕಾರ್ತಿಕ ಮಾಸದ ಪ್ರಯುಕ್ತ ಲಕ್ಷ ದೀಪೋತ್ಸವ ನಡೆಯಿತು. ಇದರ ಅಂಗವಾಗಿ ದೇವಾ ಲಯ ಹಾಗೂ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.

ಬೆಳಿಗ್ಗೆಯಿಂದ ಅಭಿಷೇಕ, ಹೋಮ, ಪಂಚಾಮೃತ, ತೀರ್ಥ ಪ್ರಸಾದ ವಿನಿಯೋಗ ನಡೆ ಯಿತು. ಸಂಜೆ ದೇವಾಲಯದಲ್ಲಿ ಒಂದು ಲಕ್ಷ ಮಣ್ಣಿನ ಹಣತೆ ಹಾಗೂ ವಿದ್ಯುತ್ ದೀಪ ಗಳಿಂದ ಕೂಡಿತ್ತು.ಸುತ್ತಮುತ್ತಲಿನ ಕಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ದೇವಾ ಲಯದಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸಿ ತಮ್ಮ ಹರಕೆ ಹಾಗೂ ಕೋರಿಕೆ ಸಲ್ಲಿಸಿದರು.