ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ನಿವೇಶನ ರಹಿತರಿಗೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕ: ಇಒ ಹೇಮಾವತಿ ಆರ್

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು. ಯಾವುದೇ ಮಧ್ಯವರ್ತಿ ಗಳ ಮಾತು ಕೇಳದೆ ನೇರವಾಗಿ ಕಚೇರಿಗೆ ಬಂದು ಮಾಹಿತಿ ಪಡೆದು ಅರ್ಜಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.

ನಿವೇಶನವಿಲ್ಲದ ಅರ್ಹ ಸಾರ್ವಜನಿಕರು ನಿವೇಶನ ಪಡೆಯಲು ಅರ್ಜಿ ಸಲ್ಲಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹೇಮಾವತಿ ಆರ್ ಮನವಿ ಮಾಡಿದರು.

ಶಿಡ್ಲಘಟ್ಟ: ನಿವೇಶನವಿಲ್ಲದ ಅರ್ಹ ಸಾರ್ವಜನಿಕರು ನಿವೇಶನ ಪಡೆಯಲು ಅರ್ಜಿ ಸಲ್ಲಿಸು ವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹೇಮಾವತಿ ಆರ್ ಮನವಿ ಮಾಡಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸುವ ಉದ್ದೇಶ ದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದ್ದು, ಅರ್ಹರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: Shidlaghatta News: ಮೇಲೂರು ಗ್ರಾಮದಲ್ಲಿ ಶ್ರೀ ವೀರಭದ್ರಸ್ವಾಮಿ ದೇವಾಲಯದ ವಾರ್ಷಿಕೋತ್ಸವ

ತಾಲೂಕಿನ ಗ್ರಾಮೀಣ ಹಾಗೂ ನಗರ ಭಾಗದ ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ತಾಲೂಕು ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದರು.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು. ಯಾವುದೇ ಮಧ್ಯವರ್ತಿ ಗಳ ಮಾತು ಕೇಳದೆ ನೇರವಾಗಿ ಕಚೇರಿಗೆ ಬಂದು ಮಾಹಿತಿ ಪಡೆದು ಅರ್ಜಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.

ಸರ್ಕಾರದ ಸೌಲಭ್ಯಗಳು ನಿಜವಾದ ಫಲಾನುಭವಿಗಳಿಗೆ ತಲುಪುವ ಉದ್ದೇಶದಿಂದ ಪಾರ ದರ್ಶಕವಾಗಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಹೇಮಾವತಿ.ಆರ್ ಹೇಳಿದರು.