ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Law Student Hospitalized: ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ವಿದ್ಯಾರ್ಥಿನಿ ಆಸ್ಪತ್ರೆ ಪಾಲು: ವಿದ್ಯಾರ್ಥಿಗಳಿಂದ ಬಾರೀ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಬಸ್ ಹರಿದು ನಾಲ್ಕನೇ ಸೆಮಿಸ್ಟರ್ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ಕೂಡಲೇ ಬಸ್ ಆಕೆಯ ಕಾಲಿನ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸು ವಂತಾದ ಘಟನೆ ಎಸ್‌ಜೆಸಿಐಟಿ ಕಾಲೇಜು ಮುಂಭಾಗ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ವಿದ್ಯಾರ್ಥಿನಿ ಆಸ್ಪತ್ರೆ ಪಾಲು

-

Profile
Ashok Nayak Apr 25, 2026 11:14 PM

ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್(KSRTC Bus)ಹರಿದು ನಾಲ್ಕನೇ ಸೆಮಿಸ್ಟರ್ ಕಾನೂನು (Law)ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ಕೂಡಲೇ ಬಸ್ ಆಕೆಯ ಕಾಲಿನ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುವಂತಾದ ಘಟನೆ ಎಸ್‌ಜೆಸಿಐಟಿ ಕಾಲೇಜು ಮುಂಭಾಗ ನಡೆದಿದೆ.

ನಗರ ಹೊರವಲಯದ ಎಸ್‌ಜೆಸಿಐಟಿ ಕಾಲೇಜು ಬಳಿ ಕೆಂಪೇಗೌಡ ಕಾನೂನು ಮಹಾ ವಿದ್ಯಾಲಯ ದ ವಿದ್ಯಾರ್ಥಿನಿ ಭಾನುಶ್ರೀ ಬಸ್ಸಿಗೆ ಕಾಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಬಂದ ಬೆಂಗಳೂರು-ಬಾಗೇಪಲ್ಲಿ ಬಸ್‌ನಲ್ಲಿ ಹತ್ತಲು ಹೋಗಿದ್ದ ಲಾ ಕಾಲೇಜು ವಿದ್ಯಾರ್ಥಿಗಳ ಗುಂಪಿನಲ್ಲಿದ್ದ ಭಾನುಶ್ರೀ ಆಯತಪ್ಪ ಕೆಳಗೆ ಬಿದ್ದ ಪರಿಣಾಮ ಆಕೆಯ ಕಾಲು ಮತ್ತು ಹೊಟ್ಟೆಯ ಮೇಲೆ ಬಸ್‌ನ ಚಕ್ರ ಹರಿದು ರಕ್ತಗಾಯಗಳಾಗಿವೆ.

ಇದನ್ನೂ ಓದಿ: Student Self Harming: ಪಿಯುಸಿ ಫಲಿತಾಂಶ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು, ತಾಯಿಯ ಮೇಲೇ ಶಂಕೆ

ಈ ಘಟನೆಯಿಂದ ಕೆರಳಿದ ಕಾಲೇಜು ವಿದ್ಯಾರ್ಥಿಗಗಳು ಶನಿವಾರ ಬಸ್‌ಸಂಚಾರ ತಡೆದು ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

protest

ಜೈನ್ ಮಿಷನ್ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ವಿದ್ಯಾರ್ಥಿಯ ಸ್ಥಿತಿಗೆ ಕಾರಣವಾದ ಕೆಎಸ್‌ಆರ್‌ಟಿಸಿ ವಿರುದ್ಧ ಬಂಡೆದ್ದ ವಿದ್ಯಾರ್ಥಿ ಸಮೂಹ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಪರಿಣಾಂ ಪೊಲೀಸರು, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪ್ರತಿಭಟನಾಕಾರರನ್ನು ಮನವೊಲಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪೊಲೀಸರು ಹರಸಾಹಸ ಪಡುವಂತಾಯಿತು.

ಕೆಂಪೇಗೌಡ ಕಾನೂನು ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಬಂದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಗಾಯಾಳುವಿನ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ವಾಪಸ್ಸು ಪಡೆಯಲಾಯಿತು.