ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chinthamani News: ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಮುಖಂಡ ವೇಣುಗೋಪಾಲ್ ಭಾಗಿ

ದೇವಸ್ಥಾನಗಳ ನಿಧಿ ದುರುಪಯೋಗದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ವೇಣುಗೋಪಾಲ್ ದೇವಸ್ಥಾನಗಳ ಹಣವನ್ನು ಯಾರೆಲ್ಲಾ ದುರುಪಯೋಗಪಡಿಸಿಕೊಂಡಿದ್ದಾರೋ ಅವರಿಂದ ಸಂಪೂರ್ಣ ಹಣ ವಸೂಲಿ ಮಾಡಬೇಕು. ಯಾವುದೇ ಕಾರಣಕ್ಕೂ ಯಾರನ್ನೂ ಬಿಡಬಾರದು. ಎಸ್‌ಐಟಿ ಮೂಲಕ ಸಮಗ್ರ ತನಿಖೆ ನಡೆಸಿ,ಮುಂದಿನ ದಿನಗಳಲ್ಲಿ ದೇವಸ್ಥಾನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು

ಚಿಂತಾಮಣಿ: ನಗರ ಮಂಡಲದ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ನೂತನ ಪದಾಧಿಕಾರಿಗಳ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿ ಗಳನ್ನು ಆಯ್ಕೆ ಮಾಡಲಾಯಿತು. ನಗರ ಅಧ್ಯಕ್ಷರಾದ ಬಿ.ಗೋವಿಂದರಾಜು ನೇತೃತ್ವದಲ್ಲಿ, ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಎಲ್ಲಾ ಸಮುದಾಯಗಳಿಗೂ ಸಮಾನ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: Chinthamani News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ವೇಣುಗೋಪಾಲ್ ಭಾಗವಹಿಸಿ ಮಾತನಾಡಿ, ಪಕ್ಷದ ಬಲವರ್ಧನೆಯಲ್ಲಿ ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಮುಂಬರುವ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಗಟ್ಟಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು,"ಎಂದು ಕರೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಸಾರ್ವಜನಿಕರ ವಿಶ್ವಾಸ ಗಳಿಸಬೇಕು ಎಂದು ನೂತನ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು. 

ತಾವು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದು 100% ಸತ್ಯ ಎಂದು ದೃಢಪಡಿಸಿದ ಅವರು, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ತಿಳಿಸಿದರು.

ದೇವಸ್ಥಾನಗಳ ನಿಧಿ ದುರುಪಯೋಗದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ವೇಣುಗೋಪಾಲ್ ದೇವಸ್ಥಾನಗಳ ಹಣವನ್ನು ಯಾರೆಲ್ಲಾ ದುರುಪಯೋಗಪಡಿಸಿಕೊಂಡಿದ್ದಾರೋ ಅವರಿಂದ ಸಂಪೂರ್ಣ ಹಣ ವಸೂಲಿ ಮಾಡಬೇಕು. ಯಾವುದೇ ಕಾರಣಕ್ಕೂ ಯಾರನ್ನೂ ಬಿಡಬಾರದು. ಎಸ್‌ಐಟಿ ಮೂಲಕ ಸಮಗ್ರ ತನಿಖೆ ನಡೆಸಿ,ಮುಂದಿನ ದಿನಗಳಲ್ಲಿ ದೇವಸ್ಥಾನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

cbpm3j

ಇದೇ ವೇಳೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಡಳಿತ ವೈಖರಿ ಶ್ಲಾಘಿಸಿದ ಅವರು ತಪ್ಪು ಮಾಡಿದವರ ಆಸ್ತಿಯನ್ನು ಹರಾಜು ಹಾಕಿಯಾದರೂ ಸಾರ್ವಜನಿಕರ ದುಡ್ಡನ್ನು ದೇವಸ್ಥಾನಕ್ಕೆ ಭರಿಸುವ ಕೆಲಸವಾಗಬೇಕು.ಅದು ಯಾರೇ ಆಗಿರಲಿ,ಬಿಜೆಪಿ ಅಥವಾ ಆರ್‌ಎಸ್‌ಎಸ್‌ನವರೇ ಆಗಿದ್ದರೂ ಸಹ ತಪ್ಪು ತಪ್ಪು,ಕಾನೂನು ಕ್ರಮ ಎದುರಿಸಲೇಬೇಕು ಎಂದು ಕಡಾಖಂಡಿತವಾಗಿ ಹೇಳಿದರು.

ಈ ಸಂದರ್ಭದಲ್ಲಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾಗಿ ಮನೋಹರ್, ಶಿವಕುಮಾರ್ ವಿ ಎಸ್, ಉಪಾಧ್ಯಕ್ಷರಾಗಿ ಮಂಗಳ ಗೌರಿ, ಉಮೇಶ್ ಚಂದ್ರ, ಶ್ರೀನಿವಾಸಲು, ಗೌತಮಿ, ಹರೀಶ್ ಎನ್,ಕಾಳಿ ಪ್ರಸಾದ್, ಹಾಗೂ ಕಾರ್ಯದರ್ಶಿಗಳಾಗಿ ವೆಂಕಟೇಶ್, ತನರಾಜ್, ಮಹೇಶ್, ಶಾಂತಕುಮಾರ್, ಮಂಜು, ಲಕ್ಷ್ಮೀನಾರಾಯಣ್ ಅವರನ್ನು ಆಯ್ಕೆ ಮಾಡಿದ್ದಲ್ಲದೆ ಯುವ ಮೋರ್ಚಾ ಅಧ್ಯಕ್ಷರಾಗಿ ಶ್ರೀನಿವಾಸ್ ಎಸ್,ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್,ಚಂದನ, ಸೇರಿದಂತೆ ಇನ್ನೂ ಹಲವು ಜನರಿಗೆ ವಿವಿಧ ಮೋರ್ಚಗಳಲ್ಲಿ ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಹೇಶ್ ಬೈ, ಗಾಜಲ ಶಿವ,ರಾಜೇಂದ್ರ ಬಾಬು ಸೇರಿದಂತೆ ಮತ್ತಿತರರು ಇದ್ದರು.