ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Phone-in program: ಆತಂಕ ತೊರೆಯಿರಿ, ಆತ್ಮವಿಶ್ವಾಸದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಿರಿ: ಜಿಲ್ಲಾಧಿಕಾರಿ ಜಿ ಪ್ರಭು ಅಭಯ

ಪರೀಕ್ಷೆ ಎಂದರೆ ಆತಂಕವಾಗುವುದು ಸಹಜ. ಪರಿಶ್ರಮ ಮತ್ತು ಗುರುಗಳ ಮಾರ್ಗ ದರ್ಶನದಲ್ಲಿ ಅಭ್ಯಾಸ ಮಾಡಿದ್ದಲ್ಲಿ ಹೆಚ್ಚಿನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಬಾಕಿ ಉಳಿದಿರುವ ಅವಧಿ ಯಲ್ಲಿ ಪರೀಕ್ಷಾ ಪೂರ್ವ ಸಿದ್ಧತೆ ಮಾಡಿಕೊಳ್ಳಿ. ಪುನರಾವರ್ತಿತ ಅಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ತಮ್ಮ ಪರಿಶ್ರಮಕ್ಕೆ ತಕ್ಕನಾದ ಫಲಿತಾಂಶ ಬಂದೇ ಬರಲಿದೆ

ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿರುವ ೧೫೦೨೧ ಫ್ರೆಶ್,೧೬೪೩ ಖಾಸಗಿ ಮತ್ತು ರಿಪೀಟರಸ್ ವಿದ್ಯಾರ್ಥಿಗಳು ಆತಂಕ ತೊರೆದು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಗೆಲುವು ನಿಮ್ಮದಾಗಲಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಚಿಕ್ಕಬಳ್ಳಾಪುರ: ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆ(SSLC exam) ಎದುರಿಸುತ್ತಿರುವ 15021 ಫ್ರೆಶ್, 1643 ಖಾಸಗಿ ಮತ್ತು ರಿಪೀಟರಸ್ ವಿದ್ಯಾರ್ಥಿಗಳು ಆತಂಕ ತೊರೆದು ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಗೆಲುವು ನಿಮ್ಮದಾಗಲಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕಚೇರಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ 2025-26ನೇ ಸಾಲಿನ ಮಾರ್ಚ್-ಏಪ್ರಿಲ್ ನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಕ್ಕೆ ವಿದ್ಯಾರ್ಥಿಗಳನ್ನು ಸಿದ್ಧಪಡಿ ಸುವ ಸಂಬಂಧ ಏರ್ಪಡಿಸಿದ್ದ ಫೋನ್-ಇನ್ ಕಾರ್ಯಕ್ರಮ(Phone-in program)ಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: SSLC Exam Fees 2025: ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;‌ SSLC ಪರೀಕ್ಷೆ-2 ಮತ್ತು 3ಕ್ಕೆ ಶುಲ್ಕ ವಿನಾಯಿತಿ ನೀಡಿದ ಸರ್ಕಾರ

ಪೋನ್ ಇನ್ ಕಾರ್ಯಕ್ರಮದಲ್ಲಿ 300 ವಿದ್ಯಾರ್ಥಿಗಳು ಭಾಗವಹಿಸಿದ್ದು ತಮಗಿರುವ ಸಮಸ್ಯೆಗಳನ್ನು ವಿಷಯ ತಜ್ಞರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಳನ್ನು ಕೇಳಿ ಪರಿಹಾರ ಕಂಡುಕೊಂಡಿದ್ದು ವಿಶೇಷವಾಗಿತ್ತು.

ಪರೀಕ್ಷೆ ಎಂದರೆ ಆತಂಕವಾಗುವುದು ಸಹಜ. ಪರಿಶ್ರಮ ಮತ್ತು ಗುರುಗಳ ಮಾರ್ಗ ದರ್ಶನದಲ್ಲಿ ಅಭ್ಯಾಸ ಮಾಡಿದ್ದಲ್ಲಿ ಹೆಚ್ಚಿನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಬಾಕಿ ಉಳಿದಿರುವ ಅವಧಿಯಲ್ಲಿ ಪರೀಕ್ಷಾ ಪೂರ್ವ ಸಿದ್ಧತೆ ಮಾಡಿಕೊಳ್ಳಿ. ಪುನರಾವರ್ತಿತ ಅಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ತಮ್ಮ ಪರಿಶ್ರಮಕ್ಕೆ ತಕ್ಕನಾದ ಫಲಿತಾಂಶ ಬಂದೇ ಬರಲಿದೆ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸವನ್ನು ಜಿಲ್ಲಾಧಿಕಾರಿ ಜಿ. ಪ್ರಭು ಮಾಡಿದರು.

10ನೇ ತರಗತಿಯ ಫಲಿತಾಂಶ ವೃದ್ಧಿಸಲು ಏನೆಲ್ಲ ಉಪಕ್ರಮಗಳನ್ನು ತೆಗೆದುಕೊಳ್ಳ ಬೇಕೋ ಆ ಎಲ್ಲವನ್ನು ವ್ಯವಸ್ಥಿತವಾಗಿ ಹಾಗೂ ಸಮರ್ಪಕವಾಗಿ ಈಗಾಗಲೇ ಜಿಲ್ಲಾಡಳಿತ ಕೈಗೊಂಡಿದೆ. ಅದರಂತೆ, ವಿದ್ಯಾರ್ಥಿಗಳು ಸಹ ಉತ್ತಮ ಸ್ಪಂದನೆ ಮಾಡಿದ್ದಾರೆ. ಕಲಿಕೆಯ ಪ್ರಗತಿ ಉತ್ತಮವಾಗಿದೆ ಎಂಬ ನಂಬಿಕೆಯಿದೆ. ೨೦೨೫ನೇ ವರ್ಷದ ಅಂತ್ಯದೊಳಗೆ ಪಠ್ಯ ಗಳನ್ನು ಪೂರ್ಣಗೊಳಿಸಿ ಮೌಲ್ಯಾಂಕನ ಪದ್ಧತಿಯನ್ನು (ಎಲ್.ಬಿ.ಎ) ಕಲಿಸಲಾಗಿದೆ ಎಂದರು.

cbpm12p

ಶಾಲಾ ಪ್ರಾರಂಭದ ಪೂರ್ವ ತಿಂಗಳಿನಿಂದಲೇ ಎಲ್ಲಾ ಪ್ರೌಢಶಾಲೆಗಳಲ್ಲಿಯೂ ಪಠ್ಯಾ ಧಾರಿತ ಮತ್ತು ನಂತರ ಒಂದು ಅವಧಿಯಲ್ಲಿ ವಿಶೇಷ ಕಲಿಕಾ ತರಗತಿಗಳನ್ನು ನಡೆಸ ಲಾಗಿದೆ. ರಜಾ ದಿನಗಳು ಹಾಗೂ ದಸರಾ ರಜೆಯ ಅವಧಿಯಲ್ಲಿಯೂ ವಿಶೇಷ ತರಗತಿ ಗಳನ್ನು ನಡೆಸಲಾಗಿದೆ ಹಾಗೂ ಕೆಲವು ಶಾಲೆಗಳಲ್ಲಿ ಪೋಷಕರ ಸಹಕಾರದೊಂದಿಗೆ ರಾತ್ರಿ ಶಾಲೆಗಳನ್ನು ನಡೆಸಲಾಗುತ್ತಿದೆ. ಇತರೆ ಇಲಾಖೆಗಳ ಅಧಿಕಾರಿಗಳಿಗೆ ಸರ್ಕಾರಿ ಶಾಲೆಗಳ ದತ್ತು ನೀಡಿ ಕಲಿಕೆಯನ್ನು ಉತ್ತಮಗೊಳಿಸಲಾಗಿದೆ ಎಂದು ಹೇಳಿದರು.

2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಮತ್ತು ಹೆಚ್ಚು ದಾಖಲಾತಿ ಹೊಂದಿರುವ 52 ಶಾಲೆಗಳ ನಿರಂತರ ಮೇಲ್ವಿಚಾರಣೆ ಗಾಗಿ ಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಉಸ್ತುವಾರಿ ನೀಡಲಾಗಿದೆ. ಈ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿಯ ಅಧ್ಯಯನ ನಡೆಸಿ ಸವಾಲುಗಳ ಪರಿಹಾರ ಮತ್ತು ಫಲಿತಾಂಶ ಉತ್ತಮಪಡಿಸಲು ಅಗತ್ಯ ಕ್ರಮ ವಹಿಸಿದ್ದಾರೆ ಎಂದರು.

ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಗಳು

ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಮೂರು ಸಭೆಗಳನ್ನು ಈಗಾಗಲೇ ನಡೆಸಿ ಪ್ರತಿ ಪ್ರೌಢಶಾಲೆಯ ಶೈಕ್ಷಣಿಕ ಪ್ರಗತಿ ಪರಿಶೀಲಿಸಲಾಗಿದೆ. ಅಲ್ಲದೆ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಭೆಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ನಿಯಮಿತವಾಗಿ ನಡೆಸಿ ಶೈಕ್ಷಣಿಕ ಪ್ರಗತಿ ಬಗ್ಗೆ ಚರ್ಚಿಸಿ ಹಿಮ್ಮಾಹಿತಿ ನೀಡಲಾಗಿರುತ್ತದೆ. ಬೆಂಗಳೂರು ವಿಭಾಗ ಮಟ್ಟದ ವಿಷಯ ಸಂಪನ್ಮೂಲ ಶಿಕ್ಷಕರಿಗೆ ತರಬೇತಿಯನ್ನು ನಮ್ಮ ಜಿಲ್ಲೆಯಲ್ಲಿ ಆಯೋಜಿಸಿ ಸಲಹೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಜೀವನದ ಯಶಸ್ವಿಗೆ ಹತ್ತನೆಯ ತರಗತಿಯ ಫಲಿತಾಂಶವೇ ಹೆಚ್ಚಿನ ನಿರ್ಣಾಯಕವಾದ ಹಂತವಲ್ಲ ಕಠಿಣ ಅಭ್ಯಾಸವನ್ನು ಮಾತ್ರ ಮಾಡಿ ಅಷ್ಟೇ ಒಳ್ಳೆ ಫಲಿತಾಂಶ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಿವಿ ಮಾತು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 306 ಪ್ರೌಢಶಾಲೆಗಳಿದ್ದು, 2025-26ನೇ ಸಾಲಿನಲ್ಲಿ 15021 ವಿದ್ಯಾರ್ಥಿ ಗಳು 10 ನೇ ತರಗತಿ ಪರೀಕ್ಷೆ ಎದುರಿಸಲು ನೊಂದಣಿಯಾಗಿದ್ದು, ಇವರಲ್ಲಿ ಸರ್ಕಾರಿ-7007, ಅನುದಾನಿತ-2616 ಮತ್ತು ಅನುದಾನರಹಿತ-5398 ವಿದ್ಯಾರ್ಥಿಗಳಿದ್ದಾರೆ. ಈ ವಿದ್ಯಾರ್ಥಿ ಗಳಲ್ಲಿ ಪರೀಕ್ಷೆ ಎದುರಿಸಲು ಯಾವುದೇ ರೀತಿಯ ಗೊಂದಲ, ಭಯ ಆತಂಕವಿದ್ದಲ್ಲಿ ಅದನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಚೊಚ್ಚಲವಾಗಿ “ಪ್ರಶ್ನೆ ಕೇಳಿ ಸಮಸ್ಯೆ ಬಗೆಹರಿಸಿಕೊಳ್ಳಿ” ಎಂಬ ಶೀರ್ಷಿಕೆಯಡಿ ಪೋನ್ ಇನ್ ಕಾರ್ಯಕ್ರಮವನ್ನು ಗೂಗಲ್ ಮೀಟ್ ಮೂಲಕ ಇಂದು ಆಯೋಜಿಸಲಾಗಿದೆ.

ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ತಜ್ಞ ಶಿಕ್ಷಕರಿಂದ  ಉತ್ತರಿಸುವ ಕೆಲಸ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಿರ್ಭಿತಿಯಿಂದ ಎದುರಿಸುವುದು ಹೇಗೆ, ಸುಗಮ ಪರೀಕ್ಷೆಗೆ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಎದರಿಸುಲು ಏನು ಮಾಡಬೇಕು,  ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಏನೆಲ್ಲಾ ತರಬಹುದು, ಪಠ್ಯ ವಿಷಯಗಳಲ್ಲಿ ಗೊಂದಲಗಳ ಬಗ್ಗೆ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಜಿಲ್ಲಾಧಿಕಾರಿಗಳಿಂದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ, ತಜ್ಞ ಶಿಕ್ಷಕರಿಂದ ಪ್ರಶ್ನೆ ಕೇಳಿ ಪರಿಹಾರಗಳನ್ನು ಪಡೆದುಕೊಂಡರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.