SFI Protest: ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಉಣ ಬಡಿಸುತ್ತಿರುವ ಮುಖ್ಯಶಿಕ್ಷಕನ ವಿರುದ್ದ ಕಾನೂನು ಕ್ರಮ
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳ ಆಹಾರ ಪದಾರ್ಥ ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಕಳಪೆ ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ಉಣಬಡಿಸುತ್ತಿರುವ ಮುಖ್ಯ ಶಿಕ್ಷಕನ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಎಸ್‌ಎಫ್ ಐ ಮುಖಂಡ ಸೋಮಶೇಖರ್ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದರು.
-
ಬಾಗೇಪಲ್ಲಿ: ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಕಳಪೆ ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ಉಣಬಡಿಸುತ್ತಿರುವ ಮುಖ್ಯ ಶಿಕ್ಷಕನ ವಿರುದ್ದ ಕಾನೂನು ಕ್ರಮ ಜರುಗಿಸ ಬೇಕೆಂದು ಎಸ್‌ಎಫ್‌ಐ ಮುಖಂಡ ಸೋಮಶೇಖರ್ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದರು.
ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತನಿಖೆ ನಡೆಸುವಂತೆ ಹಾಗೂ ಶಾಲೆಯ ಪಡಿತರ ಪದಾರ್ಥಗಳು, ಪೌಷ್ಠಿಕ ಆಹಾರ, ಬಾಳೆಹಣ್ಣು, ಮೊಟ್ಟೆಯನ್ನು ವಿದ್ಯಾರ್ಥಿಗಳಿಗೆ ನೀಡದೆ ಕಾಳಸಂತೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿರುವ ಮುಖ್ಯ ಶಿಕ್ಷಕ ವಿ.ವೆಂಕಟೇಶ್ ವಿರುದ್ದ ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.
ಇದನ್ನೂ ಓದಿ: Chikkaballapur News: ಚದುರಂಗ ಆಡುವುದರಿಂದ ಆಲೋಚನಾ ಶಕ್ತಿ, ಏಕಾಗ್ರತೆ ಹೆಚ್ಚುತ್ತದೆ : ಸಿ.ಇ.ಒ ಡಾ. ವೈ.ನವೀನ್ ಭಟ್ ಚಾಲನೆ
ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದವತಿ ಯಿಂದ ನೀಡಿರುವ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿರುವ ದೃಶ್ಯಗಳು ಶಾಲೆಯ ಸಿಸಿ ಕ್ಯಾಮಾರದಲ್ಲಿ ಸೆರೆಯಾ ಗಿವೆ. ಸೆರೆಯಾಗಿರುವ ಪಡಿತರ ಪದಾರ್ಥಗಳ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಮುಖ್ಯ ಶಿಕ್ಷಕ ವಿ.ವೆಂಕಟೇಶ್ ಹಾಗೂ ಅವ್ಯವಹಾರ ಕೃತ್ಯದಲ್ಲಿ ಭಾಗಿಯಾಗಿರುವ ಡಿ ಗ್ರೂಪ್ ನೌಕರರ ವಿರುದ್ದ ಕಾನೂನು ಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿ ಕೊಡುವಂತೆ ತಿಂಗಳ ಹಿಂದೆ ಉಪ ನಿರ್ದೇಶಕರಿಗೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು ಎಂದರು.
ಕನಿಷ್ಠ ಪಕ್ಷ ಅಧಿಕಾರಿಗಳ ತಂಡ ಇದುವರೆಗೂ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಿಲ್ಲ. ಹುಳ ಬಿದ್ದಿರುವ ಬಿಸಿಯೂಟ ನೀಡುತ್ತಿರುವ ಹಾಗೂ ಮೊಟ್ಟೆ,ಬಾಳೆಹಣ್ಣು ಅಸರ್ಮಪಕ ವಿತರಣೆ ಬಗ್ಗೆ ವಿದ್ಯಾರ್ಥಿಗಳು ಅಡುಗೆ ಸಿಬ್ಬಂದಿ ಯನ್ನು ಪ್ರಶ್ನಿಸಿದರೆ ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂಡಿಹಾಕಿ ಮನಬಂದಂತೆ ಥಳಿಸಿ ಶಾಲೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಹೊರಗಡೆ ಮಾತನಾಡದಂತೆ ಭಯ ಹುಟ್ಟಿಸುವ ಕೆಲಸಕ್ಕೆ ಅಲ್ಲಿನ ಅಡಿಗೆ ಸಿಬ್ಬಂದಿ ಮುಂದಾಗಿದ್ದಾರೆ ಎಂದು ಹೇಳಿದರು.
ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ೨೮೦ ಜನ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಶೌಚಾಲಯ,ಕುಡಿಯುವ ನೀರು ಸೇರಿದಂತೆ ಕನಿಷ್ಠ ಸೌಲಭ್ಯಗಳು ಕಲ್ಪಿಸಲು ಶಾಲೆ ಆಢಳಿತ ಮಂಡಳಿ ಸಂಪೂರ್ಣ ವಿಫಲವಾಗಿದೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಸಮಸ್ಯೆಗೆ ಪರಿಹಾರ ಕಲ್ಪಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹುಳು ಬಿದ್ದಿರುವ ಪದಾರ್ಥಗಳಿಂದ ಸಿದ್ದಪಡಿಸಿರುವ ಮಧ್ಯಾ ಹ್ನದ ಬಿಸಿಯೂಟ ತಿನ್ನುವಂತೆ ಮುಖ್ಯ ಶಿಕ್ಷಕರು ಒತ್ತಾಯ ಮಾಡುತ್ತಾರೆ. ತಿನ್ನದಿದ್ದರೆ ಅಡುಗೆ ಸಿಬ್ಬಂದಿ ಭಯ ಹುಟ್ಟಿಸಿ ಬೆದರಿಸುತ್ತಾರೆ. ಮಾತು ಕೇಳದಿದ್ದರೆ ಕೊಠಡಿಯೊಳಗೆ ಕೂಡಿ ಹಾಕಿ ಮನಬಂದಂತೆ ಥಳಿಸುತ್ತಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ೧೦ ನೇ ತರಗತಿ ವಿದ್ಯಾರ್ಥಿಗಳು ಸೇರಿ ಸರ್ಕಾರಿ ಬಾಲಕರ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.