ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಬಾಲ್ಯ ವಿವಾಹ ತಡೆಗೆ ಕಾನೂನು ಅರಿವು ಅಗತ್ಯ: ಗುಡಿಬಂಡೆಯಲ್ಲಿ ಜಾಗೃತಿ ಕಾರ್ಯಕ್ರಮ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ‘ಬಾಲ್ಯ ವಿವಾಹ ಮುಕ್ತ ಭಾರತ್’ ಅಭಿಯಾನದಡಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಾಲ್ಯ ವಿವಾಹ ತಡೆಗೆ ಕಾನೂನು ಅರಿವು ಅಗತ್ಯ

-

Profile
Ashok Nayak Nov 21, 2026 10:26 PM

ಗುಡಿಬಂಡೆ: ಬಾಲ್ಯ ವಿವಾಹ(Child Marriage)ವು ಮಕ್ಕಳ ಭವಿಷ್ಯ ಮತ್ತು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಮಾಜಿಕ ಪಿಡುಗಾಗಿದ್ದು, ಅದನ್ನು ತಡೆಗಟ್ಟಲು ಕಾನೂನು ಅರಿವಿನ ಜೊತೆಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ‘ಬಾಲ್ಯ ವಿವಾಹ ಮುಕ್ತ ಭಾರತ್’ ಅಭಿಯಾನ ದಡಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇದನ್ನೂ ಓದಿ: Gudibande News: ಜಾವೆಲಿನ್ ಥ್ರೋನಲ್ಲಿ ರಾಜ್ಯಮಟ್ಟಕ್ಕೆ ಆದರ್ಶ ಆಯ್ಕೆ; ಹಲವು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಅರ್ಹತೆ

ಕಾರ್ಯಕ್ರಮಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಯ ಸದಸ್ಯ ಕಾರ್ಯದರ್ಶಿ ಸವಿತಾ ರುದ್ರಗೌಡ ಚಿಕ್ಕನಗೌಡರ್ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವರುಣ್ ರಾಜ್ ಆರ್. ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥ್ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿ ಜಿ.ವಿ. ವಿಶ್ವನಾಥ್ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕಾನೂನು ಅಂಶಗಳು, ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳು ಹಾಗೂ ಇಂತಹ ಪ್ರಕರಣಗಳನ್ನು ತಡೆಯುವಲ್ಲಿ ಸಾರ್ವಜನಿಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಅಲ್ಲದೆ, ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆಗಾಗಿ ಕಾರ್ಯನಿರ್ವಹಿಸುವ ಮಕ್ಕಳ ಸಹಾಯವಾಣಿ 1098ರ ಸೇವೆಗಳ ಬಗ್ಗೆಯೂ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ಯಾನಲ್ ವಕೀಲ ನರೇಂದ್ರ ಜೆ.ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶಾರದಾ, ನ್ಯಾಯಾಲಯದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.