Shidlaghatta News: ಸಮಾಜದಲ್ಲಿ ದಾನಧರ್ಮ ರೂಢಿಯಾಗಲಿ: ಸೀಕಲ್ ರಾಮಚಂದ್ರಗೌಡ
ರಂಜಾನ್ ಹಬ್ಬದ ಅಂಗವಾಗಿ ಅಲ್ಪಸಂಖ್ಯಾತ ಸಮುದಾಯದ ಬಡವರಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಗಿದೆ. ಇದೇ ರೀತಿಯಲ್ಲಿ ಮುಂಬರುವ ಯುಗಾದಿ ಹಬ್ಬದ ಪ್ರಯುಕ್ತವೂ ತೀರ ಬಡತನದಲ್ಲಿ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ವಿತರಿಸುವ ಯೋಜನೆ ಇದೆ
-
ಶಿಡ್ಲಘಟ್ಟ: ರಂಜಾನ್ ಹಬ್ಬದ ಪ್ರಯುಕ್ತ ನಗರದ ಬಿಜೆಪಿ ಸೇವಾ ಸೌಧದಲ್ಲಿ ಮುಸ್ಲಿಂ ಸಮುದಾಯದ ಬಡವರಿಗೆ ಆಹಾರ ದಿನಸಿ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಭಾಗವಹಿಸಿ ಸುಮಾರು ಸಾವಿರಕ್ಕೂ ಹೆಚ್ಚು ಆಹಾರ ಕಿಟ್‌ಗಳನ್ನು ವಿತರಿಸಿದರು.
ಇದನ್ನೂ ಓದಿ: Karnataka Budget 2026: ಅಮರ್ಥ್ಯಸೇನ್ ಅಶಯ ಬಿಂಬಿಸಿದ ರಾಜ್ಯ ಬಜೆಟ್; 11 ಜಿ ಮಾದರಿ ಎಂದರೇನು?
ನಂತರ ಮಾತನಾಡಿದ ಅವರು, ರಂಜಾನ್ ಮಾಸವು ಪವಿತ್ರತೆಯ ಸಂಕೇತವಾಗಿದ್ದು, ಮಾನವ ಧರ್ಮವೇ ಅತ್ಯಂತ ಶ್ರೇಷ್ಠ ಧರ್ಮವಾಗಿದೆ ಎಂದು ಹೇಳಿದರು. ಸಮಾಜದಲ್ಲಿ ಉಳ್ಳವರು ತಮ್ಮ ಆದಾಯದ ಒಂದು ಭಾಗವನ್ನು ಬಡವರಿಗೆ ದಾನ ಮಾಡುವ ಮೂಲಕ ಮಾನವೀಯತೆಯನ್ನು ಉಳಿಸಬೇಕು ಎಂದು ಅವರು ತಿಳಿಸಿದರು.
ಇಂತಹ ದಾನಧರ್ಮದ ಮೂಲಕ ಸಮಾಜದಲ್ಲಿ ಪರಸ್ಪರ ಸಹಕಾರ ಮತ್ತು ಸೌಹಾರ್ದತೆ ಬೆಳೆಸಬಹುದು. ಬಡವರು ಕೂಡ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿ ಕೊಂಡು ತಮ್ಮ ಜೀವನವನ್ನು ಸುಧಾರಿಸಿಕೊಳ್ಳಬೇಕು ಎಂದು ಹೇಳಿದರು.
ರಂಜಾನ್ ಹಬ್ಬದ ಅಂಗವಾಗಿ ಅಲ್ಪಸಂಖ್ಯಾತ ಸಮುದಾಯದ ಬಡವರಿಗೆ ದಿನಸಿ ಕಿಟ್ ಗಳನ್ನು ವಿತರಿಸಲಾಗಿದೆ. ಇದೇ ರೀತಿಯಲ್ಲಿ ಮುಂಬರುವ ಯುಗಾದಿ ಹಬ್ಬದ ಪ್ರಯುಕ್ತವೂ ತೀರ ಬಡತನದಲ್ಲಿ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ವಿತರಿಸುವ ಯೋಜನೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ಸುರೇಂದ್ರಗೌಡ, ಎ.ನಾರಾಯಣಸ್ವಾಮಿ, ಡಾ. ಷಫಿ, ರೂಪಸಿ ರಮೇಶ್, ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.