ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLA S N SubbaReddy: ಜನಸ್ಪಂದನ ಸೌಲಭ್ಯಗಳ ವಿತರಣೆಯ ತಾಣವಾಗಲಿ: ಎಸ್.ಎನ್.ಸುಬ್ಬಾರೆಡ್ಡಿ

ಜನಸ್ಪಂದನ ಕಾರ್ಯಕ್ರಮಗಳು ಹೆಚ್ಚು ಜನರು ಸೇರುವ ಜಾತ್ರೆಗಳಂತೆ ಇರಬಾರದು. ಇಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಫಲಾನುಭವಿಗಳ ಸ್ಥಳವಾಗಬೇಕು. ಈ ಹಿಂದಿನ ಎಲ್ಲಾ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಹೋಗುತ್ತಿರುವು ದರಿಂದ ಜನಸ್ಪಂದನ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹತ್ವ ಬಂದಿದೆ.

ಜನಸ್ಪಂದನ ಸೌಲಭ್ಯಗಳ ವಿತರಣೆಯ ತಾಣವಾಗಲಿ

-

Ashok Nayak Ashok Nayak Oct 2, 2025 7:00 AM

ಬಾಗೇಪಲ್ಲಿ: ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದ ಪರಂಪರೆಯನ್ನು ಮುಂದುವರೆಸುವ ಸಲುವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ(MLA S N SubbaReddy) ತಿಳಿಸಿದರು.

ಪಟ್ಟಣದ ಗೃಹ ಕಚೇರಿಯಲ್ಲಿ ಬಿಳ್ಳುರು ಹಾಗು ರಾಶ್ಚೆರುವು ಗ್ರಾಪಂ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮಗಳ ಪೂರ್ವಬಾವಿಯಾಗಿ ಚರ್ಚಿಸಲು ಏರ್ಪಡಿಸಿದ್ದ ಬಾಗೇಪಲ್ಲಿ ಹಾಗು ಚೇಳೂರು ತಾಲ್ಲೂಕುಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜನಸ್ಪಂದನ ಕಾರ್ಯಕ್ರಮಗಳು ಹೆಚ್ಚು ಜನರು ಸೇರುವ ಜಾತ್ರೆಗಳಂತೆ ಇರಬಾರದು. ಇಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಫಲಾನುಭವಿಗಳ ಸ್ಥಳವಾಗಬೇಕು. ಈ ಹಿಂದಿನ ಎಲ್ಲಾ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಹೋಗುತ್ತಿರುವುದರಿಂದ ಜನಸ್ಪಂದನ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹತ್ವ ಬಂದಿದೆ. ಈಗ ಬಿಳ್ಳೂರು ಮತ್ತು ರಾಶ್ಚೆರುವು ಗ್ರಾಪಂಗಳ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮಗಳಲ್ಲಿ ವಿವಿದ ಇಲಾಖೆಗಳಿಂದ ಕನಿಷ್ಠ 2 ಸಾವಿರ ಫಲಾನುಭವಿಗಳು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡಬೇಕಾಗಿದೆ. 

ಇದನ್ನೂ ಓದಿ: Bagepally News: ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಸಿಪಿಐಎಂ ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ

ನಿಮ್ಮ ಜೊತೆಯಲ್ಲಿ ನನ್ನ ಆಪ್ತ ಸಿಬ್ಬಂದಿಯೂ ಬರುತ್ತಿದ್ದು ಪ್ರತಿ ಮನೆಗೂ ಭೇಟಿ ನೀಡಿ ಜನಸಾಮಾನ್ಯರಿಗೆ ಸರ್ಕಾರದಿಂದ ಸಿಗಬೇಕಾಗಿರುವ ಸೌಲಭ್ಯಗಳ ಮಾಹಿತಿ ಪಡೆದುಕೊಂಡು ಅವುಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ವಿತರಿಸಲು ಪ್ರಮಾಣಿಕ ಪ್ರಯತ್ನವನ್ನು ಮಾಡ ಬೇಕಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಅನೇಕರು ಸರ್ಕಾರಿ ಕಚೇರಿಗಳನ್ನು ನೋಡದಂತಹವರು ಇದ್ದಾರೆ. ಅಧಿಕಾರಿಗಳ ನಿರ್ಲಕ್ಷದಿಂದ ಕೆಲವರು ಅನಗತ್ಯವಾಗಿ ಅಲೆದಾಟವನ್ನು ಮಾಡುತ್ತಿರುತ್ತಾರೆ. ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಜನರ ಅಲೆದಾಟ ತಪ್ಪಬೇಕು, ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬಿದ್ದು ಸುಲಭವಾಗಿ ಅರ್ಹರಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳು ವಂತೆ ನಾವೆಲ್ಲರೂ ಶ್ರಮಿಸಬೇಕು ಇದರ ನಂತರ ಮಿಟ್ಟೇಮರಿ ಮತ್ತು ಕಾನಗಮಾಕಲಪಲ್ಲಿ ಗ್ರಾಪಂ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದರು.

ಸಭೆಯಲ್ಲಿ ಬಾಗೇಪಲ್ಲಿ ತಹಶೀಲ್ದಾರ್ ಮನೀಷ್ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ. ಶ್ವೇತ, ತಾಪಂ ಇಓ ಜಿ.ವಿ.ರಮೇಶ್, ಬಿಇಓ ಎನ್.ವೆಂಕಟೇಶಪ್ಪ, ಬಿಸಿಎಂ ಅಧಿಕಾರಿ ಆರ್.ಶಿವಪ್ಪ, ಸಿಡಿಪಿಓ ರಾಮಚಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ಪ್ರೀತಂ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಮೆಹಬೂಬ್ ಬಾಷ,ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.