ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA B N Ravikumar: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ ದೇಶ ಕಟ್ಟೋಣ: ಶಾಸಕ ಬಿ.ಎನ್.ರವಿಕುಮಾರ್

ಸ್ವಾತಂತ್ರ್ಯವು ಅನೇಕ ವೀರರ ತ್ಯಾಗದ ಪ್ರತೀಕವಾಗಿದೆ. ಅವರ ಹೋರಾಟ ಮತ್ತು ಬಲಿದಾನವನ್ನು ಕೇವಲ ಸ್ಮರಿಸುವುದಕ್ಕೆ ಸೀಮಿತವಾಗದೆ, ದೇಶದ ಏಕತೆ, ಅಖಂಡತೆ ಹಾಗೂ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು. ದೇಶದ ಪ್ರಗತಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಶಿಸ್ತು, ದೇಶಭಕ್ತಿ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶಿಡ್ಲಘಟ್ಟ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದ್ದು, ಅವರು ಕಂಡ ಕನಸಿನ ಭಾರತ ನಿರ್ಮಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್(MLA B N Ravikumar) ಹೇಳಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸ್ವಾತಂತ್ರ್ಯವು ಅನೇಕ ವೀರರ ತ್ಯಾಗದ ಪ್ರತೀಕವಾಗಿದೆ. ಅವರ ಹೋರಾಟ ಮತ್ತು ಬಲಿದಾನವನ್ನು ಕೇವಲ ಸ್ಮರಿಸುವುದಕ್ಕೆ ಸೀಮಿತವಾಗದೆ, ದೇಶದ ಏಕತೆ, ಅಖಂಡತೆ ಹಾಗೂ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು.

ಇದನ್ನೂ ಓದಿ: MLA B N Ravikumar: ಜನಪರ ಯೋಜನೆಗಳ ಮಾಹಿತಿ ಜನರಿಗೆ ತಲುಪಿದಾಗಲೇ ಸಾರ್ಥಕತೆ: ಶಾಸಕ ಬಿ.ಎನ್. ರವಿಕುಮಾರ್

ದೇಶದ ಪ್ರಗತಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಶಿಸ್ತು, ದೇಶಭಕ್ತಿ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶಿಡ್ಲಘಟ್ಟ ತಾಲ್ಲೂಕು ಶಿಕ್ಷಣ, ಕೃಷಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದು, ಜನಪ್ರತಿನಿಧಿ ಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಶ್ರಮಿಸಿದರೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪಥಸಂಚಲನ ನಡೆಯಿತು.