Chikkaballapur News: ಮಾದಕ ವಸ್ತುಗಳ ವಿರುದ್ಧ ಕಂಕಣಬದ್ಧರಾಗಿ ಕೈ ಜೋಡಿಸೋಣ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ
ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮತ್ತು ಜೀವನ ಹಾಳಾಗುವುದಲ್ಲದೆ, ಇಡೀ ಕುಟುಂಬದ ನೆಮ್ಮದಿ ಹಾಗೂ ದೇಶದ ಭವಿಷ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಯುವಜನತೆಯನ್ನು ಮಾದಕ ವಸ್ತುಗಳ ಪಿಡುಗಿನಿಂದ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ.
-
ಚಿಕ್ಕಬಳ್ಳಾಪುರ: ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮತ್ತು ಜೀವನ ಹಾಳಾಗು ವುದಲ್ಲದೆ, ಇಡೀ ಕುಟುಂಬದ ನೆಮ್ಮದಿ ಹಾಗೂ ದೇಶದ ಭವಿಷ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಯುವಜನತೆಯನ್ನು ಮಾದಕ ವಸ್ತುಗಳ ಪಿಡುಗಿನಿಂದ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶನಿವಾರ ನಗರದ ಸೇಂಟ್ ಜೋಸೆಫ್ ಕಾಲೇಜಿನಿಂದ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: Chikkaballapur News: ಮಾದಕ ವಸ್ತುಗಳ ವಿರುದ್ಧ ಕಂಕಣಬದ್ಧರಾಗಿ ಕೈ ಜೋಡಿಸೋಣ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ದೇಶಾದ್ಯಂತ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳು ಮತ್ತು ಯುವಜನತೆಯೇ ದೇಶದ ಭವಿಷ್ಯವಾಗಿದ್ದು, ಅವರನ್ನು ದುಶ್ಚಟಗಳಿಂದ ದೂರವಿಡಲು ಪೋಷಕರು, ಶಿಕ್ಷಣ ಸಂಸ್ಥೆಗಳು ಹಾಗೂ ಸಮಾಜ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯವನ್ನು ಹದಗೆಡಿಸುವು ದರ ಜೊತೆಗೆ ಕುಟುಂಬದ ನೆಮ್ಮದಿಯನ್ನು ಕಸಿದುಕೊಳ್ಳುತ್ತದೆ. ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೂ ಮಾರಕವಾಗುತ್ತದೆ ಎಂದರು.
ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಭಾರತ ಸರ್ಕಾರ 1985ರಲ್ಲಿ ಕಠಿಣ ಕಾನೂನು ಜಾರಿಗೆ ತಂದಿದ್ದರೂ, ಈ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಾನೂನು ಕ್ರಮಗಳ ಜೊತೆಗೆ ಜನಸಾಮಾನ್ಯರ ಸಹಕಾರವೂ ಅಗತ್ಯವಾಗಿದೆ. ಯುವಜನತೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಅಪಾಯಗಳ ಕುರಿತು ಅರಿವು ಮೂಡಿಸಿ, ಅವುಗಳಿಂದ ದೂರವಿರು ವಂತೆ ಪ್ರೇರೇಪಿಸಬೇಕು. ಪ್ರತಿಯೊಬ್ಬರೂ ಡ್ರಗ್ಸ್ ಬೇಡ ಎಂಬ ದೃಢ ಸಂಕಲ್ಪ ಕೈಗೊಂಡಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಮಕ್ಕಳು ದೇಶದ ಅಮೂಲ್ಯ ಆಸ್ತಿಯಾಗಿದ್ದು, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸು ವಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದೆ. ಈ ಗುರಿ ಸಾಧನೆಗೆ ಯುವಜನತೆ ಆರೋಗ್ಯವಂತ ರಾಗಿ, ಸದೃಢವಾಗಿ ಬೆಳೆಯಬೇಕು. ಮಾದಕ ವಸ್ತುಗಳ ವಿರುದ್ಧ ಪ್ರತಿಯೊಬ್ಬರೂ ಕಂಕಣಬದ್ಧರಾಗಿ ಹೋರಾಡಬೇಕು. ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡುವವರಿಗೆ ಯುವಕ-ಯುವತಿ ಯರು ದೃಢವಾಗಿ 'ನೋ ಬ್ರೋ' ಎಂದು ಹೇಳುವ ಮೂಲಕ ದುಶ್ಚಟಗಳಿಂದ ದೂರವಿರಬೇಕು. ಅಲ್ಲದೆ, ಮಾದಕ ವಸ್ತುಗಳ ವಿರುದ್ಧದ ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿತು. ವಿದ್ಯಾರ್ಥಿಗಳು ಜಾಗೃತಿ ಘೋಷಣೆ ಗಳನ್ನು ಕೂಗುವ ಮೂಲಕ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದ ಸಂದೇಶ ಸಾರಿದರು. ನ್ಯಾಯಾ ಧೀಶರು ಹಾಗೂ ಗಣ್ಯರು ಜಾಥಾದಲ್ಲಿ ಹೆಜ್ಜೆ ಹಾಕಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ಇತರ ನ್ಯಾಯಾಧೀಶರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್, ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್, ವಕೀಲರು, ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ, ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.