ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಸ್ವಾತಂತ್ರ್ಯ ಹೋರಾಟಗಾರರಿಗೆ ಋಣಿಯಾಗಿರೋಣ: ಪಿ.ಎನ್.ಕೇಶವ ರೆಡ್ಡಿ

ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಲಾಲಾ ಲಜಪತ್ ರಾಯ್, ರಾಣಿ ಚೆನ್ನಮ್ಮ, ರಾಣಿ ಲಕ್ಷ್ಮೀಬಾಯಿ ಹಾಗೂ ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕರು ದೇಶಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿ ದ್ದಾರೆ. ಅವರ ತ್ಯಾಗ ಮತ್ತು ಬಲಿದಾನದಿಂದ ದೊರೆತ ಸ್ವಾತಂತ್ರ್ಯಕ್ಕೆ ಬೆಲೆ ಕಟ್ಟಲಾಗದು. ಹೋರಾಟ ಗಾರರ ಆಶಯಗಳನ್ನು ಅರ್ಥಮಾಡಿಕೊಂಡು ಅವರ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ

ಚಿಕ್ಕಬಳ್ಳಾಪುರ: ಶತಮಾನಕ್ಕೂ ಹೆಚ್ಚು ಕಾಲ ಬ್ರಿಟಿಷರ ಆಳ್ವಿಕೆಗೆ ಒಳಗಾಗಿದ್ದ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹುತಾತ್ಮರು ಹಾಗೂ ಹೋರಾಟಗಾರರಿಗೆ ನಾವು ಸದಾ ಋಣಿಯಾಗಿರ ಬೇಕು ಎಂದು ಶಾಂತ ಶಿಕ್ಷಣ ಸಂಸ್ಥೆಗಳ ಧರ್ಮದರ್ಶಿ ಪಿ.ಎನ್.ಕೇಶವ ರೆಡ್ಡಿ ಹೇಳಿದರು.

ಪೆರೇಸಂದ್ರದ ಶಾಂತ ಶಿಕ್ಷಣ ಸಂಸ್ಥೆಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 

ವ್ಯಾಪಾರಕ್ಕಾಗಿ ಭಾರತಕ್ಕೆ ಆಗಮಿಸಿದ ಬ್ರಿಟಿಷರು ಕ್ರಮೇಣ ದೇಶವನ್ನು ತಮ್ಮ ವಶಕ್ಕೆ ಪಡೆದು ಸಂಪನ್ಮೂಲಗಳನ್ನು ಬಳಸಿಕೊಂಡು ಭಾರತೀಯರನ್ನು ದಾಸ್ಯಕ್ಕೆ ತಳ್ಳಿದರು. ಇದನ್ನು ವಿರೋಧಿಸಿ ಅನೇಕ ದೇಶಪ್ರೇಮಿಗಳು ಸ್ವಾತಂತ್ರ್ಯ ಹೋರಾಟ ನಡೆಸಿ ಹುತಾತ್ಮರಾದರು ಎಂದರು.

ಇದನ್ನೂ ಓದಿ: Chikkaballapur News: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೈಜೋಡಿಸುವುದು ನಮ್ಮ ಕರ್ತವ್ಯ: ಜಯಕುಮಾರ್

ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಲಾಲಾ ಲಜಪತ್ ರಾಯ್, ರಾಣಿ ಚೆನ್ನಮ್ಮ, ರಾಣಿ ಲಕ್ಷ್ಮೀಬಾಯಿ ಹಾಗೂ ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕರು ದೇಶಕ್ಕಾಗಿ ಸರ್ವಸ್ವ ವನ್ನೂ ಅರ್ಪಿಸಿದ್ದಾರೆ. ಅವರ ತ್ಯಾಗ ಮತ್ತು ಬಲಿದಾನದಿಂದ ದೊರೆತ ಸ್ವಾತಂತ್ರ್ಯಕ್ಕೆ ಬೆಲೆ ಕಟ್ಟಲಾಗದು. ಹೋರಾಟಗಾರರ ಆಶಯಗಳನ್ನು ಅರ್ಥಮಾಡಿಕೊಂಡು ಅವರ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ ಎಂದರು.

ವಿದ್ಯಾರ್ಥಿಗಳು ತಂದೆ-ತಾಯಿ, ಗುರುಹಿರಿಯರಿಗೆ ಗೌರವ ನೀಡುವುದರೊಂದಿಗೆ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಸಂವಿಧಾನಕ್ಕೆ ಗೌರವ ನೀಡಬೇಕು. ಆಗ ಮಾತ್ರ ಉತ್ತಮ ಪ್ರಜೆಗಳಾಗಿ ದೇಶದ ಗೌರವವನ್ನು ಹೆಚ್ಚಿಸಲು ಸಾಧ್ಯ ಎಂದರು.

ಸಂಸ್ಥೆಯ ನಿರ್ದೇಶಕ ಡಾ.ಕೋಡಿ ರಂಗಪ್ಪ ಮಾತನಾಡಿ, ಸ್ವಾತಂತ್ರ್ಯ ಹೋರಾಟ ಭಾರತದ ಪುನರು ತ್ಥಾನದ ಜನಾಂದೋಲನವಾಗಿತ್ತು. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಅಸಹಕಾರ, ಸವಿನಯ ಕಾನೂನುಭಂಗ, ಉಪ್ಪಿನ ಸತ್ಯಾಗ್ರಹ ಹಾಗೂ ಭಾರತ ಬಿಟ್ಟು ತೊಲಗಿ ಚಳವಳಿಗಳು ಹೋರಾಟಕ್ಕೆ ವ್ಯಾಪಕ ಶಕ್ತಿ ನೀಡಿದವು. ಗಾಂಧೀಜಿ ಸತ್ಯ, ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಜನರನ್ನು ಸಂಘಟಿಸಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದರು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟದ ನಾಯಕರು ಹಾಗೂ ಪ್ರಮುಖ ಘಟನೆ ಗಳನ್ನು ಆಧರಿಸಿದ ನೃತ್ಯರೂಪಕ ಮತ್ತು ಭಾಷಣಗಳನ್ನು ಪ್ರಸ್ತುತಪಡಿಸಿದರು. ಎನ್‌ಸಿಸಿ ಕೆಡೆಟ್‌ಗಳ ಪಥಸಂಚಲನ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ಪ್ರಾಂಶುಪಾಲ ಡಾ.ನವೀನ್ ಸೈಮನ್, ಪ್ರಸಾದ್ ಅಪ್ಪಲ್ಲ, ಫಾರ್ಮಸಿ ಪ್ರಾಂಶುಪಾಲ ಡಾ.ಗೋಪಿನಾಥ್, ನರ್ಸಿಂಗ್ ಪ್ರಾಂಶುಪಾಲೆ ಡಯಾನ, ಡಾ. ನರೇಶ್ ಕುಮಾರ್, ಪ್ರೊಫೆಸರ್ ವಿಜಯಲಕ್ಷ್ಮಿ, ಡಾ.ಆಯಿಷಾ ಭಟ್ ಸೇರಿದಂತೆ ಬೋಧಕ ಹಾಗೂ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.