Bagepally News: ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ : ಹಿರಿಯ ವಕೀಲ ಎ.ಜಿ.ಸುಧಾಕರ್
ದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣ ಹತ್ಯೆ, ಬಾಲ ವಿವಾಹ, ಮುಂತಾದ ಶೋಷಣೆಗಳು ನಡೆಯುತ್ತವೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ.
-
ಬಾಗೇಪಲ್ಲಿ: ಶತಮಾನಗಳಿಂದಲೂ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಮತ್ತು ಬಾಲಕಿ ಯರ ಮೇಲೆ ಲೌಂಗಿಕ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಲಿಂಗ ಅಸಮಾನತೆ ಅತ್ಯಾಚಾರ ಸಂಸ್ಕೃತಿಗೆ ಪುಷ್ಠಿ ನೀಡುವಂತಿದೆ. ಅಸಮಾನತೆಯ ಆಡಳಿತವನ್ನು ಪ್ರಶ್ನಿಸುವ ಅವಶ್ಯಕತೆ ಇದ್ದು, ಇದನ್ನು ಯಾರೂ ಮರೆಯುವಂತಿಲ್ಲ ಎಂದು ಹಿರಿಯ ವಕೀಲ ಎ.ಜಿ.ಸುಧಾಕರ್ ಹೇಳಿದರು.
ಶನಿವಾರ ಪಟ್ಟಣದ ಗಡಿದಂ ಗಿರಿಜಾ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬಾಗೇಪಲ್ಲಿ ತಾಲ್ಲೂಕು ವಲಯದ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಟಣದ ಗಡಿದಂ ಗಿರಿಜಾ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬಾಗೇಪಲ್ಲಿ ತಾಲ್ಲೂಕು ವಲಯದ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣ ಹತ್ಯೆ, ಬಾಲ ವಿವಾಹ, ಮುಂತಾದ ಶೋಷಣೆಗಳು ನಡೆಯುತ್ತವೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ.
ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಬಾಲ ವಿವಾಹದಂತಹ ಘೋರ ಅಪರಾಧ ಇದಕ್ಕೆ ಕಠಿಣ ಶಿಕ್ಷೆಯಾಗಬಹುದೆಂದು ಗೊತ್ತಿದ್ದರೂ ನಮ್ಮ ದೇಶದಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲಿವೆ. ಕಾನೂನಿನ ಅರಿವು ಇದ್ದರೂ ಮಹಿಳೆಯರ ಮೇಲೆ ಶೋಷಣೆ ಗಳು ನಿಂತಿಲ್ಲ. ಸರ್ಕಾರಗಳು ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡು ಮಹಿಳೆಯ ರಿಗೆ ರಕ್ಷಣೆ ನೀಡಬೇಕಾಗಿದೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ ಎಂದು ಹಿರಿಯ ವಕೀಲ ಎ.ಜಿ.ಸುಧಾಕರ್ ಎಂದು ಹೇಳಿದರು.
ಶ್ರೀಮತಿ ಉಷಾ ಆಂಜನೇಯ ರೆಡ್ಡಿ ಮಾತನಾಡಿ ಮಹಿಳೆಯರು ಇಂದು ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೆ?ತ್ರಗಳಲ್ಲಿ ಯಶಸ್ವಿ ಹಾದಿಯತ್ತ ಸಾಗುತ್ತಿದ್ದಾರೆ, ಆಕೆ ಕುಟುಂಬ ನಿರ್ವಹಣೆಯ ಜವಾಬ್ದಾರಿಯುತ ಕಾರ್ಯದೊಂದಿಗೆ ಸಮಾಜದಲ್ಲಿ ತನ್ನದೆಯಾದ ಸ್ಥಾನ ಪಡೆದುಕೊಳ್ಳಲು ಸದಾ ಶ್ರಮಿಸುತ್ತಿರುತ್ತಾಳೆ. ಮಹಿಳೆಯರು ಪುರುಷರಷ್ಟೆ ಸಮಾನವಾಗಿ ದುಡಿಯುತ್ತಿದ್ದರೂ ಅವರ ಮೇಲೆ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಿರುವುದು ದುರಂತ ಎಂದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸದಸ್ಯರಿಗೆ ವಿವಿಧ ಕ್ಷೇತ್ರದಲ್ಲಿ ವಿಶಿಷ್ಟ ರೀತಿ ಯಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ರಂಗೋಲಿ ಸ್ಪರ್ಧೆ, ಹಾಗೂ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ಸಿ.ಎಸ್. ಪ್ರಶಾಂತ್, ತಾಲೂಕು ಧರ್ಮಸ್ಥಳ ಯೋಜನಾಧಿಕಾರಿ ಎಂ.ಎಸ್. ಪ್ರವೀಣ್, ವ?ದ್ಯಾಧೀಕಾರಿ ಡಾ,, ಸಿ.ಎನ್. ಸತ್ಯನಾರಾಯಣರೆಡ್ಡಿ, ಶಿಶು, ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ರಾಮಚಂದ್ರ, ರಾಮ ಲಕ್ಷ್ಮಮ್ಮ, ಡಾ, ಸೌಭಾಗ್ಯ, ಡಾ, ಸ್ವರೂಪ ಸೇರಿದಂತೆ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸೇವಾಪ್ರತಿನಿಧಿಗಳು, ಹಾಗು ಸಿಬ್ಬಂದಿ ವರ್ಗದವರು ಜ್ಞಾನವಿಕಾಸಕೇಂದ್ರದ ಸರ್ವ ಸದಸ್ಯರು ಹಾಜರಿದ್ದರು.