ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಕರ್ಷಣೀಯವಾಗಿ ಆಚರಿಸೋಣ

ಕಾರ್ಯಕ್ರಮದ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಎಲ್ಲಾ ಸಿದ್ಧತಾ ಕಾರ್ಯಗಳನ್ನು ಸಂಬAಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಂಚಿಕೆ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಜರುಗುವ ಧ್ವಜಾರೋಹಣಕ್ಕೆ ಹಾಗೂ ಕ್ರೀಡಾಂಗಣಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸ ಬೇಕು.

ಆಕರ್ಷಣೀಯವಾಗಿ 77ನೇ ಗಣರಾಜ್ಯೋತ್ಸವ ಆಚರಿಸೋಣ: ಜಿ ಪ್ರಭು

-

Ashok Nayak
Ashok Nayak Jan 8, 2026 10:20 PM

ಚಿಕ್ಕಬಳ್ಳಾಪುರ: ಈ ಬಾರಿಯ 77ನೇ ಗಣರಾಜ್ಯೋತ್ಸವ ದಿನಾಚರಣೆ(77th Republic Day Celebrations) ಯಲ್ಲಿ ಜನಸಾಮಾನ್ಯರು ಸಹ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿ ಆಗಬೇಕು. ಆ ರೀತಿ ಆಕರ್ಷಣೀಯವಾಗಿ ಗಣರಾಜ್ಯೋ ತ್ಸವ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಪ್ರಭು ಅವರು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಜಿಲ್ಲಾ ಮಟ್ಟದ ಗಣರಾಜ್ಯೋ ತ್ಸವ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಅರ್ಥಪೂರ್ಣವಾಗಿ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ಪೂರ್ವಕವಾಗಿ ಆಚರಿಸಲಾಗುವುದು ಎಂದು ತಿಳಿಸಿದರು

ಗಣರಾಜ್ಯೋತ್ಸವ ದಿನಾಚರಣೆಯನ್ನು ಆಕರ್ಷಣೀಯವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧ್ವಜಾರೋಹಣ, ಗೌರವ ವಂದನೆ, ಗಣ್ಯರ  ಭಾಷಣ, ಪೊಲೀಸ್ ಕವಾಯತು, ಪಥಸಂಚಲನ  ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲಾಗುತ್ತಿದೆ ಜೊತೆಗೆ ಗಣರಾಜ್ಯೋತ್ಸವ ದಿನ ಮತ್ತು ಹಿಂದಿನ ದಿನ ಎಲ್ಲಾ ಕಚೇರಿಗಳಿಗೆ ವಿದ್ಯುತ್ ದೀಪಾ ಲಂಕಾರ ಮಾಡಲು ಆಯಾ ಕಚೇರಿಗಳ ಮುಖ್ಯಸ್ಥರು ನಿಗಾ ವಹಿಸಿ ವ್ಯವಸ್ಥೆ ಕಲ್ಪಿಸುವುದು ತಾಲ್ಲೂಕು ಮಟ್ಟದ ಕಚೇರಿಗಳಲ್ಲಿಯೂ ಸಹ ದೀಪಾಲಂಕಾರ ಮಾಡತಕ್ಕದ್ದು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: Chikkaballapur News: ಬೆಳೆ ವಿಮಾ ಯೋಜನೆ ನೋಂದಣಿಗೆ ಒತ್ತು: ಜಿಲ್ಲಾಧಿಕಾರಿ ಜಿ.ಪ್ರಭು

ಕಾರ್ಯಕ್ರಮದ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಎಲ್ಲಾ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಂಚಿಕೆ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಜರುಗುವ ಧ್ವಜಾರೋಹಣಕ್ಕೆ ಹಾಗೂ ಕ್ರೀಡಾಂಗಣಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸ ಬೇಕು. ಮುಖ್ಯವಾಗಿ ಗಣರಾಜ್ಯೋತ್ಸವದ ದಿನದಂದು ಸಂಜೆ ಕನ್ನಡ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅತ್ಯಂತ ಸಮರ್ಪಕವಾಗಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಎಲ್ಲಾ ಕಾರ್ಯಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ನಿಗಾವಹಿಸಬೇಕು ಎಂದು ಸೂಚನೆಗಳನ್ನು ನೀಡಿದರು. ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ಭಾಗವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಉಪವಿಭಾಗಾಧಿಕಾಡಿ ಡಿ.ಹೆಚ್. ಅಶ್ವಿನ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ  ಹಾಜರಿದ್ದರು.