B.Y. Vijayendra: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಸೇರಿದ ಕಾರಿಗೆ ಲಾರಿ ಡಿಕ್ಕಿ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸೇರಿದ ಬೆಂಗಾವಲು ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಶುಕ್ರವಾರ (ಫೆ. 28). ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬಸವ ತತ್ವ ಕಾರ್ಯಕ್ರಮ ಮುಗಿಸಿ ಬಿ.ವೈ.ವಿಜಯೇಂದ್ರ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ.

ನುಜ್ಜುಗುಜ್ಜಾದ ಕಾರು.

ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರಿಗೆ ಸೇರಿದ ಬೆಂಗಾವಲು ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಶುಕ್ರವಾರ (ಫೆ. 28)ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬಸವ ತತ್ವ ಕಾರ್ಯಕ್ರಮ ಮುಗಿಸಿ ಬಿ.ವೈ.ವಿಜಯೇಂದ್ರ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್ ಆಗಿದ್ದಾರೆ. ಜತೆಗೆ ಅಪಘಾತಕ್ಕೀಡಾದ ಕಾರಿನ ಚಾಲಕ ಕೂಡ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಪೊಲೀಸರು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸಾಮಾನ್ಯವಾಗಿ ವಿಜಯೇಂದ್ರ ಅವರು ಇದೇ ಕಾರನ್ನು ಬಳಸುತ್ತಿದ್ದರು. ಆದರೆ ಶುಕ್ರವಾರ ಅದೃಷ್ಟವಶಾತ್ ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Basavaraj Bommai: ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಸವರಾಜ ಬೊಮ್ಮಾಯಿ ಆರೋಪ
ಬೀರೂರು ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಲಾರಿ ಮರದ ದಿಣ್ಣೆ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬೈಗೆ ತೆರಳುತ್ತಿತ್ತು ಎನ್ನಲಾಗಿದೆ.