Chikkaballapur News: ಕಾಂಗ್ರೆಸ್‌ನಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು: ಮಂಜುನಾಥ್
ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳಿಗೆ ಕಡಿವಾಣ ಹಾಕಿ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.
-
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ದೀರ್ಘಕಾಲ ದುಡಿದಿರುವ ನಿಷ್ಠಾವಂತ ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡಿ, ಎಲ್ಲರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆಯನ್ನು ಬಲಪಡಿಸಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಂಜುನಾಥ್ ಹೇಳಿದರು.
ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳಿಗೆ ಕಡಿವಾಣ ಹಾಕಿ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.
ಇದನ್ನೂ ಓದಿ: Chikkaballapur News: ಹಳೆಯ ಪ್ರಕರಣ ಮುಂದಿಟ್ಟುಕೊಂಡು ಬಂಧಿಸಿರುವುದು ಖಂಡನೀಯ: ರಾಮನಾಥರೆಡ್ಡಿ
ತಾವು ಸೇರಿದಂತೆ ಹಲವು ಹಿರಿಯರು 50–60 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿ ದ್ದರೂ, ಅನುಭವಕ್ಕೆ ಆದ್ಯತೆ ಸಿಗುತ್ತಿಲ್ಲ ಎಂಬ ಅಸಮಾಧಾನವಿದೆ. ಆದರೆ, ಪಕ್ಷವನ್ನು ಬಲಪಡಿ ಸುವ ನಿಟ್ಟಿನಲ್ಲಿ ಹಿರಿಯರು ಮತ್ತು ಯುವಕರನ್ನು ಒಟ್ಟಿಗೆ ಕರೆದೊಯ್ಯಬೇಕು ಎಂದು ಅಭಿಪ್ರಾಯ ಪಟ್ಟರು.
ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವ ಮೂಲಕ ಸಂಘಟನೆಗೆ ಹೊಸ ಚೈತನ್ಯ ನೀಡಬಹು ದಾಗಿದೆ. ಸ್ಥಳೀಯ ಮಟ್ಟದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಿ ಪರಿಹರಿಸಿಕೊಳ್ಳಬೇಕು, ಬಹಿರಂಗವಾಗಿ ಸುಮಾರು ಸಾರಬಾರದು ಎಂದು ಸಲಹೆ ನೀಡಿದರು
ನಾಮನಿರ್ದೇಶಿತ ಸ್ಥಾನಗಳ ವಿಚಾರದಲ್ಲೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ವಿವಿಧ ಸಮುದಾಯಗಳ ಮುಖಂಡರಿಗೆ ಅವಕಾಶ ಕಲ್ಪಿಸುವಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮುಂದುವರಿಸಬೇಕು ಎಂದು ಅವರು ಹೇಳಿದರು.
ಅಹಿಂದ ಸಮುದಾಯ ಸೇರಿದಂತೆ ಎಲ್ಲ ವರ್ಗಗಳ ಕಾರ್ಯಕರ್ತರಿಗೆ ಸೂಕ್ತ ಪ್ರಾತಿನಿಧ್ಯ ದೊರೆಯುವಂತೆ ಶಾಸಕ ಪ್ರದೀಪ್ ಈಶ್ವರ್ ಕ್ರಮ ಕೈಗೊಳ್ಳಬೇಕು. ಪಕ್ಷದೊಳಗಿನ ಅಸಮಾಧಾನ ಗಳನ್ನು ಬದಿಗೊತ್ತಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದರೆ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಮಂಜುನಾಥ್ ತಿಳಿಸಿದರು.