ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ರೆಡ್ಡಿ ಆಯ್ಕೆ

ಸಂಘದ ಮೂಲಕ ರೈತರಿಗೆ ಹಾಗೂ ಸ್ತ್ರೀಶಕ್ತಿ ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಸಂಘದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ ಕೇವಲ ರೈತರ ಅಭಿವೃದ್ಧಿಯೇ ನಮ್ಮ ಉದ್ದೇಶವಾಗಿದೆ. ಈ ಬಾರಿ ಚುನಾವಣೆಗೆ ಕೆಲವರು ಮುಂದಾದರೂ, ರಾಜಕೀಯ ಬೆರೆಸದೆ ಅವಿರೋಧ ಆಯ್ಕೆ ಮಾಡ ಬೇಕೆಂಬ ಮನವಿಗೆ ಸದಸ್ಯರು ಸ್ಪಂದಿಸಿದ್ದು, ಮತ್ತೊಮ್ಮೆ ಅಧ್ಯಕ್ಷ–ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ.

ಚಿಕ್ಕಬಳ್ಳಾಪುರ: ತಾಲ್ಲೂಕಿನ ಜಾತವಾರ ಹೊಸಹಳ್ಳಿ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ವೆಂಕಟೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಯ್ಕೆಯ ಬಳಿಕ ಅಪಾರ ಸಂಖ್ಯೆಯಲ್ಲಿ ಹಾಜರಿದ್ದ ಬೆಂಬಲಿಗರು ನೂತನ ಪದಾಧಿಕಾರಿಗಳಿಗೆ ಹಾರ ಹಾಕಿ ಅಭಿನಂದನೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಬಿಜೆಪಿ ಮುಖಂಡ ಮರಳುಕುಂಟೆ ಕೃಷ್ಣಮೂರ್ತಿ ಅವರು, ಕಳೆದ ಇಪ್ಪತ್ತು ವರ್ಷಗಳಿಂದ ಸಂಘದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುತ್ತಾ ಬಂದಿದ್ದೇವೆ. ಸಂಘದ ಹಿರಿಯರ ಶ್ರಮದಿಂದ ಈ ಸಹಕಾರ ಸಂಘವು ಮೂರು–ನಾಲ್ಕು ಗ್ರಾಮ ಪಂಚಾಯಿತಿಗಳಿಗೆ ಸೇವೆ ಸಲ್ಲಿಸುತ್ತಿದ್ದು, ಆರ್ಥಿಕವಾಗಿ ಸದೃಢವಾಗಿರುವ ನಂಬರ್ ಒನ್ ಸಂಘವಾಗಿದೆ ಎಂದರು.

ಇದನ್ನೂ ಓದಿ: Chikkaballapur News: ಸಂವಿಧಾನದ ಆಶಯಗಳ ಈಡೇರಿಕೆ, ಸರಕಾರಿ ನೌಕರರ ಹೊಣೆ: ಜಿಲ್ಲಾಧಿಕಾರಿ ಜಿ.ಪ್ರಭು

ಸಂಘದ ಮೂಲಕ ರೈತರಿಗೆ ಹಾಗೂ ಸ್ತ್ರೀಶಕ್ತಿ ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಸಂಘದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ ಕೇವಲ ರೈತರ ಅಭಿವೃದ್ಧಿಯೇ ನಮ್ಮ ಉದ್ದೇಶವಾಗಿದೆ. ಈ ಬಾರಿ ಚುನಾವಣೆಗೆ ಕೆಲವರು ಮುಂದಾದರೂ, ರಾಜಕೀಯ ಬೆರೆಸದೆ ಅವಿರೋಧ ಆಯ್ಕೆ ಮಾಡಬೇಕೆಂಬ ಮನವಿಗೆ ಸದಸ್ಯರು ಸ್ಪಂದಿಸಿದ್ದು, ಮತ್ತೊಮ್ಮೆ ಅಧ್ಯಕ್ಷ–ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಎಲ್ಲರೂ ಸೇರಿ ಸಂಘವನ್ನು ಮಾದರಿ ಸಂಘವಾಗಿ ರೂಪಿಸಬೇಕಿದೆ ಎಂದು ತಿಳಿಸಿದರು.

ನೂತನ ಅಧ್ಯಕ್ಷ ಎಂ.ರೆಡ್ಡಿ ಮಾತನಾಡಿ, ಮರಳುಕುಂಟೆ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಅವಿರೋಧ ಆಯ್ಕೆಯ ಪರಂಪರೆ ಮುಂದುವರಿದಿದೆ. ದುಂದುವೆಚ್ಚ ತಪ್ಪಿಸಿ,ಎಲ್ಲ ಸದಸ್ಯರ ಪರಸ್ಪರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಸಂಘದ ಮೂಲಕ ರೈತರಿಗೆ ಸಾಲ ಸೌಲಭ್ಯ ಒದಗಿಸಿ, ಅವರ ಆರ್ಥಿಕ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸಂಘದ ಜಮೀನಿಗೆ ಕಾಂಪೌಂಡ್ ನಿರ್ಮಾಣ ಮಾಡುವ ಯೋಜನೆಯೂ ಇದೆ. ಸಂಘವನ್ನು ಲಾಭದಾಯಕ ದಾರಿಗೆ ಕರೆದೊಯ್ಯುವ ಜೊತೆಗೆ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲರ ವಿಶ್ವಾಸ ಉಳಿಸುವಂತೆ ಶಕ್ತಿ ಮೀರಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.