ಬಾಗೇಪಲ್ಲಿ: ಪಟ್ಟಣದ ಸುಂದರಯ್ಯ ಭವನದಲ್ಲಿ ಸಿಪಿಐಎಂ ಪಕ್ಷದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ ಅಂಗವಾಗಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ಪಿ.ಎಂ.ಮುನಿವೆಂಕಟಪ್ಪ ಮಾತನಾಡಿ, 'ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಇಡೀ ಜೀವನ ಸಮಾನತೆ, ಸ್ವಾತಂತ್ರ‍್ಯ ಕ್ಕಾಗಿ ಹೋರಾಡಿದ ಜೊತೆಗೆ ವಿಶ್ವದ ಉತ್ಕೃಷ್ಟ ಸಂವಿಧಾನ ರಚಿಸುವ ಮೂಲಕ ದೇಶದ ಪ್ರತಿ ಯೊಬ್ಬ ನಾಗರಿಕನಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಮಾನತೆ ಒದಗಿಸಿ ಕೊಟ್ಟಿದ್ದಾರೆ. ಇಂತಹ ಮಹಾನ್ ನಾಯಕರು ಸದಾ ಸ್ಮರಣೀಯರು' ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ಚನ್ನರಾಯಪ್ಪ, ರಘುರಾಮ ರೆಡ್ಡಿ,ಕೃಷ್ಣಪ್ಪ, ನಾಗರಾಜು, ಮುನಿಯಪ್ಪ, ಮುಸ್ತಫಾ, ಜಿ.ಕೃಷ್ಣಪ್ಪ ಹಾಗೂ ಇತರರು ಹಾಜರಿದ್ದರು.