Shidlaghatta News: 75 ವರ್ಷಗಳ ಪರಂಪರೆಯ ದೇವಾಲಯದಲ್ಲಿ ಮಹಾಶಿವರಾತ್ರಿ ವೈಭವ...
ಶಿವನ ಆರಾಧನೆ ಮಾನಸಿಕ ಶಾಂತಿ ಮತ್ತು ಆಧ್ಯಾತ್ಮಿಕ ತೃಪ್ತಿ ನೀಡುತ್ತದೆ. ಯುವಜನತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅಯೋಧ್ಯಾನಗರ ಶಿವಾಚಾರ ವೈಶ್ಯ ನಗರ್ಥ ಮಂಡಳಿ ಅಧ್ಯಕ್ಷ ಶಿವಶಂಕರ್ ಕರೆ ನೀಡಿದರು
-
ಶಿಡ್ಲಘಟ್ಟ: ಶಿವನ ಆರಾಧನೆ ಮಾನಸಿಕ ಶಾಂತಿ ಮತ್ತು ಆಧ್ಯಾತ್ಮಿಕ ತೃಪ್ತಿ ನೀಡುತ್ತದೆ. ಯುವಜನತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸ ಬೇಕು ಎಂದು ಅಯೋಧ್ಯಾನಗರ ಶಿವಾಚಾರ ವೈಶ್ಯ ನಗರ್ಥ ಮಂಡಳಿ ಅಧ್ಯಕ್ಷ ಶಿವಶಂಕರ್ ಕರೆ ನೀಡಿದರು.
ನಗರದ ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮಿಗಳ ವೃತ್ತದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಅಯೋಧ್ಯಾ ನಗರ ಶಿವಾಚಾರ ವೈಶ್ಯ ನಗರ್ಥ ಮಂಡಳಿ ವತಿಯಿಂದ ಆಯೋಜಿಸಿದ್ದ ವಿಶೇಷ ಪೂಜೆ ಹಾಗೂ ಅಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ: Mahashivratri 2026: ಮಲೆ ಮಹದೇಶ್ವರ ದೇವಾಲಯಕ್ಕೆ ಸಿಎಂ ಭೇಟಿ, ತಂದೆ ಎಚ್.ಡಿ. ದೇವೇಗೌಡರ ಜತೆ ಶಿವನ ದರ್ಶನ ಪಡೆದ ಎಚ್‌ಡಿಕೆ
ಸುಮಾರು 75 ವರ್ಷಗಳ ಪರಂಪರೆ ಹೊಂದಿರುವ ಈ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಂಟಿ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ, ಮಹಾಶಿವರಾತ್ರಿ ಹಬ್ಬವು ಭಕ್ತರ ಆತ್ಮಶುದ್ಧಿಗೆ ಹಾಗೂ ಸಮಾಜದಲ್ಲಿ ಧಾರ್ಮಿಕ ಜಾಗೃತಿಗೆ ಕಾರಣವಾಗುವ ಮಹತ್ವದ ದಿನವಾಗಿದೆ. ಶಿವನ ಆರಾಧನೆ ಮನಸ್ಸಿಗೆ ಶಾಂತಿ ಹಾಗೂ ಶಕ್ತಿ ನೀಡುತ್ತದೆ ಎಂದು ಹೇಳಿದರು.
ಸಂಜೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ ದೇವರಿಗೆ ವಿಶೇಷ ಹೂವಿನ ಅಲಂಕಾರ, ದೀಪೋ ತ್ಸವ ಹಾಗೂ ಜಾಗರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದರ್ಶನಾರ್ಥಿಗಳಿಗೆ ಪ್ರಸಾದ ವಿನಿಯೋಗದ ವ್ಯವಸ್ಥೆಯೂ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಖಜಾಂಚಿ ಸುರೇಶ್ ಬಾಬು, ಮೆಡಿಕಲ್ ಎಸ್. ಮಂಜುನಾಥ್, ಮುರಳಿ, ಮುನಿರಾಜು ಸೇರಿದಂತೆ ಸಂಘದ ಮುಖಂಡರು, ಪದಾಧಿಕಾರಿಗಳು ಹಾಗೂ ಅನೇಕ ಭಕ್ತರು ಉಪಸ್ಥಿತರಿದ್ದರು.