ಚಿಕ್ಕಬಳ್ಳಾಪುರ: ಮಕ್ಕಳಲ್ಲಿ ಜಂತುಹುಳು ಸೋಂಕು ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಅಡ್ಡಿಪಡಿಸಿ ರಕ್ತಹೀನತೆ, ಅಪೌಷ್ಟಿಕತೆ ಹಾಗೂ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಉಚಿತವಾಗಿ ಆಲ್ಬೆಂಡಜೋಲ್ ಮಾತ್ರೆಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿ ಕಾರಿ ಡಾ.ಚೇತನ್ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಸಂತ ಜೋಸೆಫರ ಕಾನ್ವೆಂಟ್ ಶಾಲೆ ಮತ್ತು ಕಾಲೇಜಿನಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಕ್ಕಳಿಗೆ ಆಲ್ಬೆಂಡಜೋಲ್ ಮಾತ್ರೆ ವಿತರಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Chikkaballapur News: ಎಲ್ಲರನ್ನೂ ಒಳಗೊಂಡ ಸಂಘಟನೆ ಕಟ್ಟಿದಾಗಲೇ ಸಾಮಾಜಿಕ ಬದಲಾವಣೆ ಸಾಧ್ಯ: ಕೋಟಿಗಾನಹಳ್ಳಿ ರಾಮಯ್ಯ
ವೈಯಕ್ತಿಕ ನೈರ್ಮಲ್ಯದ ಕೊರತೆ, ಅಶುದ್ಧ ನೀರು ಹಾಗೂ ಕಲುಷಿತ ಆಹಾರ ದಿಂದ ಜಂತುಹುಳು ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಲಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿಪೂರ್ವ ಕಾಲೇಜು ಗಳ ಮಕ್ಕಳಿಗೆ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಮಾತ್ರೆ ವಿತರಿಸುವುದ ರೊಂದಿಗೆ ಜಂತುಹುಳು ಸೋಂಕಿನ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಸಂತೋಷಬಾಬು, ಜಿಲ್ಲಾ ಶಿಕ್ಷಣಾಧಿಕಾರಿ ಜಿ.ಹರೀಶ್ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.