Chikkaballapur News: ಇ-ಖಾತೆ ಅಭಿಯಾನ ಸದ್ಬಳಕೆ ಮಾಡಿಕೊಳ್ಳಿ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮನವಿ
ಮೂರು ತಿಂಗಳ ಕಾಲ ಖಾತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಖಾತೆ ಮಾಡಿಸಿಕೊಳ್ಳಲು ಯಾವುದೇ ಮಧ್ಯವರ್ತಿಗಳನ್ನು ನಂಬಬೇಡಿ ನಂಬಿದಲ್ಲಿ ಮೋಸ ಹೋಗುತ್ತೀರಿ. ನೇರವಾಗಿ ಸಾರ್ವಜನಿಕರೇ ಪುರಸಭೆ ಕಚೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿ ಇ–ಖಾತಾ ಪಡೆದು ಕೊಳ್ಳ ಬೇಕು’ ಎಂದರು

ಅನಧಿಕೃತ ಸ್ವತ್ತುಗಳ (ಬಿ-ಖಾತಾ) ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ ಇ-ಖಾತಾ ಪಡೆಯಬಹುದಾಗಿದೆ' ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು.

ಬಾಗೇಪಲ್ಲಿ: ರಾಜ್ಯ ಸರ್ಕಾರದ ಆದೇಶದ ಮೇರೆಗೆ ಬಾಗೇಪಲ್ಲಿ ಪಟ್ಟಣದ ಪುರಸಭೆ ವ್ಯಾಪ್ತಿ ಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮ ಗಳಿಗೆ ತಿದ್ದುಪಡಿ ತರುತ್ತಿದೆ. ಇದರಿಂದ ಅನಧಿಕೃತ ಸ್ವತ್ತುಗಳ (ಬಿ–ಖಾತಾ) ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ ಇ–ಖಾತಾ ಪಡೆಯಬಹುದಾಗಿದೆ’ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು. ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಸೋಮವಾರ ಇ–ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಪಟ್ಟಣದ ವ್ಯಾಪ್ತಿಯಲ್ಲಿ ನಿವೇಶನ, ವಸತಿ ಕಟ್ಟಡ, ವಾಣಿಜ್ಯ ಕಟ್ಟಡಗಳು, ಮನೆಯ ಆಸ್ತಿಗಳು, ಖಾಲಿ ನಿವೇಶನ ಹೊಂದಿರುವವರು ದಾಖಲೆ ಸಮೇತ ಪುರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೂಡಲೇ ಇ–ಖಾತಾ ಮಾಡಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.
ಇದನ್ನೂ ಓದಿ: Chikkaballapur News: ಸಮರ್ಪಕ ಶಿಕ್ಷಣದಿಂದ ಮಾತ್ರ ಸರ್ವತೋಮುಖ ಸುಧಾರಣೆ ಸಾಧ್ಯ: ಸದ್ಗುರು ಶ್ರೀ ಮಧುಸೂಧನ ಸಾಯಿ
ಮೂರು ತಿಂಗಳ ಕಾಲ ಖಾತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಖಾತೆ ಮಾಡಿಸಿಕೊಳ್ಳಲು ಯಾವುದೇ ಮಧ್ಯವರ್ತಿಗಳನ್ನು ನಂಬಬೇಡಿ ನಂಬಿದಲ್ಲಿ ಮೋಸ ಹೋಗುತ್ತೀರಿ. ನೇರವಾಗಿ ಸಾರ್ವಜನಿಕರೇ ಪುರಸಭೆ ಕಚೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿ ಇ–ಖಾತಾ ಪಡೆದು ಕೊಳ್ಳಬೇಕು’ ಎಂದರು.
ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್ ಮಾತನಾಡಿ, ‘ಸ್ವತ್ತಿನ ಮಾಲೀಕರು ಪುರಸಭೆಗೆ ಭೇಟಿ ನೀಡಿ, ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ ಪತ್ರಗಳು, ಚಾಲ್ತಿ ಸಾಲಿನವರೆಗೆ ಕಂದಾಯ ಪಾವತಿ ರಶೀದಿ, ಋಣಭಾರ ಪ್ರಮಾಣ ಪತ್ರ ಹಾಗೂ ಮಾಲೀಕರ ಪೋಟೊ, ಆಧಾರ್ ಕಾರ್ಡ್ ಸಲ್ಲಿಸಿ ಇ–ಖಾತಾ ಪಡೆಯಬಹುದಾಗಿದೆ’ ಎಂದರು.
‘ಎ’ ರಿಜಿಸ್ಟರ್‌ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ಪಡೆಯಲು ಆಸ್ತಿಗೆ ಸಂಬಂಧಿ ಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು/ ದಾನಪತ್ರ/ ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕು ಪತ್ರಗಳು/ ಮಂಜೂರಾತಿ ಪತ್ರಗಳು/ಕಂದಾಯ ಇಲಾಖೆಯಿಂದ ೯೪ ಸಿ.ಸಿ ಅಡಿ ನೀಡಲಾದ ಹಕ್ಕು ಪತ್ರ, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಪೋಟೋ ಮತ್ತು ಸ್ವತ್ತಿನ ಜಿಪಿಎಸ್ ವಿವರದ ಪೋಟೋ ಹಾಗೂ ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ಎ.ಶ್ರೀನಿವಾಸ್, ಉಪಾಧ್ಯಕ್ಷ ಸುಜಾತ ನರಸಿಂಹ ನಾಯ್ಡು, ಪುರಸಭೆ ಸದಸ್ಯರಾದ ಎ.ನಂಜುAಡಪ್ಪ,ಜಬೀವುಲ್ಲಾ, ಸರೋಜ, ರೇಷ್ಮಾ ಬಾಬು, ಸುನಿತಾ, ಪದ್ಮಮಲ್ಲೇಶ್,ಸುಶೀಲಮ್ಮ, ಕರವೇ ಹರೀಶ್ ಸಿಬ್ಬಂದಿಗಳಾದ ಅತಾವುಲ್ಲಾ, ಕೃಷ್ಣಪ್ಪ, ಇತರರು ಇದ್ದರು.