ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಸಾಲ ನೀಡುವಾಗ ಬೆಳೆ ವಿಮೆಗೆ ರೈತರನ್ನು ಕಡ್ಡಾಯವಾಗಿ ಪ್ರೇರೇಪಿಸಿ: ಬ್ಯಾಂಕ್‌ಗಳಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ

ಜಿಲ್ಲಾಡಳಿತ ಭವನದಲ್ಲಿ ನಡೆದ ಬೆಳೆ ವಿಮೆ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, 2026-27ರ ಮುಂಗಾರು ಹಂಗಾಮಿಗೆ 80 ಸಾವಿರ ರೈತರನ್ನು ಬೆಳೆ ವಿಮೆ ಯೋಜನೆಯಡಿ ನೋಂದಾಯಿಸುವ ಗುರಿ ಇದ್ದರೂ, ಇದುವರೆಗೆ ಕೇವಲ 22406 ಪ್ರಸ್ತಾವನೆಗಳು ಮಾತ್ರ ದಾಖಲಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ: ವಿವಿಧ ಉದ್ದೇಶಗಳಿಗೆ ಕೃಷಿ ಮತ್ತು ತೋಟಗಾರಿಕಾ ಚಟುವಟಿಕೆಗಳಿಗಾಗಿ ರೈತರಿಗೆ ಸಾಲ ನೀಡುವಾಗ ಬೆಳೆ ವಿಮೆಯ ಮಹತ್ವವನ್ನು ವಿವರಿಸಿ, ಎಲ್ಲ ರೈತರನ್ನೂ ವಿಮೆ ವ್ಯಾಪ್ತಿಗೆ ತರಲು ಬ್ಯಾಂಕ್ ವ್ಯವಸ್ಥಾಪಕರು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಬೆಳೆ ವಿಮೆ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, 2026-27ರ ಮುಂಗಾರು ಹಂಗಾಮಿಗೆ 80 ಸಾವಿರ ರೈತರನ್ನು ಬೆಳೆ ವಿಮೆ ಯೋಜನೆಯಡಿ ನೋಂದಾಯಿಸುವ ಗುರಿ ಇದ್ದರೂ, ಇದುವರೆಗೆ ಕೇವಲ 22406 ಪ್ರಸ್ತಾವನೆಗಳು ಮಾತ್ರ ದಾಖಲಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಗೇಪಲ್ಲಿ ಮತ್ತು ಗೌರಿಬಿದನೂರು ಹೊರತುಪಡಿಸಿ ಉಳಿದ ತಾಲ್ಲೂಕುಗಳ ಕೃಷಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಗತಿ ಕುಂಠಿತಗೊಂಡಿದ್ದು, ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Chikkaballapur News: ರಾಮಪ್ಪ ಕೆರೆಯಲ್ಲಿ ಅಕ್ರಮ ಮಣ್ಣು ಸಾಗಣೆ ಆರೋಪ: ತಡೆಗೆ ಗ್ರಾಮಸ್ಥರ ಒತ್ತಾಯ

ಜಿಲ್ಲೆಯ ಬ್ಯಾಂಕ್‌ಗಳಿಂದ ಸಾಲ ಪಡೆದ ರೈತರಲ್ಲಿ ಕೇವಲ ಶೇ.0.6ರಷ್ಟು ರೈತರು ಮಾತ್ರ ಬೆಳೆ ವಿಮೆ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದ ಅವರು, ಸಾಲ ಪಡೆದಿರುವ ಹಾಗೂ ಮುಂದಿನ ದಿನಗಳಲ್ಲಿ ಸಾಲ ಪಡೆಯುವ ಎಲ್ಲ ರೈತರನ್ನು ವಿಮೆ ವ್ಯಾಪ್ತಿಗೆ ತರಲು ಲೀಡ್ ಬ್ಯಾಂಕ್ ಹಾಗೂ ಬ್ಯಾಂಕ್ ವ್ಯವಸ್ಥಾಪಕರು ವಿಶೇಷ ಗಮನಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಶೇ.80ರಷ್ಟು ಮಳೆಯ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆ ವಿಮೆ ಮಾಡಿಸಿಕೊಳ್ಳುವುದು ಅತ್ಯಗತ್ಯ ಎಂದು ಮನವಿ ಮಾಡಿದ ಜಿಲ್ಲಾಧಿಕಾರಿ, ಒಂದು ಎಕರೆ ರಾಗಿ ಬೆಳೆಗೆ ಕೇವಲ 399 ಪ್ರೀಮಿಯಂ ಪಾವತಿಸಿದರೆ ಬೆಳೆ ಹಾನಿಯ ಪ್ರಮಾಣಕ್ಕೆ ಅನುಗುಣವಾಗಿ 19960ರವರೆಗೆ ಪರಿಹಾರ ಪಡೆಯಬಹುದು ಎಂದು ತಿಳಿಸಿದರು.

ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿ ಗಳು ಹಾಗೂ ಧರ್ಮಸ್ಥಳ ಸ್ವಸಹಾಯ ಸಂಘಗಳ ಪ್ರತಿನಿಧಿಗಳನ್ನು ಸಂಪರ್ಕಿಸಿ ಹವಾಮಾನ ಆಧಾರಿತ ಹಾಗೂ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಶೀಘ್ರ ನೋಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕ ಅಬಿದ್, ತೋಟಗಾರಿಕೆ ಜಂಟಿ ನಿರ್ದೇಶಕ ದೇವರಾಜ್, ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿಗಳು ಹಾಗೂ ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರು ಹಾಜರಿದ್ದರು.