ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gudibande News: ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ಲಸಿಕೆ ಹಾಕಿಸಿ : ಡಾ.ಸುಬ್ರಮಣಿ

ಒಂದು ರಾಸುವಿನಿಂದ ಇನ್ನೊಂದಕ್ಕೆ ನೇರ ಸಂಪರ್ಕ ಹಾಗೂ ಗಾಳಿಯ ಮೂಲಕ ಹರಡುತ್ತದೆ. ಕಾಲು ಬಾಯಿ ಜ್ವರ ಎಲ್ಲ ಸೀಳು ಗೊರಸುಳ್ಳ ಪ್ರಾಣಿಗಳಾದ ದನ, ಎಮ್ಮೆ, ಹಂದಿ, ಕುರಿ, ಮೇಕೆ ಹಾಗೂ ಕಾಡು ಪ್ರಾಣಿಗಳಾದ ಜಿಂಕೆ, ಕಾಡೆಮ್ಮೆ ಮುಂತಾದ ಪ್ರಾಣಿಗಳಲ್ಲಿ ವೈರಾಣುವಿನಿಂದ ಬರುವ ಕಾಯಿಲೆ ಯಾಗಿದೆ

ಗುಡಿಬಂಡೆ: ತಾಲೂಕಿನ ಎಲ್ಲೆಡೆ ಮುನ್ನೆಚ್ಚರಿಕಾ ಕ್ರಮವಾಗಿ ರಾಸುಗಳಿಗೆ ಕಾಲುಬಾಯಿ ಜ್ವರ ಹಾಗೂ ಚರ್ಮಗಂಟು ರೋಗಗಳು ಹರಡದಂತೆ 8ನೇ ಸುತ್ತಿನ ಲಸಿಕಾ ಅಭಿಯಾನವನ್ನು ಕೈಗೊಳ್ಳ ಲಾಗಿದ್ದು ಹೈನುಗಾರರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಲು ಮುಂದಾಗ ಬೇಕು ಎಂದು ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸುಬ್ರಮಣಿ ಮನವಿ ಮಾಡಿದರು. 

ತಾಲೂಕಿನ ಚಿಕ್ಕತಮ್ಮನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ ಬಳಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ನಿ) ಗುಡಿಬಂಡೆ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಪುರಸ್ಕೃತ ಜಾನುವಾರು ರೋಗ ಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8ನೇ ಸುತ್ತಿನ ಕಾಲುಬಾಯಿ ಜ್ವರ ಮತ್ತು ಚರ್ಮಗಂಟು ರೋಗದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಒಂದು ರಾಸುವಿನಿಂದ ಇನ್ನೊಂದಕ್ಕೆ ನೇರ ಸಂಪರ್ಕ ಹಾಗೂ ಗಾಳಿಯ ಮೂಲಕ ಹರಡುತ್ತದೆ. ಕಾಲುಬಾಯಿ ಜ್ವರ ಎಲ್ಲ ಸೀಳು ಗೊರಸುಳ್ಳ ಪ್ರಾಣಿಗಳಾದ ದನ, ಎಮ್ಮೆ, ಹಂದಿ, ಕುರಿ, ಮೇಕೆ ಹಾಗೂ ಕಾಡು ಪ್ರಾಣಿಗಳಾದ ಜಿಂಕೆ, ಕಾಡೆಮ್ಮೆ ಮುಂತಾದ ಪ್ರಾಣಿಗಳಲ್ಲಿ ವೈರಾಣುವಿನಿಂದ ಬರುವ ಕಾಯಿಲೆಯಾಗಿದೆ ಎಂದರು. 

ಇದನ್ನೂ ಓದಿ: Gudibande News: ಪ್ರತೀ ತಿಂಗಳು ಬಗರ್ ಹುಕುಂ ಸಮಿತಿ ಸಭೆ ನಡೆಸಲು ಭೂ ಹಕ್ಕುದಾರರ ವೇದಿಕೆ ಆಗ್ರಹ

ಕಾಲುಬಾಯಿ ರೋಗ ತಡೆಗಟ್ಟಲು ಲಸಿಕೆ ಹಾಕುವುದೊಂದೇ ಮಾರ್ಗವಾಗಿದ್ದು, ಪ್ರತಿ 6 ತಿಂಗಳಿ ಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ರೈತರು ತಮ್ಮ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಆರ್ಥಿಕ ನಷ್ಟದಿಂದ ಪಾರಾಗಬೇಕು ಎಂದರು.

ಇದೇ ಸಮಯದಲ್ಲಿ ಕೊಚಿಮುಲ್ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕಿ ಡಾ.ನವ್ಯಶ್ರೀ ಜಾನುವಾರು ಗಳಿಗೆ ಆಗಿಂದಾಗ್ಗೆ ಕಾಲು ಬಾಯಿ ಜ್ವರ ಹಾಗು ಚರ್ಮ ಗಂಟು ರೋಗಗಳು ಹರಡುತ್ತಿರುತ್ತವೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಇದೇ ಮೊದಲ ಬಾರಿಗೆ ಒಂದೇ ಬಾರಿಗೆ ಎರಡೂ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಂಡಿದ್ದು, ಈ ಮೂಲಕ ಪಶುಗಳ ರೋಗ ನಿರೋಧಕ ಶಕ್ತಿ ದ್ವಿಗುಣಗೊಳಿಸುವುದರೊಂದಿಗೆ ಸಿಬ್ಬಂದಿ ಸಮಯ, ವೆಚ್ಚ ಉಳಿತಾಯಕ್ಕೂ ಶ್ರಮವಹಿಸಲಾಗುತ್ತಿದೆ ಎಂದರು.  

ಈ ವೇಳೆ ಕೊಚಿಮುಲ್ ಶಿಬಿರ ಕಚೇರಿಯ ಸಹಾಯಕ ವ್ಯವಸ್ಥಾಪಕ ಡಾ.ಸಂದೀಪ್, ಚಿಕ್ಕತಮ್ಮನ ಹಳ್ಳಿ ಹಾಲು ಉತ್ಪಾದಕರರ ಸಹಕಾರ ಸಂಘದ ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.