ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chinthamani News: ಮಾವಿನ ಬೆಲೆ ಕುಸಿತ:ಬೆಂಬಲ ಬೆಲೆಗೆ ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

ಸರ್ಕಾರ ಪ್ರಸ್ತುತ ಘೋಷಿಸಿರುವ ಟನ್‌ಗೆ 4,370 ರೂ.ಗಳ ಬೆಂಬಲ ಬೆಲೆ ತೀರಾ ಕಡಿಮೆಯಾಗಿದೆ. ರೈತರ ಹಿತದೃಷ್ಟಿಯಿಂದ ಕನಿಷ್ಠ 8,000 ರೂ. ದಿಂದ 12,000 ರೂ. ವರೆಗೆ ಬೆಂಬಲ ಬೆಲೆಯನ್ನು ಪರಿಷ್ಕರಿಸ ಬೇಕು ಎಂದು ಹೇಳಿದ ಅವರು ಮಾವು ಬೆಳೆಗಾರರಿಗೆ ವೈಜ್ಞಾನಿಕವಾಗಿ ಸೂಕ್ತ ಬೆಲೆ ಸಿಗುವಂತೆ ಮಾಡಲು ಉಭಯ ಜಿಲ್ಲೆಗಳ ಜಿಲ್ಲಾಡಳಿತ,ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳಬೇಕು

ಚಿಂತಾಮಣಿ: ಮಾವಿನ ಬೆಲೆ ತೀವ್ರವಾಗಿ ಕುಸಿದಿರುವುದರಿಂದ ರೈತರು ಕಂಗಾಲಾಗಿದ್ದು, ಸರ್ಕಾರ ತಕ್ಷಣವೇ ಸೂಕ್ತ ಬೆಂಬಲ ಬೆಲೆ ಘೋಷಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ರೈತ ಪ್ರಾಂತ ಸಂಘದ ಮುಖಂಡರಾದ ನಾರಾಯಣ ರೆಡ್ಡಿ,ರಾಜಕುಮಾರ್ ಮತ್ತು ಅಮರೇಂದ್ರ ಮಾತನಾಡಿದರು.

ತಾಲೂಕಿನಲ್ಲಿ ಸುಮಾರು 7,000 ರೈತರು 5,994 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆದಿದ್ದಾರೆ.ಆದರೆ ಪ್ರಸ್ತುತ ಜ್ಯೂಸ್ ತಯಾರಿಕೆಗೆ ಬಳಸುವ ತೋತಾಪುರಿ ಮಾವಿಗೆ ಕೇವಲ 5,000 ರೂ.ಹಾಗೂ ನೀಲಂ ತಳಿಗೆ 4,000 ರೂ.ಸಿಗುತ್ತಿದ್ದು,ಇದು ರೈತರ ವೆಚ್ಚಕ್ಕೂ ಸಾಲದಾಗಿದೆ.

ಇದನ್ನೂ ಓದಿ: Chinthamani News: ಸೌಹಾರ್ದತೆ ಮತ್ತು ಭಾವೈಕ್ಯತೆಯ ಸಂಕೇತ: ಸಡಗರದ ಮೊಹರಂ ಆಚರಣೆ

ಸರ್ಕಾರ ಪ್ರಸ್ತುತ ಘೋಷಿಸಿರುವ ಟನ್‌ಗೆ 4,370 ರೂ.ಗಳ ಬೆಂಬಲ ಬೆಲೆ ತೀರಾ ಕಡಿಮೆಯಾಗಿದೆ. ರೈತರ ಹಿತದೃಷ್ಟಿಯಿಂದ ಕನಿಷ್ಠ 8,000 ರೂ. ದಿಂದ 12,000 ರೂ. ವರೆಗೆ ಬೆಂಬಲ ಬೆಲೆಯನ್ನು ಪರಿಷ್ಕರಿಸಬೇಕು ಎಂದು ಹೇಳಿದ ಅವರು ಮಾವು ಬೆಳೆಗಾರರಿಗೆ ವೈಜ್ಞಾನಿಕವಾಗಿ ಸೂಕ್ತ ಬೆಲೆ ಸಿಗುವಂತೆ ಮಾಡಲು ಉಭಯ ಜಿಲ್ಲೆಗಳ ಜಿಲ್ಲಾಡಳಿತ,ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳಬೇಕು.

ಈ ಕುರಿತು ಈಗಾಗಲೇ ಜೂನ್ 9 ಹಾಗೂ 15 ರಂದು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಆದಷ್ಟು ಬೇಗ ಪ್ರಕ್ರಿಯೆಯನ್ನು ಚುರುಕುಗೊಳಿಸಿ ರೈತರಿಗೆ ನ್ಯಾಯ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಮುಖಂಡರು ಎಚ್ಚರಿಸಿದ್ದಾರೆ.