Bagepally News ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ
ಮಹಿಳೆ ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡು ಪುರುಷರಂತೆ ಎಲ್ಲ ರಂಗಳಲ್ಲೂ ಪ್ರಾಬಲ್ಯ ಸಾಧಿಸಬಳ್ಳಲು.ಇದನ್ನು ಸಾಬೀತು ಪಡಿಸುವ ಅವಕಾಶಗಳಿದ್ದರೂ ಕೆಲವರು ಸದ್ಭಳಕೆ ಮಾಡಿ ಕೊಳ್ಳುತ್ತಿಲ್ಲ. ಆದ್ದರಿಂದ ಮಹಿಳೆಯರನ್ನು ಒಟ್ಟುಗೂಡಿಸಿ ಅವರನ್ನು ಸಬಲರನ್ನಾಗಿ ಮಾಡುವ ಉದ್ದೇಶದಿಂದ ಯೋಜನೆಯ ಮೂಲಕ ಇಂತಹ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ

-

ಬಾಗೇಪಲ್ಲಿ: ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುತ್ತಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಬಿ.ಆರ್.ನರಸಿಂಹ ನಾಯ್ಡು ಹೇಳಿದರು.
ಬಾಗೇಪಲ್ಲಿ ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಧರ್ಮಸ್ಥಳ ಸಂಸ್ಥೆ ಆಯೋಜಿಸಿದ್ದ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮಿ ಪೂಜೆ ಹಾಗೂ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಮಹಿಳಾ ಸಬಲೀಕರಣ, ಗ್ರಾಮೀಣ ಅಭಿವೃದ್ಧಿಗೆ ಯೋಜನೆಗಳನ್ನು ನೀಡಿ ಸಮಾಜ ಸೇವೆ ಮಾಡುತ್ತಿದ್ದಾರೆ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್ ಮಾತನಾಡಿ, ಮಹಿಳೆ ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡು ಪುರುಷರಂತೆ ಎಲ್ಲ ರಂಗಳಲ್ಲೂ ಪ್ರಾಬಲ್ಯ ಸಾಧಿಸಬಳ್ಳಲು.ಇದನ್ನು ಸಾಬೀತು ಪಡಿಸುವ ಅವಕಾಶಗಳಿದ್ದರೂ ಕೆಲವರು ಸದ್ಭಳಕೆ ಮಾಡಿ ಕೊಳ್ಳುತ್ತಿಲ್ಲ. ಆದ್ದರಿಂದ ಮಹಿಳೆಯರನ್ನು ಒಟ್ಟುಗೂಡಿಸಿ ಅವರನ್ನು ಸಬಲರನ್ನಾಗಿ ಮಾಡುವ ಉದ್ದೇಶದಿಂದ ಯೋಜನೆಯ ಮೂಲಕ ಇಂತಹ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ: Chikkaballapur News: ಯಶಸ್ವಿಯಾಗಿ ನಡೆದ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕ ಸಂಘಟನೆಗಳ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ
ಜಿಲ್ಲಾ ನಿರ್ದೇಶಕ ಸಿ.ಎನ್.ಪ್ರಶಾಂತ್ ಮಾತನಾಡಿ,‘ದೇವರ ಆರಾಧನೆಯೊಂದಿಗೆ ನಾವು ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯದ ಸುಮಾರು ಎಪ್ಪತೈದು ಸಾವಿರ ಶಾಲೆಗಳಿಗೆ ಪೀಠೋಪಕರಣ, ಹೈನುಗಾರಿಕೆಯನ್ನು ಉತ್ತೇಜಿಸಲು 5 ಸಾವಿರ ಹಾಲಿನ ಉತ್ಪಾದಕರ ಸಹಕಾರ ಸಂಘಗಳಿಗೆ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಗಿದೆ. ಸಾವಿರಕ್ಕೂ ಹೆಚ್ಚು ಕೆರೆಗಳ ಅಭಿವೃದ್ಧಿ , ಸ್ವಸಹಾಯ ಸಂಘದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ , ಆರೋಗ್ಯ ರಕ್ಷಣೆಗೆ ವಿಶೇಷ ವಿಮಾ ಯೋಜನೆಗಳನ್ನು ನೀಡಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ 100ಕ್ಕೂ ಹೆಚ್ಚು ಮಹಿಳೆಯರು, ಕೈಯಲ್ಲಿ ಅರಿಶಿನ ಕುಂಕುಮ, ಪೂಜಾ ಸಾಮಾಗ್ರಿಗಳು, ನೈವೇದ್ಯ ಪದಾರ್ಥಗಳನ್ನು ಹಿಡಿದು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ತದನಂತರ ಪ್ರಸಾದ ವಿನಿಯೋಗ ನಡೆಯಿತು. ಈ ಸಂದರ್ಭದಲ್ಲಿ 35 ಕ್ಕೂ ಹೆಚ್ಚಿನ ವಿಧ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯರಾದ ಬಿಳ್ಳೂರು ನಾಗರಾಜು, ಬಿ.ಎ.ಬಾಬಾಜಾನ್,ನಾರಾಯಣ ಸ್ವಾಮಿ, ಪ್ರಬಂಧಕರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಿಟ್ಟೇ ಮರಿ ಸತೀಶ್, ಪುರಸಭೆ ಅದ್ಯಕ್ಷ ಎ. ಶ್ರೀನಿವಾಸ್ ಹಾಗೂ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸ್ವ ಸಹಾಯ ಗುಂಪುಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.