ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Massive fire at a plastic factory: ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ, ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಭಸ್ಮ!

ಘಟನೆ ಮಂಗಳವಾರ ಬೆಳಗಿನ ಜಾವ ಸುಮಾರು 6 ಗಂಟೆಯ ಸಮಯದಲ್ಲಿ ಚಿಂತಾಮಣಿ ನಗರದ ಟಿಪ್ಪುನಗರ ಬಡಾವಣೆಯಲ್ಲಿ ಸಂಭವಿಸಿದೆ. ಸದರಿ ಪ್ಲಾಸ್ಟಿಕ್ ಫ್ಯಾಕ್ಟರಿಯು ನಗರದ ಎಂ.ಜಿ. ರಸ್ತೆ ಯಲ್ಲಿರುವ ಫ್ರೆಂಡ್ಸ್ ಇಲಿಯಾಸ್ ಎಂಬುವರಿಗೆ ಸೇರಿದ್ದಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಫ್ಯಾಕ್ಟರಿಗೆ ವ್ಯಾಪಿ ಸಿದ್ದು, ಒಳಗಿದ್ದ ಅಪಾರ ಪ್ರಮಾಣದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ. ಇದರಿಂದ ಮಾಲಿಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಟಿಪ್ಪುನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಉರಿದ ಪ್ಲಾಸ್ಟಿಕ್ ಕಾರ್ಖಾನೆ!

-

Profile
Ashok Nayak Aug 18, 2026 6:21 PM

ಚಿಂತಾಮಣಿ: ನಗರದ ಟಿಪ್ಪುನಗರ ಬಡಾವಣೆಯ ಎಸ್.ಟಿ.ಪಿ.ರಸ್ತೆಯಲ್ಲಿರುವ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ನಡೆದಿದೆ.

ಘಟನೆ ಮಂಗಳವಾರ ಬೆಳಗಿನ ಜಾವ ಸುಮಾರು 6 ಗಂಟೆಯ ಸಮಯದಲ್ಲಿ ಚಿಂತಾಮಣಿ ನಗರದ ಟಿಪ್ಪುನಗರ ಬಡಾವಣೆಯಲ್ಲಿ ಸಂಭವಿಸಿದೆ. ಸದರಿ ಪ್ಲಾಸ್ಟಿಕ್ ಫ್ಯಾಕ್ಟರಿಯು ನಗರದ ಎಂ.ಜಿ. ರಸ್ತೆ ಯಲ್ಲಿರುವ ಫ್ರೆಂಡ್ಸ್ ಇಲಿಯಾಸ್ ಎಂಬುವರಿಗೆ ಸೇರಿದ್ದಾಗಿದೆ.

ಇದನ್ನೂ ಓದಿ: Bengaluru Metro fire: ಬೆಂಗಳೂರಿನ ನಾಗಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಬೆಂಕಿ ಅವಘಡ; ಆತಂಕದ ಸ್ಥಿತಿ ನಿರ್ಮಾಣ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಫ್ಯಾಕ್ಟರಿಗೆ ವ್ಯಾಪಿ ಸಿದ್ದು, ಒಳಗಿದ್ದ ಅಪಾರ ಪ್ರಮಾಣದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ. ಇದರಿಂದ ಮಾಲಿಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಲೋಕೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ