ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ, ಬೆಲೆ ಏರಿಕೆ ವಿರೋಧಿಸಿ ಬ್ಲಾಕ್ ಮತ್ತು ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ನಮ್ಮ ನೆರೆಹೊರೆ ದೇಶಗಳಲ್ಲಿ ನಡೆಯುವ ಯುದ್ಧ ಯುದ್ಧದಲ್ಲಿ ಭಾಗಿಯಾಗದ ತಟಸ್ಥ ದೇಶ ಗಳ ಮೇಲೂ ಪರಿಣಾಮ ಬೀರುತ್ತದೆ. ಎಲ್ಲ ಸಮಸ್ಯೆಗಳಿಗೂ ಯುದ್ಧವೇ ಪರಿಹಾರವಲ್ಲ. ಮಹಾತ್ಮ ಗಾಂಧೀಜಿ ಅವರು ತಿಳಿಸಿದ ಶಾಂತಿಯ ಮಾರ್ಗವನ್ನು ಅನುಸರಿಸಿದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ. ಹೀಗಾಗಿ ನಾವು ಗಾಂಧೀಜಿ ಅವರ ತತ್ವಗಳನ್ನು ವಿಶ್ವಕ್ಕೆ ತಿಳಿಸಬೇಕಾಗಿದೆ

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಅಡುಗೆ ಅನಿಲಬೆಲೆ ಏರಿಕೆ ಮತ್ತು ಸಿಲಿಂಡರ್‌ಗಳ ಅಕಾಲಿಕ ಬರವನ್ನು ನಿರ್ಮಾಣ ಮಾಡಿರುವ ಕೇಂದ್ರದ ನಡೆ ಖಂಡಿಸಿ ಶನಿವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. -

Ashok Nayak
Ashok Nayak Mar 14, 2026 10:20 PM

ಚಿಕ್ಕಬಳ್ಳಾಪುರ: ಅಡುಗೆ ಅನಿಲ ಬೆಲೆ ಏರಿಕೆ(Cooking gas price hike) ಮತ್ತು ಸಿಲಿಂಡರ್‌ ಗಳ ಅಕಾಲಿಕ ಬರವನ್ನು ನಿರ್ಮಾಣ ಮಾಡಿರುವ ಕೇಂದ್ರದ ನಡೆ ಖಂಡಿಸಿ ಶನಿವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ಬಿಬಿ ರಸ್ತೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಶನಿವಾರ ಆರಂಭವಾದ ಪ್ರತಿ ಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಗ್ಗದಿಂದ ಆಟೋ ಎಳೆಯುವ ಮೂಲಕ ತೈಲ ಬರದ ಬಗ್ಗೆ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾ ನಿರತರು ಕೆಲ ಕಾಲ ರಸ್ತೆ ತಡೆ ನಡೆಸಿದರಲ್ಲದೆ  ಮಾನವ ಸರಪಳಿ ನಿರ್ಮಿಸಿ ಕೇಂದ್ರದ ವಿರುದ್ಧ ಘೋಷಣೆ ಗಳನ್ನು ಕೂಗಿದರು.

ಬಳಿಕ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಸುಡು ಬಿಸಿಲಿನ ನಡುವೆಯೇ ರಸ್ತೆಯಲ್ಲಿ ಸೌದೆ ಒಲೆ ಇಟ್ಟು ಅಡುಗೆ ಮಾಡುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಅಸಹನೆ ಹೊರಹಾಕಿದರು.

ಇದನ್ನೂ ಓದಿ: Chikkaballapur News: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಜಿಲ್ಲಾಧಿಕಾರಿ ಜಿ.ಪ್ರಭು ಅಭಯ

ಈ ವೇಳೆ ರಾಜ್ಯ ಬೀಜ ನಿಗಮ ಮಂಡಳಿ ಅಧ್ಯಕ್ಷ ನಂದಿ ಎಂ.ಆಂಜಿನಪ್ಪ ಮಾತನಾಡಿ, ನಮ್ಮ ನೆರೆಹೊರೆ ದೇಶಗಳಲ್ಲಿ ನಡೆಯುವ ಯುದ್ಧ ಯುದ್ಧದಲ್ಲಿ ಭಾಗಿಯಾಗದ ತಟಸ್ಥ ದೇಶಗಳ ಮೇಲೂ ಪರಿಣಾಮ ಬೀರುತ್ತದೆ. ಎಲ್ಲ ಸಮಸ್ಯೆಗಳಿಗೂ ಯುದ್ಧವೇ ಪರಿಹಾರ ವಲ್ಲ. ಮಹಾತ್ಮ ಗಾಂಧೀಜಿ ಅವರು ತಿಳಿಸಿದ ಶಾಂತಿಯ ಮಾರ್ಗವನ್ನು ಅನುಸರಿಸಿದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ. ಹೀಗಾಗಿ ನಾವು ಗಾಂಧೀಜಿ ಅವರ ತತ್ವಗಳನ್ನು ವಿಶ್ವಕ್ಕೆ ತಿಳಿಸಬೇಕಾಗಿದೆ ಎಂದರು.

ಇಂತಹ ತುರ್ತಿನ ಸಂದರ್ಭದಲ್ಲಿಯೇ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಇನ್ನಷ್ಟು ದಿನಗಳ ಕಾಲ ಯುದ್ಧ ಮುಂದುವರಿದರೆ ಪೆಟ್ರೋಲ್, ಡೀಸೆಲ್ ಬೆಲೆಯೂ ಏರಿಕೆಯಾಗ ಲಿದೆ. ಇಂಧನ ಬೆಲೆ ಹೆಚ್ಚಳವಾದರೆ ಸರಕು ಸಾಗಣೆ ವೆಚ್ಚ ಅಧಿಕವಾಗಿ ಎಲ್ಲ ಪದಾರ್ಥಗಳು ದುಬಾರಿಯಾಗಲಿವೆ. ಇದು ಜನಸಾಮಾನ್ಯರಿಗೆ ಹೊರೆಯಾಗಲಿದೆ.ಕೂಡಲೇ ಕೇಂದ್ರ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದರು.

cbpm10aa

ಯುದ್ಧ ಆರಂಭವಾದರೆ ಪೆಟ್ರೋಲಿಯಂ ಉತ್ಪಗಳ ಕೊರತೆ ಉಂಟಾಗಲಿದೆ ಎಂಬುದು ಗೊತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ಮುನ್ನೆಚ್ಚರಿಕೆ ವಹಿಸಲಿಲ್ಲ. ಆಡಳಿತ ವೈಫಲ್ಯದಿಂದ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗಿದೆ. ಆಡಳಿತ ನಡೆಸಲು ವಿಫಲ ರಾಗಿರುವ ಮೋದಿ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ದರು.

ಕೇಂದ್ರ ಸರ್ಕಾರದ ಇಂತಹ ಜನವಿರೋಧಿ ನೀತಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ.ಅದಕ್ಕಾಗಿ ಇಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಪದೇ ಪದೇ ಇಂಧನ ಬೆಲೆಗಳನ್ನು ಏರಿಸುವ ಮೂಲಕ ಮಧ್ಯಮ ವರ್ಗ ಮತ್ತು ಬಡ ಜನರ ಮೇಲೆ ಭಾರೀ ಹೊರೆ ಹಾಕುತ್ತಿದೆ.ಯುಪಿಎ ಸರ್ಕಾರದ ಅವಧಿಯಲ್ಲಿ 350 ಇದ್ದ ಅಡುಗೆ ಅನಿಲದ ಬೆಲೆ ಈಗ ಸಾವಿರ ರೂಪಾಯಿಗೆ ತಲುಪಿದೆ. ಇದೇ ಜನತೆಗೆ ಕೇಂದ್ರ ನೀಡಿರುವ ಅಚ್ಚೇದಿನ್ ಕೊಡುಗೆ  ಎಂದು ಟೀಕಿಸಿದರು.

ಒಂದೆಡೆ ರಸಗೊಬ್ಬರಗಳ ಬೆಲೆ ಏರಿಕೆಯಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಕಾರ್ಮಿಕರು,ಬಡವರು ಹಾಗೂ ಮಧ್ಯಮ ವರ್ಗದ ಜನ ಜೀವನ ನಡೆಸಲೂ ಪರದಾಡು ತ್ತಿದ್ದಾರೆ. ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ.ಬದಲಾಗಿ ದೊಡ್ಡ ಕಾರ್ಪೊರೇಟ್ ಕಂಪನಿಗಳು ಮತ್ತು ಉದ್ಯಮಿಗಳ ಪರವಾಗಿ ಸರ್ಕಾರ ಕಾರ್ಯ ನಿರ್ವಹಿಸು ತ್ತಿದೆ. ಉದ್ಯೋಗ ಸೃಷ್ಟಿ ಮಾಡುವ ಭರವಸೆ ಕೂಡ ಈಡೇರಿಲ್ಲ. ಉದ್ಯೋಗ ಒದಗಿಸುವ ಮನರೇಗಾ ಯೋಜನೆಯಲ್ಲಿ ಬದಲಾವಣೆ ಮಾಡಿ ಗ್ರಾಮೀಣ ಜನರ ಉದ್ಯೋಗ ಖಾತ್ರಿ ಯನ್ನೇ ಕಿತ್ತುಕೊಳ್ಳಲಾಗುತ್ತಿದೆ ಎಂದು ಕೇಶವರೆಡ್ಡಿ ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಪಿ.ಬಚ್ಚೆಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್.ರಮೇಶ್,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗ ಭೂಷಣ್,  ರಕ್ಷಿತ್ ರೆಡ್ಡಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಬೇರ್ ಅಚ್ಚು,  ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ,ಹಿರಿಯ ಕಾಂಗ್ರೆಸ್ ಮುಖಂಡ ಲಾಯರ್ ನಾರಾಯಣಸ್ವಾಮಿ, ಅಡ್ಡಗಲ್ ಶ್ರೀಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೆಸ್ ಸೂರಿ, ಮಂಗಳ ಪ್ರಕಾಶ್, ಮಮತಾ ಮೂರ್ತಿ, ವೆಂಕಟರತ್ನ, ವೆಂಕಟಲಕ್ಷ್ಮಿ, ಹೇಮಲತಾ ಜನಾರ್ದನ್, ಟಿಎಪಿಸಿಎಂಎಸ್ ನಿರ್ದೇಶಕ ಬಿಸೇಗಾರಹಳ್ಳಿ ನಾಗೇಶ್, ನಗರಸಭೆ ಮಾಜಿ ಸದಸ್ಯರಾದ ಎಸ್.ಎಂ. ರಫೀಕ್, ನರಸಿಂಹ ಮೂರ್ತಿ, ಅಂಬರೀಷ್, ಅಣ್ಣಮ್ಮ, ಸಮ್ಮು, ಶಾಹಿದ್ ಅಬ್ಬಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಮೀಮ್, ಮುಖಂಡರಾದ ಸುಧಾ ವೆಂಕಟೇಶ್, ನಾರಾಯಣಮ್ಮ, ಅರವಿಂದ್, ಉಮೇಶ್ .ಜಿ,ವೆಂಕಟ್, ಪೆದ್ದಣ್ಣ,ವಿನಯ್ ಬಂಗಾರಿ, ಆಜಂ, ಬಾಬಾ ಜಾನ್ ಮತ್ತಿತರರು ಇದ್ದರು.