Chikkaballapur News: ಮೇ.31ರ ಪ್ರತಿಭಾ ಪೂರ್ವಭಾವಿ ಸಭೆ : ಸಮಿತಿಗಳಿಗೆ ಜವಾಬ್ದಾರಿ ಹಂಚಿಕೆ
ಪತ್ರಕರ್ತರ ಭವನದಲ್ಲಿ ಶುಕ್ರವಾರ ಜಿಲ್ಲಾ ಕೇಂದ್ರದ ಪತ್ರಕರ್ತರೊಂದಿಗೆ ಸಭೆ ನಡೆಸಿ ಇದೆ ತಿಂಗಳ 31ರಂದು ಭಾನುವಾರ ನಗರದ ಕನ್ನಡ ಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಂಘದ ಸದಸ್ಯರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.
ಪೂರ್ವಭಾವಿ ಸಭೆಯ ಚಿತ್ರ.. -
Ashok Nayak
May 22, 2026 8:17 PM
ಚಿಕ್ಕಬಳ್ಳಾಪುರ: ಪತ್ರಕರ್ತರ ಭವನದಲ್ಲಿ ಶುಕ್ರವಾರ ಜಿಲ್ಲಾ ಕೇಂದ್ರದ ಪತ್ರಕರ್ತರೊಂದಿಗೆ ಸಭೆ ನಡೆಸಿ ಇದೆ ತಿಂಗಳ 31ರಂದು ಭಾನುವಾರ ನಗರದ ಕನ್ನಡ ಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಂಘದ ಸದಸ್ಯರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.
ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ ರಾಜ್ಯ ಸಮಿತಿ ಸದಸ್ಯರಾದ ಎನ್. ಚಂದ್ರಶೇಖರ್, ಉಪಾಧ್ಯಕ್ಷ ಮುಬಾಷಿರ್ ಅಹ್ಮದ್, ಕಾರ್ಯದರ್ಶಿ ಆನಂದ್ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ಕಾರ್ಯಕಾರಿ ಮಂಡಳಿ ಸದಸ್ಯರು, ಜಿಲ್ಲಾ ಕೇಂದ್ರದ ಹಿರಿಯ ಪತ್ರಕರ್ತರು ಯುವ ಪತ್ರಕರ್ತರು ಉಪಸ್ಥಿತಿ ಇದ್ದರು.