ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಸರ್ಕಾರಿ ಶಾಲೆಗಳಿಗೆ ದಾನಿಗಳ ಸಂಖ್ಯೆ ಹೆಚ್ಚಾಗಲಿ: ಎಸ್‌.ಡಿ.ಎಂ.ಸಿ ಅಧ್ಯಕ್ಷ ನಂಜುಂಡಪ್ಪ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಮೂಲಕ ದಾನಿಗಳು ಮಕ್ಕಳ ಶಿಕ್ಷಣಕ್ಕೆ ಹೊಸ ಉತ್ಸಾಹ ತುಂಬುತ್ತಿದ್ದಾರೆ. ಇಂತಹ ಸೇವೆಗಳಿಂದ ವಿದ್ಯಾರ್ಥಿಗಳ ಕಲಿಕೆಗೆ ಉತ್ತೇಜನ ದೊರೆಯುವುದರ ಜೊತೆಗೆ ಪೋಷಕರ ಮೇಲಿನ ಆರ್ಥಿಕ ಹೊರೆ ಕೂಡ ಕಡಿಮೆಯಾಗುತ್ತದೆ.

ಸರ್ಕಾರಿ ಶಾಲೆಗಳಿಗೆ ದಾನಿಗಳ ಸಂಖ್ಯೆ ಹೆಚ್ಚಾಗಲಿ

ತಾಲೂಕಿನ ದಪ್ಪರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಡೆಲ್ ಟೆಕ್ನಾಲಜಿಸ್, ಹಾಗೂ ಯೂತ್ ಫಾರ್ ಸೇವಾ ಸಂಸ್ಥೆಯ ವತಿಯಿಂದ ಉಚಿತ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. -

Profile
Ashok Nayak Jul 13, 2026 10:40 AM

ಗುಡಿಬಂಡೆ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳ ಸಹಕಾರ ಅತ್ಯಂತ ಅಗತ್ಯವಾಗಿದ್ದು, ಇಂತಹ ಸಮಾಜಮುಖಿ ಕಾರ್ಯಗಳಿಗೆ ಇನ್ನಷ್ಟು ದಾನಿಗಳು ಮುಂದೆ ಬರಬೇಕು ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಂಜುಂಡಪ್ಪ ತಿಳಿಸಿದರು.

ತಾಲೂಕಿನ ದಪ್ಪರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಡೆಲ್ ಟೆಕ್ನಾಲಜಿಸ್, ಹಾಗೂ ಯೂತ್ ಫಾರ್ ಸೇವಾ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ದಲ್ಲಿ ಮಾತನಾಡಿದರು.

ಇದನ್ನೂ ಓದಿ: Gudibande News: ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಮಹತ್ವದ ಕೊಡುಗೆ ನೀಡಿದೆ: ಸಿ.ಮುನಿರಾಜು

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಮೂಲಕ ದಾನಿಗಳು ಮಕ್ಕಳ ಶಿಕ್ಷಣಕ್ಕೆ ಹೊಸ ಉತ್ಸಾಹ ತುಂಬುತ್ತಿದ್ದಾರೆ. ಇಂತಹ ಸೇವೆಗಳಿಂದ ವಿದ್ಯಾರ್ಥಿಗಳ ಕಲಿಕೆಗೆ ಉತ್ತೇಜನ ದೊರೆಯುವುದರ ಜೊತೆಗೆ ಪೋಷಕರ ಮೇಲಿನ ಆರ್ಥಿಕ ಹೊರೆ ಕೂಡ ಕಡಿಮೆಯಾಗುತ್ತದೆ. ಸಮಾಜದ ಅಭಿವೃದ್ಧಿಯಲ್ಲಿ ದಾನಿಗಳ ಪಾತ್ರ ಅಪಾರ ವಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇನ್ನಷ್ಟು ದಾನಿಗಳು ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡೆಲ್ ಟೆಕ್ನಾಲಜಿಸ್‌ ನ ಶ್ರೀನಾಥ್ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ನೆರವು ನೀಡುವುದು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿದ್ದು, ಭವಿಷ್ಯದಲ್ಲಿಯೂ ಶಿಕ್ಷಣ ಕ್ಷೇತ್ರಕ್ಕೆ ಸಹಕಾರ ಮುಂದುವರಿಸಲಾಗುವುದು. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಉತ್ತಮ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಯೂತ್ ಫಾರ್ ಸೇವಾ ಸಂಸ್ಥೆಯ ಸಂಯೋಜಕ ಹರೀಶ್, ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಡೆಲ್ ಟೆಕ್ನಾಲಜಿಸ್ ಮತ್ತು ಯೂತ್ ಫಾರ್ ಸೇವಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.