ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gauribidanur News: ಗುರುಪೂರ್ಣಿಮೆಯ ಅಂಗವಾಗಿ ಆಚಾರ್ಯ ಶಾಲೆಯಲ್ಲಿ ಅರ್ಥಪೂರ್ಣ ಅಕ್ಷರಾಭ್ಯಾಸ, ಗುರುವಂದನೆ

ಗುರುಪೂರ್ಣಿಮೆಯನ್ನು ವ್ಯಾಸಪೂರ್ಣಿಮೆ ಎಂದೂ ಕರೆಯಲಾಗುತ್ತದೆ. ಮಹರ್ಷಿವ್ಯಾಸರು ಮಹಾ ಭಾರತ ಸೇರಿದಂತೆ ಅನೇಕ ಅಮೂಲ್ಯ ಗ್ರಂಥಗಳ ಮೂಲಕ ಸಮಾಜಕ್ಕೆ ಜ್ಞಾನ ಮತ್ತು ಮಾರ್ಗದರ್ಶನ ನೀಡಿದ್ದು, ಅವರ ಆದರ್ಶಗಳು ಇಂದಿಗೂ ಎಲ್ಲರಿಗೂ ದಾರಿದೀಪವಾಗಿವೆ. ಇಂತಹ ಪವಿತ್ರ ದಿನದಂದು ಮಕ್ಕಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸ ಮಾಡಿಸಿರುವುದು ಸಂತಸದ ಸಂಗತಿಯಾಗಿದೆ.

ಗೌರಿಬಿದನೂರು: ನಗರದ ಆಚಾರ್ಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಗುರು ಪೂರ್ಣಿಮೆ ಅಂಗವಾಗಿ ಅಕ್ಷರಾಭ್ಯಾಸ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಭಕ್ತಿಭಾವ ಮತ್ತು ಸಂಭ್ರಮದಿಂದ ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಕೆ.ಬಿ. ಬಾಲಸುಬ್ರಮಣ್ಯಂ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ, ಗುರು ಪೂರ್ಣಿಮೆಯ ಶುಭಾಶಯಗಳನ್ನು ತಿಳಿಸಿದರು. ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಅತ್ಯುನ್ನತ ಸ್ಥಾನವಿದ್ದು, ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಮೌಲ್ಯ ಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Gauribidanur News: ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಗಳ ವಿತರಣೆ; ಹೆಸರು ಕೈಬಿಟ್ಟಿದ್ದರೆ ಮಾಹಿತಿ ನೀಡುವಂತೆ ಮನವಿ

ಗುರುಪೂರ್ಣಿಮೆಯನ್ನು ವ್ಯಾಸಪೂರ್ಣಿಮೆ ಎಂದೂ ಕರೆಯಲಾಗುತ್ತದೆ. ಮಹರ್ಷಿ ವ್ಯಾಸರು ಮಹಾಭಾರತ ಸೇರಿದಂತೆ ಅನೇಕ ಅಮೂಲ್ಯ ಗ್ರಂಥಗಳ ಮೂಲಕ ಸಮಾಜಕ್ಕೆ ಜ್ಞಾನ ಮತ್ತು ಮಾರ್ಗದರ್ಶನ ನೀಡಿದ್ದು, ಅವರ ಆದರ್ಶಗಳು ಇಂದಿಗೂ ಎಲ್ಲರಿಗೂ ದಾರಿದೀಪವಾಗಿವೆ. ಇಂತಹ ಪವಿತ್ರ ದಿನದಂದು ಮಕ್ಕಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸ ಮಾಡಿಸಿರುವುದು ಸಂತಸದ ಸಂಗತಿಯಾಗಿದೆ. ಅಕ್ಷರಾಭ್ಯಾಸ ಮಾಡಿದ ಮಕ್ಕಳು ವಿದ್ಯಾಭ್ಯಾಸದಲ್ಲಿ ಉನ್ನತ ಸಾಧನೆ ಮಾಡಿ ಕುಟುಂಬ ಹಾಗೂ ಶಾಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಅವರ ಶೈಕ್ಷಣಿಕ ಜೀವನಕ್ಕೆ ಶುಭಾರಂಭ ಮಾಡಲಾಯಿತು. ಪೋಷಕರು ಸಹ ಉತ್ಸಾಹದಿಂದ ಭಾಗವಹಿಸಿ ಮಕ್ಕಳ ಮೊದಲ ಅಕ್ಷರದ ಕ್ಷಣಕ್ಕೆ ಸಾಕ್ಷಿಯಾದರು. ಗುರುಪೂರ್ಣಿಮೆಯ ಮಹತ್ವವನ್ನು ಸಾರಿದ ಈ ಕಾರ್ಯಕ್ರಮವು ಮಕ್ಕಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ ಮತ್ತು ಉತ್ಸಾಹ ಮೂಡಿಸುವಲ್ಲಿ ಯಶಸ್ವಿಯಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ವಿ.ಸಿ. ಚಂದ್ರಶೇಖರ್, ಶಿಕ್ಷಕರಾದ ಆರ್. ಸರೋಜ, ಎ. ವರಲಕ್ಷ್ಮಿ, ಜಿ.ಆರ್. ಶಿಲ್ಪಾ, ಎಚ್.ಎನ್. ಗಾಯತ್ರಿದೇವಿ, ನಾಗಲತಾ, ಎಂ.ಎಲ್. ಮಂಜುಳಾ, ಭುವನೇಶ್ವರಿ, ಶ್ವೇತಾ, ಅಂಬಿಕಾ, ತಸ್ಲೀಮ್, ಹೇಮಾವತಿ, ಪೌಜಿಯಾ, ಅರ್ಬಿಯಾ, ರಾಘವೇಂದ್ರ ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.