ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಅರ್ಥಪೂರ್ಣವಾಗಿ ಡಾ.ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಅರ್.ಅಂಬೇಡ್ಕರ್ ಜಯಂತಿ  ಆಚರಣೆ : ತಹಸೀಲ್ದಾರ್ ಮನೀಷಾ ಮಹೇಶ್ ಎನ್ ಪತ್ರಿ

ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ್ ರಾಂ ಜನ್ಮ ದಿನಾಚರಣೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನ್ ರಾಂ ಜಯಂತಿಯನ್ನು ಏ.5ರಂದು ಹಾಗೂ ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು

ಅರ್ಥಪೂರ್ಣವಾಗಿ ಡಾ.ಬಿ.ಅರ್.ಅಂಬೇಡ್ಕರ್ ಜಯಂತಿ ಆಚರಣೆ

Profile Ashok Nayak Mar 28, 2025 11:46 AM

ಬಾಗೇಪಲ್ಲಿ: ಅರ್ಥಪೂರ್ಣವಾಗಿ ಡಾ.ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಅರ್. ಅಂಬೇಡ್ಕರ್ ಜಯಂತಿ  ಆಚರಣೆ ಮಾಡಲಾಗುವುದು ಎಂದು ತಹಸೀಲ್ದಾರ್ ಮನೀಷಾ ಮಹೇಶ್ ಎನ್ ಪತ್ರಿ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ್ ರಾಂ ಜನ್ಮ ದಿನಾಚರಣೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನ್ ರಾಂ ಜಯಂತಿಯನ್ನು ಏ.5ರಂದು ಹಾಗೂ ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳು ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತಮ ಅಂಕಗಳಿಸಿದ ಮಕ್ಕಳಿಗೆ ಪ್ರೋತ್ಸಾಹಿಕ ಬಹುಮಾನ ನೀಡುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur News: 3ನೇ ಬಾರಿ ಸರ್ವೆ ಮಾಡಲು ಫೀಲ್ಡಿಗೆ ಇಳಿದ ಅಧಿಕಾರಿಗಳು

ಇಬ್ಬರು ಮಹನೀಯರ ಜಯಂತಿಗಳ ಆಚರಣೆಯ ಸಂಬಂಧ ವಿವಿಧ ಕನ್ನಡ ಹಾಗೂ ಸಾಂಸ್ಕೃತಿಕ ಇಲಾಖೆಯ ವತಿಯಿಂದ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲು ಅಗತ್ಯ ಕ್ರಮ ವಹಿಸಬೇಕು ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಉಪಹಾರ ಹಾಗೂ ನೀರಿನ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದು ತಿಳಿಸಿದರು.

 ಶಿಷ್ಟಾಚಾರದ ಅನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಣ ಮಾಡಿ ಜನಪ್ರತಿನಿಧಿಗಳು ಹಾಗೂ ಮುಖಂಡರಿಗೆ ನೀಡಲಾಗುವುದು. ಜಯಂತಿಗಳ ಬಗ್ಗೆ ಕರಪತ್ರ, ಪೋಸ್ಟರ್, ಬ್ಯಾನರ್ ಹಾಗೂ ಪ್ಲೆಕ್ಸ್‍ಗಳನ್ನು ಮುದ್ರಿಸಲಾಗುವುದು. ಜಯಂತಿಗೆ ಭಾಗವಹಿಸುವವರಿಗೆ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಸಮುದಾಯದ ಮುಖಂಡರು ಮಾತನಾಡಿ, ಪಟ್ಟಣದಲ್ಲಿ    ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿಯನ್ನು ಬೇಗ ಪ್ರಾರಂಭಿಸಬೇಕು ಹಾಗೂ ಎಸ್‍ಸಿಪಿ ಹಾಗೂ ಟಿಎಸ್‍ಪಿ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆ ಆಗಬೇಕು. ಸರ್ಕಾರಿ ಶಾಲೆ, ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಯಂತಿಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ  ತಾಲ್ಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ , ಕಲ್ಯಾಣ ಇಲಾಖೆ ನಿರ್ದೇಶಕ ಶೇಷಾದ್ರಿ, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯ ನಾರಾಯಣ ರೆಡ್ಡಿ, ಬಿಇಓ ಎನ್. ವೆಂಕಟೇಶಪ್ಪ,ಕೃಷಿ ಇಲಾಖೆ ಲಕ್ಷ್ಮೀ, ವೆಂಕಟರಾಮ್, ಶಿವಪ್ಪ, ಆರಕ್ಷಕ ನಿರೀಕ್ಷಕ ಪ್ರಶಾಂತ ವರ್ಣಿ,ಶಿಕ್ಷಕರಾದ ಈಶ್ವರಪ್ಪ, ಆದಿನಾರಾಯಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.