ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣ ವಿಶ್ವಕರ್ಮ ಜಯಂತಿ ಆಚರಣೆ

ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಶಿಕ್ಷಕ ಚಂದ್ರಶೇಖರ್ ಮಾತನಾಡಿ, ವಿಶ್ವಕರ್ಮ ಸಮುದಾಯವು ಬುದ್ಧಿವಂತಿಕೆ, ದೂರದೃಷ್ಟಿ ಹಾಗೂ ವಿಶಿಷ್ಟ ಕೌಶಲ್ಯಕ್ಕೆ ಹೆಸರಾಗಿದ್ದು, ಚಿನ್ನ-ಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ವಿವಿಧ ಸಾಂಪ್ರದಾಯಿಕ ಕಸುಬುಗಳಲ್ಲಿ ಪರಿಣತಿ ಹೊಂದಿದೆ ಎಂದರು.

ಗುಡಿಬಂಡೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಶಿಕ್ಷಕ ಚಂದ್ರಶೇಖರ್ ಮಾತನಾಡಿ, ವಿಶ್ವಕರ್ಮ ಸಮುದಾಯವು ಬುದ್ಧಿವಂತಿಕೆ, ದೂರದೃಷ್ಟಿ ಹಾಗೂ ವಿಶಿಷ್ಟ ಕೌಶಲ್ಯಕ್ಕೆ ಹೆಸರಾಗಿದ್ದು, ಚಿನ್ನ-ಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ವಿವಿಧ ಸಾಂಪ್ರದಾಯಿಕ ಕಸುಬುಗಳಲ್ಲಿ ಪರಿಣತಿ ಹೊಂದಿದೆ ಎಂದರು.

ತಮ್ಮ ಕೌಶಲ್ಯದ ಮೂಲಕ ದೇಶದ ನಿರ್ಮಾಣ ಹಾಗೂ ಸಾಮಾಜಿಕ ಪ್ರಗತಿಗೆ ಮಹತ್ವದ ಕೊಡುಗೆ ನೀಡಿರುವ ಸಮುದಾಯದವರು, ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಉನ್ನತ ಸಾಧನೆಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Gudibande News: ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಆಂದೋಲನ: ತಹಶೀಲ್ದಾರ್ ಸಿಗ್ಬತ್ ಉಲ್ಲಾ

ತಹಸೀಲ್ದಾರ್ ಸಿಗ್ಬತ್ತುಲ್ಲಾ ಮಾತನಾಡಿ, ಕರಕುಶಲತೆಯ ಮೂಲಕ ದುಡಿಮೆಯನ್ನೇ ಯೋಗ ವನ್ನಾಗಿಸಿದ ವಿಶ್ವಕರ್ಮರು ದೇಶದ ಅಮೂಲ್ಯ ಆಸ್ತಿ. ದೇವಾಲಯಗಳ ವಿಶಿಷ್ಟ ವಾಸ್ತುಶೈಲಿ ಹಾಗೂ ಸೂಕ್ಷ್ಮ ಕೆತ್ತನೆಗಳು ವಿಶ್ವಕರ್ಮರ ಕಲಾ ನೈಪುಣ್ಯಕ್ಕೆ ಸಾಕ್ಷಿಯಾಗಿವೆ. ಅವರ ಕಲಾ ಪರಂಪರೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳ ಬೆಳವಣಿಗೆಗೂ ಕೊಡುಗೆ ನೀಡಿದೆ ಎಂದರು.

ಬಿಇಒ ಕಚೇರಿ ನೌಕರ ಹರ್ಷ ಮಾತನಾಡಿ, ಋಗ್ವೇದ ಸೇರಿದಂತೆ ಪುರಾಣಗಳಲ್ಲಿ ವಿಶ್ವಕರ್ಮರನ್ನು ಶ್ರೇಷ್ಠ ವಾಸ್ತುಶಿಲ್ಪಿ ಹಾಗೂ ಸೃಷ್ಟಿಕರ್ತನಾಗಿ ಉಲ್ಲೇಖಿಸಲಾಗಿದೆ. ಮನೆ, ಮಂದಿರಗಳ ನಿರ್ಮಾಣ ದಿಂದ ಶಿಲ್ಪ ಮತ್ತು ಕರಕುಶಲ ಕ್ಷೇತ್ರದವರೆಗೆ ಅವರ ಕೊಡುಗೆ ಅನನ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕೃಷಿ ಇಲಾಖೆಯ ಕೇಶವರೆಡ್ಡಿ, ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ವಿಶ್ವಕರ್ಮ ಸಂಘದ ಅಧ್ಯಕ್ಷ ಬ್ರಹ್ಮಾಚಾರಿ, ಕಾರ್ಯದರ್ಶಿ ವೀರಾಚಾರಿ, ಮುಖಂಡರಾದ ವೆಂಕಟರಮಣಚಾರಿ, ಅಣ್ಣಿ ಆಚಾರಿ, ವೆಂಕಟಾಚಲಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.