ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

K M Suresh: ಬಿಜೆಪಿ–ಜೆಡಿಎಸ್ ಮುಖಂಡರ ಸಭೆ; ಪದವೀಧರ ಮತದಾರರನ್ನು ಸಂಪರ್ಕಿಸಿ ಬೆಂಬಲ ಕ್ರೋಡೀಕರಿಸಲು ಕರೆ

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಗೆಲುವು ಸಾಧಿಸಲು ಎರಡೂ ಪಕ್ಷಗಳ ಮುಖಂಡರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪದವೀಧರ ಮತದಾರರನ್ನು ನೇರವಾಗಿ ಸಂಪರ್ಕಿಸಿ, ಅಭ್ಯರ್ಥಿಯ ಪರವಾಗಿ ಮತ ಯಾಚಿಸುವ ಮೂಲಕ ಮೈತ್ರಿಕೂಟದ ಬಲವನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.

ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಗೆಲುವಿಗೆ ಶ್ರಮಿಸೋಣ: ಮುಕ್ತ ಮುನಿಯಪ್ಪ

-

Profile
Ashok Nayak Oct 18, 2026 11:06 PM

ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ಕೆ.ಎಂ. ಸುರೇಶ್(K M Suresh) ಅವರನ್ನು ಗೆಲ್ಲಿಸಲು ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಕರೆ ನೀಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್(Dr K Sudhakar) ಅವರ ಮಾರ್ಗ ದರ್ಶನದಲ್ಲಿ, ತಿಪ್ಪೇನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾ ಯಿತಿಯ ಶ್ರೀ ಬಲಮುರಿ ಗಣಪತಿ ದೇವಾಲಯದ ಆವರಣದಲ್ಲಿ ಬಿಜೆಪಿ ಹಿರಿಯ ಮುಖಂಡ ಹಾಗೂ ಚಿಮುಲ್ ನಿರ್ದೇಶಕ ಕೆ.ವಿ. ನಾಗರಾಜ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ–ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: K M Suresh: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ : ಗುಬ್ಬಿಯಲ್ಲಿ ಮತದಾರರ ಸಭೆ

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಕೆ.ಎಂ.ಸುರೇಶ್ ಅವರ ಗೆಲುವು ಸಾಧಿಸಲು ಎರಡೂ ಪಕ್ಷಗಳ ಮುಖಂಡರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪದವೀಧರ ಮತದಾರರನ್ನು ನೇರವಾಗಿ ಸಂಪರ್ಕಿಸಿ, ಅಭ್ಯರ್ಥಿಯ ಪರವಾಗಿ ಮತ ಯಾಚಿಸುವ ಮೂಲಕ ಮೈತ್ರಿಕೂಟದ ಬಲವನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.

ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರನ್ನು ಭೇಟಿ ಮಾಡಿ, ಚುನಾವಣಾ ಪ್ರಚಾರದ ಕುರಿತು ಚರ್ಚಿಸಲಾಯಿತು. ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಸ್ಥಳೀಯ ಮಟ್ಟದಲ್ಲಿ ಸಂಘಟಿತ ಪ್ರಯತ್ನ ನಡೆಸುವಂತೆ ಮುಖಂಡರಿಗೆ ಕರೆ ನೀಡಲಾಯಿತು.

ಸಭೆಯಲ್ಲಿ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಎಸ್.ಆರ್.ಎಸ್. ದೇವರಾಜ್, ಒಬಿಸಿ ಮುಖಂಡ ರಂಗಪಣ್ಣ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಸೊಪ್ಪಹಳ್ಳಿ ಎನ್. ರಾಮಕೃಷ್ಣ, ಜೆಡಿಎಸ್ ತಾಲೂಕು ಕಾರ್ಯದರ್ಶಿ ಶಾಂತಮೂರ್ತಿ, ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ಮುಖಂಡರಾದ ಆನಂದ್, ಸುಂದರ್ ರೆಡ್ಡಿ, ದಿನೇಶ್, ಲಕ್ಷ್ಮೀ ನರಸಿಂಹಪ್ಪ, ಮುತ್ತರಾಯಪ್ಪ ಸೇರಿದಂತೆ ಬಿಜೆಪಿ–ಜೆಡಿಎಸ್ ಮುಖಂಡರು ಹಾಗೂ ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.