Chinthamani News: ಮುರುಗಮಲ್ಲ ಹೋಬಳಿ ಮಟ್ಟದ ಜೆಡಿಎಸ್ ಮುಖಂಡರ ಸಭೆ
ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ನೇತೃತ್ವ ದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಮುಖಂಡರು ಹಾಗೂ ಕಾರ್ಯಕರ್ತರಿಂದ ಸಲಹೆ ಸೂಚನೆಗಳನ್ನು ಪಡೆಯಲಾಯಿತು.
-
Ashok Nayak
Jul 13, 2026 8:40 PM
ಚಿಂತಾಮಣಿ: ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೂ ಸೇರಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಶಕ್ತಿಯುತವಾಗಿ ಸಂಘಟಿಸಲು ತಾಲೂಕಿನ ಮುರುಗಮಲ್ಲ ಹೋಬಳಿ ಮಟ್ಟದ ಮುಖಂಡರ ಸಭೆ ನಗರದ ಹೊರವಲಯದ ಜೆಕೆ ಭವನದಲ್ಲಿ ನಡೆಯಿತು.
ಈ ವೇಳೆ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ನೇತೃತ್ವ ದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಮುಖಂಡರು ಹಾಗೂ ಕಾರ್ಯಕರ್ತರಿಂದ ಸಲಹೆ ಸೂಚನೆಗಳನ್ನು ಪಡೆಯಲಾಯಿತು.
ಇದನ್ನೂ ಓದಿ: Chinthamani News: ವಯೋನಿವೃತ್ತ ವೆಂಕಟಚಲಪತಿ ಎನ್.ದಂಪತಿಗೆ ಗಣ್ಯರಿಂದ ಆತ್ಮೀಯ ಸನ್ಮಾನ
ಇದೇ ವೇಳೆ, ಮುರುಗಮಲ್ಲ ಹೋಬಳಿ ಮಟ್ಟದ ಸಮಿತಿಯನ್ನು ರಚಿಸುವ ಮೂಲಕ ಜೆಡಿಎಸ್ ಪಕ್ಷವನ್ನು ಸಂಘಟಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಗುಡೇ ಶ್ರೀನಿವಾಸರೆಡ್ಡಿ,ಮುಖಂಡರಾದ ದಿನ್ನಿಮಿಂದಹಳ್ಳಿ ಬೈರಾರೆಡ್ಡಿ,ಮಿಲ್ಟಿ ಶ್ರೀನಿವಾಸ್ ಇದ್ದರು.