ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜು.11ರಂದು ಜಿಲ್ಲೆಯಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ್: 5 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ ಗುರಿ: ನ್ಯಾ.ಟಿ.ಪಿ.ರಾಮಲಿಂಗೇಗೌಡ

ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುವುದರ ಜೊತೆಗೆ ನ್ಯಾಯಾಲಯಗಳಿಗೆ ಪದೇ ಪದೇ ಅಲೆದಾಡುವ ಅಗತ್ಯ ಇರುವುದಿಲ್ಲ. ಪರಸ್ಪರ ರಾಜಿಯಿಂದ ವಿವಾದಗಳು ಅಂತ್ಯಗೊಳ್ಳುವುದರಿಂದ ಸಂಬಂಧಗಳು ಉಳಿಯು ತ್ತವೆ, ವೈಮನಸ್ಸು ಮತ್ತು ಭಿನ್ನಾಭಿಪ್ರಾಯಗಳು ಕಡಿಮೆಯಾಗುತ್ತವೆ

5 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ ಗುರಿ

ಜು.11ರಂದು ಜಿಲ್ಲೆಯಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ನಡೆಯುತ್ತಿದ್ದು 5 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥದ ಗುರಿ ಹೊಂದಲಾಗಿದೆ ಎಂದು ನ್ಯಾ. ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು. -

Profile
Ashok Nayak Jul 2, 2026 8:59 PM

ಚಿಕ್ಕಬಳ್ಳಾಪುರ : ಜಿಲ್ಲೆಯ ಸಾರ್ವಜನಿಕರು ತಮ್ಮ ವ್ಯಾಜ್ಯಗಳನ್ನು ತ್ವರಿತವಾಗಿ, ಕಡಿಮೆ ವೆಚ್ಚದಲ್ಲಿ ಮತ್ತು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೇ ಜು.11ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಇಲ್ಲಿ ರಾಜಿ ಯಾಗಬಹುದಾದ ಪ್ರಕರಣಗಳಿರುವ ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಟಿ.ಪಿ.ರಾಮಲಿಂಗೇಗೌಡ  ಅವರು ಕರೆ ನೀಡಿದರು.

ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 50,306ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ ಬಹುತೇಕ ಪ್ರಕರಣಗಳನ್ನು ಈ ಬಾರಿಯ ಲೋಕ ಅದಾಲತ್‌ಗೆ ಗುರುತಿಸ ಲಾಗಿದೆ, ಈ ಪೈಕಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.

ಇದನ್ನೂ ಓದಿ: Lok Adalat: ಲೋಕ ಅದಾಲತ್‌ನಲ್ಲಿ ಪ್ರಕರಣಗಳಿಗೆ ಶೀಘ್ರ ಮುಕ್ತಿ ದೊರೆಯುತ್ತದೆ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಕಳವಳ

ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಉದ್ಯೋಗದಲ್ಲಿ ಪುನರ್‌ಸ್ಥಾಪನೆಗೆ ಸಂಬಂಧಿಸಿದ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನ ಮತ್ತು ಸೇವಾ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವಿದ್ಯುತ್ ಮತ್ತು ನೀರಿನ ಶುಲ್ಕ ಸಂಬಂಧಿತ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಪ್ರಕರಣ ಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಸಿವಿಲ್ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಸೇರಿದಂತೆ ರಾಜಿಯಾಗಬಹುದಾದ ವಿವಿಧ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ವಕೀಲರ ಸಹಕಾರದೊಂದಿಗೆ ಸಂಧಾನದ ಮೂಲಕ ಇತ್ಯರ್ಥಪಡಿಸ ಲಾಗುವುದು ಎಂದು ವಿವರಿಸಿದರು.

ವಿಚ್ಛೇದನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ ಕುಟುಂಬ ನ್ಯಾಯಾಲಯಗಳಲ್ಲಿನ ಇತರೆ ವೈವಾಹಿಕ ಪ್ರಕರಣಗಳನ್ನೂ ಸಹ ಪರಸ್ಪರ ಒಪ್ಪಂದದ ಮೂಲಕ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗುತ್ತದೆ. ನ್ಯಾಯಾಲಯದಲ್ಲಿ ಇನ್ನೂ ದಾಖಲಾಗದ ವ್ಯಾಜ್ಯ ಪೂರ್ವ ಪ್ರಕರಣ ಗಳನ್ನೂ ಲೋಕ ಅದಾಲತ್‌ನಲ್ಲಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದ್ದು, ಸಂಧಾನಕಾರರು ಸೂಚಿಸುವ ಪರಿಹಾರ ಎರಡೂ ಕಡೆಯವರಿಗೆ ಸಮ್ಮತವಾದರೆ ಮಾತ್ರ ರಾಜಿ ನಡೆಯುತ್ತದೆ ಎಂದು ಹೇಳಿದರು.

ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುವುದರ ಜೊತೆಗೆ ನ್ಯಾಯಾಲಯಗಳಿಗೆ ಪದೇ ಪದೇ ಅಲೆದಾಡುವ ಅಗತ್ಯ ಇರುವುದಿಲ್ಲ. ಪರಸ್ಪರ ರಾಜಿಯಿಂದ ವಿವಾದಗಳು ಅಂತ್ಯಗೊಳ್ಳುವುದರಿಂದ ಸಂಬಂಧಗಳು ಉಳಿಯುತ್ತವೆ, ವೈಮನಸ್ಸು ಮತ್ತು ಭಿನ್ನಾಭಿಪ್ರಾಯಗಳು ಕಡಿಮೆಯಾಗುತ್ತವೆ ಹಾಗೂ ಸಮಾಜ ದಲ್ಲಿ ಸೌಹಾರ್ದತೆ ಮತ್ತು ಶಾಂತಿಯ ವಾತಾವರಣ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ವರ್ಷಪೂರ್ತಿ ರಾಜಿ ಪಂಚಾಯಿತಿ ಹಾಗೂ ಮಧ್ಯಸ್ಥಿಕೆ ಕೇಂದ್ರಗಳ ಮೂಲಕ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗ ಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಸಾರ್ವಜನಿಕರು ಯಾವುದೇ ಸಮಸ್ಯೆ ಎದುರಾದಾಗ ಮೊದಲಿಗೆ ಸಂಬAಧಪಟ್ಟ ಇಲಾಖೆಯ ಸಕ್ಷಮ ಪ್ರಾಧಿಕಾರಗಳನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ಅಲ್ಲಿಯೂ ಸಮಸ್ಯೆ ಬಗೆಹರಿಯದಿದ್ದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಧ್ಯಸ್ಥಿಕೆ ಕೇಂದ್ರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಉಚಿತ ಕಾನೂನು ನೆರವು ಹಾಗೂ ಮಾರ್ಗದರ್ಶನ ಪಡೆಯಬಹುದು ಎಂದು ತಿಳಿಸಿದರು.

ಸಾರ್ವಜನಿಕರ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಮಾಧ್ಯಮಗಳ ಪಾತ್ರವೂ ಮಹತ್ವದ್ದಾಗಿದ್ದು, ಯಾವುದೇ ಇಲಾಖೆ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸದಿದ್ದರೆ ಅದರ ಬಗ್ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾಹಿತಿ ನೀಡುವಂತೆ ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿದರು.

ಜು.11ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಭಾಗವಹಿಸಲು ಇಚ್ಛಿಸುವ ಸಾರ್ವಜನಿಕರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಸಂಬಂಧಪಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ ಉಪಸ್ಥಿತರಿದ್ದರು.