ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಖಂಡಿಸಿ ಮನವಿ

ಸಂಘಟನೆಯ ಜಿಲ್ಲಾಧ್ಯಕ್ಷ ನಂದಿ ವಿನೋದ್ ಮಾತನಾಡಿ, ಹಿಂದೂ ಕಾರ್ಯಕರ್ತರನ್ನು ಗುರಿ ಯಾಗಿಸಿಕೊಂಡು ನಡೆದಿರುವ ಇಂತಹ ಘಟನೆಗಳು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುತ್ತವೆ. ಘಟನೆಗೆ ಸಂಬಂಧಿಸಿದವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಖಂಡಿಸಿ ಮನವಿ

-

Profile
Ashok Nayak Sep 28, 2026 8:13 PM

ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಹಿಂದೂ ಸಂಘಟನೆ(Hindu organization)ಗಳ ಕಾರ್ಯಕರ್ತರ ಮೇಲೆ ನಡೆದ ದಾಳಿಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗೃತಿ ವೇದಿಕೆ ವತಿಯಿಂದ ಅಪರ ಜಿಲ್ಲಾಧಿಕಾರಿ ಡಾ.ಭಾಸ್ಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಆ.26ರಂದು ಬೆಂಗಳೂರಿನಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಕಾರ್ಯಕರ್ತರಾದ ಪುನೀತ್ ಕೆರೆಹಳ್ಳಿ, ಮುರಳಿ ಸೇರಿದಂತೆ ಕೆಲವರ ಮೇಲೆ ದಾಳಿ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ ಹಲ್ಲೆ ನಡೆಸಲಾಗಿದೆ ಎಂದು ವೇದಿಕೆ ಪದಾಧಿಕಾರಿಗಳು ಆರೋಪಿಸಿದರು.

ಇದನ್ನೂ ಓದಿ: Chikkaballapur News: ಸಮುದಾಯದ ಆರ್ಥಿಕ ಬಲವರ್ಧನೆಗೆ ಸಹಕಾರ ಸಂಘಗಳು ಅಗತ್ಯ: ಡಾ. ಸಿದ್ದಲಿಂಗಪ್ಪ

ಸಂಘಟನೆಯ ಜಿಲ್ಲಾಧ್ಯಕ್ಷ ನಂದಿ ವಿನೋದ್ ಮಾತನಾಡಿ, ಹಿಂದೂ ಕಾರ್ಯಕರ್ತರನ್ನು ಗುರಿ ಯಾಗಿಸಿಕೊಂಡು ನಡೆದಿರುವ ಇಂತಹ ಘಟನೆಗಳು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುತ್ತವೆ. ಘಟನೆಗೆ ಸಂಬಂಧಿಸಿದವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಹಿಂದೂ ಕಾರ್ಯಕರ್ತರಿಗೆ ಅಗತ್ಯ ರಕ್ಷಣೆ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಹಿಂದೂ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಂದಿ ವಿನೋದ್, ಸಾಮಾಜಿಕ ಜಾಲ ತಾಣ ಜಿಲ್ಲಾಧ್ಯಕ್ಷ ನಂದಿ ದೀಪಕ್, ಹರೀಶ್, ಮಂಜುನಾಥ್ ಗೌಡ, ಬ್ಯಾಂಕ್ ನಾರಾಯಣಸ್ವಾಮಿ, ಸಂದೀಪ್, ಯಶವಂತ್, ವಿಶಾಲ್, ತೇಜಸ್, ವಿಕಾಸ್, ವಿಶ್ವಾಸ್, ಸಾಮರ್ಥ್, ಕಾರ್ತಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.