ಚಿಂತಾಮಣಿ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್(K M Suresh) ಪರ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ(EX MLA J K Krishna Reddy) ಹಾಗೂ ಜೆಡಿಎಸ್–ಬಿಜೆಪಿ ಕಾರ್ಯಕರ್ತರು ಚಿಂತಾಮಣಿ ನ್ಯಾಯಾಲಯದ ವಕೀಲರನ್ನು ಭೇಟಿ ಮಾಡಿ ಬೆಂಬಲ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆ.ಕೆ. ಕೃಷ್ಣಾರೆಡ್ಡಿ, ಚಿಂತಾಮಣಿಯಲ್ಲಿ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ 15 ಎಕರೆ ಜಮೀನು ಮಂಜೂರಾಗಿರುವುದನ್ನು ಸ್ಮರಿಸಿದರು. ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಲಯದ ಕಟ್ಟಡಕ್ಕಾಗಿ 20 ಎಕರೆ ಜಮೀನು ಕೋರಿ ಪ್ರಯತ್ನ ನಡೆಸಲಾಗಿತ್ತು.
ಇದನ್ನೂ ಓದಿ: Chinthamani Crime News: ಚಿಂತಾಮಣಿಯಲ್ಲಿ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ: ಚಿಕಿತ್ಸೆ ಫಲಿಸದೆ ಸಾವು
ವಿವಿಧ ಆಡಳಿತಾತ್ಮಕ ಹಾಗೂ ತಾಂತ್ರಿಕ ಕಾರಣಗಳಿಂದ ನಿರೀಕ್ಷಿತ ಪ್ರಮಾಣದ ಜಮೀನು ಲಭ್ಯ ವಾಗಿರಲಿಲ್ಲ. ಅಂತಿಮವಾಗಿ 15 ಎಕರೆ ಜಮೀನು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಅವಕಾಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಹಿರಿಯ ವಕೀಲ ಶ್ರೀನಾಥ್, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ್ ರೆಡ್ಡಿ, ವಕೀಲ ರಾಜಾರಾಂ, ನಾ. ಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.