ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

K.H. Muniyappa: ಸಚಿವ ಕೆ.ಹೆಚ್.ಮುನಿಯಪ್ಪ ಜನ್ಮದಿನ: ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಜನರಿಗೆ ಉತ್ತಮ ಸಂದೇಶ ಸಾರಿದ್ದಾರೆ ಅವರು ಯಾವುದೇ ರೀತಿಯ ತಾರತಮ್ಯವಿಲ್ಲದೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿ ಜನಪ್ರಿಯತೆಯನ್ನು ಗಳಿಸಿದ್ದಾರೆ. ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಪ್ಯಾಕೇಜ್‌ಗಳನ್ನು ತರಲು ಸಹ ಕಾರಣರಾಗಿದ್ದಾರೆ

ಸಚಿವ ಮುನಿಯಪ್ಪ ಜನ್ಮದಿನ: ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಸಾಮಾಜಿಕ ಕಳಕಳಿ ತೋರಿಸಿ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. -

Ashok Nayak
Ashok Nayak Mar 7, 2026 11:06 PM

ಚಿಕ್ಕಬಳ್ಳಾಪುರ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ(K.H. Muniyappa) ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಸಾಮಾಜಿಕ ಕಳಕಳಿ ತೋರಿಸಿ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಜಿಲ್ಲಾ ಮಾದರ ಮಹಾಸಭೆಯ ಜಿಲ್ಲಾಧ್ಯಕ್ಷ ಪಟ್ರೇನಹಳ್ಳಿ ಕೃಷ್ಣ ಅವರ ನೇತೃತ್ವದಲ್ಲಿ ಆಯೋಜಿಸ ಲಾಯಿತು.

bpm13l

ಈ ವೇಳೆ ಪಟ್ರೇನಹಳ್ಳಿ ಕೃಷ್ಣ ಮಾತನಾಡಿ,ಸಚಿವ ಕೆ.ಹೆಚ್. ಮುನಿಯಪ್ಪ ಅವರ ಸುದೀರ್ಘ ರಾಜಕೀಯ ಅನುಭವ ಎಲ್ಲರಿಗೂ ಮಾದರಿ. ಅವರು ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ,ಶಾಂತಿ ಮತ್ತು ಸಹಭಾಗಿತ್ವವನ್ನು ಪ್ರಮುಖವಾಗಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ.

ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದು ಜನರಿಗೆ ಉತ್ತಮ ಸಂದೇಶ ಸಾರಿದ್ದಾರೆ ಅವರು ಯಾವುದೇ ರೀತಿಯ ತಾರತಮ್ಯವಿಲ್ಲದೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿ ಜನಪ್ರಿಯತೆಯನ್ನು ಗಳಿಸಿದ್ದಾರೆ. ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಪ್ಯಾಕೇಜ್‌ಗಳನ್ನು ತರಲು ಸಹ ಕಾರಣರಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: CHIMUL: ಯುಗಾದಿ ಹಬ್ಬದ ಉಡುಗೊರೆಯಾಗಿ ಲೀ.50 ಪೈಸೆ ಹೆಚ್ಚಿಸಿ ಸಿಹಿ ಸುದ್ದಿ ನೀಡಿದ ಚಿಮುಲ್

ಇನ್ನೂ ಅವರು ತಾಯಿಯಂತೆಯೇ ಮೃದು ಮನಸ್ಸಿನ ಹಾಗೂ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದು, ಅವರ ಹುಟ್ಟುಹಬ್ಬದ ಅಂಗವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಗಿದೆ ಎಂದು ಹೇಳಿದರು.

ಹಿರಿಯ ಕಾಂಗ್ರೆಸ್ ಮುಖಂಡ ಲಾಯರ್ ನಾರಾಯಣಸ್ವಾಮಿ ಮಾತನಾಡಿ, ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ(Food Minister K.H. Muniyappa) ಅವರು ರೈತ ಕುಟುಂಬದಲ್ಲಿ ಜನಿಸಿ ರಾಜಕೀಯ ಕ್ಷೇತ್ರಕ್ಕೆ ಬಂದು ಸಂಸದರಾಗಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿದ್ದಾರೆ. ತಮ್ಮ ಜವಾಬ್ದಾರಿಗಳನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿರುವ ಅವರು ಜನರ ವಿಶ್ವಾಸವನ್ನು ಗಳಿಸಿದ್ದಾರೆ.

ಅವರೊಂದಿಗೆ ನನಗೆ ಮೊದಲಿನಿಂದಲೂ ಉತ್ತಮ ಒಡನಾಟವಿದ್ದು, ದೇವರು ಅವರಿಗೆ ಇನ್ನಷ್ಟು ಸಾರ್ವಜನಿಕ ಸೇವೆ ಮಾಡಲು ಅವಕಾಶ ನೀಡಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಹನುಮಂತಪ್ಪ,ಕಿಸಾನ್ ಕಾಂಗ್ರೆಸ್‌ನ ಕೃಷ್ಣಪ್ಪ, ಮಂಚನಬೆಲೆ ಇಸ್ಮಾಯಿಲ್, ವೆಂಕಟಲಕ್ಷ್ಮಮ್ಮ,ಬಾಬಾ ಜಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.