MLA B N Ravikumar: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಎನ್‌ಡಿಎ ಮುಖಂಡರ ಸಭೆ: ಸಂಘಟಿತ ಹೋರಾಟಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಕರೆ
ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಪ್ರಯತ್ನಗಳು ನಿರ್ಣಾ ಯಕ ಪಾತ್ರ ವಹಿಸುತ್ತವೆ. ಅಭ್ಯರ್ಥಿ ಕೆ.ಎಸ್. ಸುರೇಶ್ ಅವರ ಪರವಾಗಿ ಪರಿಣಾಮ ಕಾರಿಯಾಗಿ ಪ್ರಚಾರ ನಡೆಸಿ, ಪದವೀಧರ ಮತದಾರರನ್ನು ನೇರವಾಗಿ ಸಂಪರ್ಕಿಸಬೇಕು. ಚುನಾವಣೆಯ ಮಹತ್ವ ತಿಳಿಸುವುದರ ಜತೆಗೆ ಅಭ್ಯರ್ಥಿಯ ಪರವಾಗಿ ಬೆಂಬಲ ಕೋರಿ, ಮತದಾರರ ವಿಶ್ವಾಸ ಗಳಿಸಲು ಎಲ್ಲರೂ ಶ್ರಮಿಸಬೇಕು
-
ಶಿಡ್ಲಘಟ್ಟ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಪರವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಮತದಾರರನ್ನು ತಲುಪುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್(MLA B N Ravikumar) ಕರೆ ನೀಡಿದರು.
ತಾಲೂಕಿನ ಹಂಡಿಗನಾಳ ಗ್ರಾಮದ ಬಾಲಾಜಿ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಎನ್‌ಡಿಎ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಮತ್ತು ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.
ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಪ್ರಯತ್ನಗಳು ನಿರ್ಣಾ ಯಕ ಪಾತ್ರ ವಹಿಸುತ್ತವೆ. ಅಭ್ಯರ್ಥಿ ಕೆ.ಎಸ್. ಸುರೇಶ್ ಅವರ ಪರವಾಗಿ ಪರಿಣಾಮ ಕಾರಿಯಾಗಿ ಪ್ರಚಾರ ನಡೆಸಿ, ಪದವೀಧರ ಮತದಾರರನ್ನು ನೇರವಾಗಿ ಸಂಪರ್ಕಿಸಬೇಕು. ಚುನಾವಣೆಯ ಮಹತ್ವವನ್ನು ತಿಳಿಸುವುದರ ಜತೆಗೆ ಅಭ್ಯರ್ಥಿಯ ಪರವಾಗಿ ಬೆಂಬಲ ಕೋರಿ, ಮತದಾರರ ವಿಶ್ವಾಸ ಗಳಿಸಲು ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.
ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ, ಚುನಾ ವಣಾ ಪ್ರಚಾರದ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಪ್ರತಿ ಮತದಾರರನ್ನು ತಲುಪುವ ಉದ್ದೇಶದಿಂದ ಕಾರ್ಯಯೋಜನೆ ರೂಪಿಸಿಕೊಂಡು ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: Shidlaghatta News: ಮಹನೀಯರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಕರ್ತವ್ಯ: ಶ್ರೀಕಾಂತ್
ಸಭೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರದ ಕಾರ್ಯತಂತ್ರ, ಮತದಾರರ ಸಂಪರ್ಕ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಂಘಟನೆ ಬಲಪಡಿಸುವ ಕುರಿತು ಚರ್ಚಿಸ ಲಾಯಿತು.
ಸಭೆಯಲ್ಲಿ ಸಂಸದ ಮಲ್ಲೇಶ್ ಬಾಬು, ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತಾ ಮುನಿಯಪ್ಪ, ಮಾಜಿ ಸಂಸದ ಮುನಿಸ್ವಾಮಿ, ಶಿವಶಂಕರ್, ರಾಮಲಿಂಗೇಗೌಡ, ಅಧ್ಯಕ್ಷ ವೆಂಕಟೇಶಪ್ಪ, ಬಂಕ್ ಮುನಿಯಪ್ಪ, ಕನಕಪ್ರಸಾದ್, ಶಿವಾರೆಡ್ಡಿ, ಡಾ. ಸತ್ಯನಾರಾಯಣ ರಾವ್, ಮಹಿಳಾ ಮೋರ್ಚಾ ಅಧ್ಯಕ್ಷೆ ಚಾತುರ್ಯ, ತಾಲೂಕು ಅಧ್ಯಕ್ಷ ಆನಂದಗೌಡ, ನಗರ ಘಟಕದ ದೇವರಾಜ್, ಅನುದಾನಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಗೋಪಿನಾಥ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿ: ಸೀಕಲ್ ರಾಮಚಂದ್ರಗೌಡ
ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹಾಗೂ ಜನರಿಗೆ ನೀಡಿರುವ ಭರವಸೆಗಳ ಅನುಷ್ಠಾನದ ಕುರಿತು ಮತದಾರರಿಗೆ ತಿಳಿಸುವ ಅಗತ್ಯವಿದೆ. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಬಿಜೆಪಿ ಸಿದ್ಧಾಂತಗಳನ್ನು ಪದವೀಧರ ಮತದಾರರಿಗೆ ತಲುಪಿಸುವ ಮೂಲಕ ಎನ್‌ಡಿಎ ಅಭ್ಯರ್ಥಿ ಪರವಾಗಿ ಬೆಂಬಲ ಕೋರಬೇಕು. ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಜವಾಬ್ದಾರಿಯನ್ನು ಅರಿತು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಕರೆ ನೀಡಿದರು.
ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಸ್.ಸುರೇಶ್
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಉದ್ದೇಶ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಅವರ ಆಶೋತ್ತರಗಳಿಗೆ ಧ್ವನಿಯಾಗುವುದಾಗಿದೆ. ಪದವೀ ಧರರ ಉದ್ಯೋಗಾವಕಾಶಗಳು, ಶಿಕ್ಷಣ ಕ್ಷೇತ್ರದ ಸಮಸ್ಯೆಗಳು ಮತ್ತು ಅವರ ಹಕ್ಕುಗಳ ಕುರಿತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಬದ್ಧನಾಗಿದ್ದೇನೆ. ಈ ನಿಟ್ಟಿನಲ್ಲಿ ಎನ್‌ಡಿಎ ಮುಖಂಡ ರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಬೆಂಬಲ ನೀಡಬೇಕು. ಪದವೀಧರ ಮತದಾರರನ್ನು ನೇರವಾಗಿ ಸಂಪರ್ಕಿಸಿ ತಮ್ಮ ಉದ್ದೇಶಗಳು ಹಾಗೂ ಕಾರ್ಯಯೋಜನೆಗಳನ್ನು ತಿಳಿಸುವ ಮೂಲಕ ಬೆಂಬಲ ಕೋರಲಾಗುವುದು ಎಂದು ಅಭ್ಯರ್ಥಿ ಕೆ.ಎಸ್. ಸುರೇಶ್ ಹೇಳಿದರು.