ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA B N Ravikumar: ಜನರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಲು ಶಾಸಕ ಬಿ.ಎನ್.ರವಿಕುಮಾರ್ ಸೂಚನೆ

ಬಶೆಟ್ಟಿಹಳ್ಳಿ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಶನಿವಾರ ತಾಲೂಕು ಆಡಳಿತದ ವತಿಯಿಂದ ನಡೆದ ‘ಪ್ರಜಾಸೇವೆ–ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುತ್ತಿದ್ದು, ಪಿಡಿಒಗಳು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಲಭ್ಯತೆ ಪರಿಶೀಲಿಸಬೇಕು ಎಂದರು.

ಶಿಡ್ಲಘಟ್ಟ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ಜನರಿಂದ ದೂರು ಬರುವವರೆಗೆ ಕಾಯದೆ, ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಪರಿಶೀಲಿಸಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್(MLA B N Ravikumar) ಸೂಚಿಸಿದರು.

ಬಶೆಟ್ಟಿಹಳ್ಳಿ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಶನಿವಾರ ತಾಲೂಕು ಆಡಳಿತದ ವತಿಯಿಂದ ನಡೆದ ‘ಪ್ರಜಾಸೇವೆ–ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುತ್ತಿದ್ದು, ಪಿಡಿಒಗಳು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಲಭ್ಯತೆ ಪರಿಶೀಲಿಸಬೇಕು ಎಂದರು.

ಇದನ್ನೂ ಓದಿ: MLA B N Ravikumar: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ ದೇಶ ಕಟ್ಟೋಣ: ಶಾಸಕ ಬಿ.ಎನ್.ರವಿಕುಮಾರ್

ಪಿಡಿಒ ಹಾಗೂ ಇಒಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜನರಿಗೆ ಸಮರ್ಪಕ ನೀರು ಪೂರೈಸಬೇಕು. ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳನ್ನು ಕಚೇರಿಗಳಲ್ಲಿ ಬಾಕಿ ಉಳಿಸದೆ ಸಾಮಾನ್ಯವಾಗಿ ಎಂಟು ದಿನಗಳೊಳಗೆ ಪರಿಹರಿಸಬೇಕು. ತಕ್ಷಣ ಸಾಧ್ಯವಾಗದ ಪ್ರಕರಣಗಳಿಗೆ ಗರಿಷ್ಠ 30 ದಿನಗಳೊಳಗೆ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರು.

ಕಂದಾಯ, ರೈತರ ಸಮಸ್ಯೆ, ನಕಾಶೆ ರಸ್ತೆಗಳು ಸೇರಿದಂತೆ ವಿವಿಧ ಅಹವಾಲುಗಳ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಾಧ್ಯವಾದಷ್ಟು ಸ್ಥಳೀಯ ಮಟ್ಟದಲ್ಲೇ ಪರಿಹಾರ ನೀಡಬೇಕು ಎಂದರು.

12cbpm6e_ok

ವಿಶೇಷಚೇತನರ ನೆರವಿಗಾಗಿ ಶಾಸಕರ ವಾರ್ಷಿಕ ಅನುದಾನದಲ್ಲಿ ಶೇ.10ರಷ್ಟು ಮೀಸಲಿದ್ದು, 2025–26ನೇ ಸಾಲಿನಲ್ಲಿ ರೂ.9 ಕೋಟಿಯಲ್ಲಿ ಸುಮಾರು ರೂ.90ಲಕ್ಷವನ್ನು ಕಲ್ಯಾಣಕ್ಕಾಗಿ ಬಳಸ ಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ಗಗನಸಿಂಧು, ಇಒ ಆರ್.ಹೇಮಾವತಿ, ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್, ಕೃಷಿ ಇಲಾಖೆಯ ರವಿ, ರೇಷ್ಮೆ ಇಲಾಖೆಯ ಅಕ್ಮಲ್ ಪಾಷ, ಸಿಡಿಪಿಒ ವಿದ್ಯಾ ವಸ್ತ್ರದ್, ಕಾವೇರಿ ಹ್ಯಾಂಡ್‌ಲೂಮ್ಸ್ ಅಧ್ಯಕ್ಷ ಜೈ ಗಣೇಶ್, ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.